Karnataka Weather: ಶೀತಗಾಳಿ ನಡುವೆಯೂ ರಾಜ್ಯದ ಹಲವು ಜಿಲ್ಲೆಗಳಲ್ಲಿ 5 ದಿನ ಭಾರೀ ಮಳೆ ಮುನ್ಸೂಚನೆ
Karnataka Weather: ಶೀತಗಾಳಿ ನಡುವೆಯೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಐದು ದಿನಗಳ ಕಾಲ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿಲ್ಲಿ ಇಂದು (ನವೆಂಬರ್ 17) ಬೆಳಗ್ಗೆ ಸೂರ್ಯ ಎಂಟ್ರಿ ಕೊಟ್ಟರೂ ಸಹ ಚಳಿ ವಾತಾವರಣ ಮುಂದುವರೆದಿದೆ. ನಗರದ ಹಲವೆಡೆ ಮೋಡ ಕವಿದ ವಾತಾವರಣ ಇದ್ದು, ಮಳೆಯಾಗುವ ಮುನ್ಸೂಚನೆ ಇದೆ. ಮುಂದಿನ ಹಲವು ದಿನಗಳ ಕಾಲ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಇದೀಗ ಚಳಿ ಆವರಿಸಿದ್ದು, ಈ ನಡುವೆಯೇ ಮುಂದಿನ ಮೂರು ದಿನ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕೆಲವೆಡೆ ಚಳಿ ನಡುವೆಯೂ ಮಳೆಯಾಗಿದೆ. ಇನ್ನೈ ಇಂದು ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದ್ದು, ದಕ್ಷಿಣ ಒಳನಾಡಿನ ಕೋಲಾರ, ಚಾಮರಾಜನಗರ, ಮೈಸೂರು ಮತ್ತು ರಾಮನಗರ ಜಿಲ್ಲೆಗಳ ಅಲ್ಲಲ್ಲಿ ಪ್ರತ್ಯೇಕವಾಗು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಮತ್ತೊಂದೆಡೆ ಬಳ್ಳಾರಿ, ಬೆಂಗಳೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಬೆಂಗಳೂರಿನ ಕೆಲವೆಡೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಹಾಗೂ 17 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಮಂಡ್ಯ, ಮೈಸೂರು, ಚಿಕ್ಕಮಗಳೂರು, ಉತ್ತರ ಕನ್ನಡ, ಹಾಸನ, ಕೊಡಗು ಜಿಲ್ಲೆಗಳ ಅಲ್ಲಲ್ಲಿ ಪ್ರತ್ಯೇಕವಾಗಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಮುನ್ಸೂಚನೆ ನೀಡಿದೆ.
ಈಗಾಗಲೇ ರಾಜ್ಯಾದ್ಯಂತ ತಾಪಾಮಾನ ಭಾರೀ ಕುಸಿತ ಆಗಿದ್ದು, ಎರಡು ದಿನ ಶೀತಗಾಳಿ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಇದೀಗ ರಾಜ್ಯದಲ್ಲಿ ಚಳಿ ಪ್ರಯಾಣ ತೀವ್ರಗೊಳ್ಳುತ್ತಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತಾಪಮಾನ ಭಾರಿ ಪ್ರಮಾಣದಲ್ಲಿ ಕುಸಿದಿದೆ. ಬೆಳಗ್ಗೆ ಹಾಗೂ ಸಂಜೆ ವೇಳೆ ಮಂಜು ಮುಸುಕಿದ ವಾತಾವರಣ ಕಂಡುಬರುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಕುಸಿಯಲಿದ್ದು, ಚಳಿ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ. ಅದರಲ್ಲೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.












Click it and Unblock the Notifications