Karnataka Weather: ರಾಜ್ಯದ ಹಲವು ಜಿಲ್ಲೆಗಳಲ್ಲಿ 6 ದಿನ ಭಾರೀ ಮಳೆ ಹಾಗೂ ಶೀತಗಾಳಿ ಹೆಚ್ಚಳದ ಮುನ್ಸೂಚನೆ
Karnataka Weather: ರಾಜ್ಯದಲ್ಲಿ ಶೀತಗಾಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಈ ನಡುವೆಯೇ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಆರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಮಳೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ನವೆಂಬರ್ 18) ಬೆಳಗ್ಗೆ ಮೋಡ ಕವಿದ ವಾತಾವರಣ ಇದ್ದು, ಶೀತಗಾಳಿ ಮುಂದುವರೆದಿದೆ. ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ನಗರದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಬೆಂಗಳೂರು ಸೇರಿದಂತೆ ಹಲವು ಜಿಲ್ಲಗಳಲ್ಲಿ ಭೀಕರ ಚಳಿ ನಡುವೆಯೂ ಮಳೆ ಬೀಳುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ಸದ್ಯ ಇದೀಗ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಶೀತಗಾಳಿ ಹೆಚ್ಚಾಗುತ್ತಿದೆ. ಅದರಲ್ಲೂ ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಶೀತಗಾಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ನೀಡಿದೆ.ಈ ನಡುವೆಯೇ ಮುಂದಿನ 6 ದಿನ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ತಿಳಿಸಿದೆ.
ಮಂಗಳವಾರ ಬೆಳಗ್ಗೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇದೆ. ಇನ್ನೂ ತಪಾಮಾನದ ವಿಚಾರಕ್ಕೆ ಬಂದರೆ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಮತ್ತು 17 ಡಿಗ್ರಿ ಸೆಲ್ಸಿಯಸ್‌ವರೆಗೂ ದಾಖಲಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಮುಂದಿನ ದಿನಗಳಲ್ಲಿ ತಾಪಮಾನ ಪ್ರಕಾಣ ಕುಸಿತ ಆಗುವ ಸಾಧ್ಯತೆ ಅಂತಲೂ ತಿಳಿಸಿದೆ.
ಮುಂದಿನ ಹಲವು ದಿನಗಳ ಕಾಲ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮತ್ತೊಂದೆಡೆ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಶಿವಮೊಗ್ಗ, ತುಮಕೂರು, ವಿಜಯನಗರ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಇನ್ನೂ ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕೊಪ್ಪಳ, ಕಲಬುರಗಿ, ಗದಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು, ಜೊತೆಗೆ ಶೀತಗಾಳಿಯೂ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸದೇಶವನ್ನು ರವಾನೆ ಮಾಡಿದೆ. ಈಗಾಗಲೇ ರಾಜ್ಯದಲ್ಲಿ ಶೀತಗಾಳಿ ಬೀಸುತ್ತಿದ್ದು, ಮುಂದಿನ ದಿನಗಳಲ್ಲಿ ಇದರ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.
ಭಾರೀ ಚಳಿಗಾಳಿ ಹಿನ್ನೆಲೆ ಮುಂಜಾಗ್ರತಾ ಕ್ರಮಗಳನ್ನು ವಹಿಸುವುದು ಉತ್ತಮ. ಚಿಕ್ಕ ಮಕ್ಕಳು ಹೊರಗಡೆ ಅಥವಾ ಶಾಲೆಗೆ ಹೋಗುವಾಗ ಅವರಿಗೆ ಹತ್ತಿ ಬಟ್ಟೆಯ ಟೋಪಿ, ಶ್ವೆಟರ್ ಹಾಕುವುದು ಉತ್ತಮ. ಯಾಕಂದ್ರೆ, ಈ ವೇಳೆಯೇ ಹೆಚ್ಚಾಗಿ ಚಿಕ್ಕಪುಟ್ಟ ಕೆಮ್ಮು, ನೆಗಡಿ, ಜ್ವರದಂತಹ ಖಾಯಿಗಳು ಬರುವುದು. ಆದ್ದರಿಂದ ಇವುಗಳು ಬರದಂತೆ ಮುಂಜಾಗ್ರತೆ ಕ್ರಮವಹಿಸುವುದು ಸೂಕ್ತ ಎಂದು ಹೇಳಲಾಗುತ್ತಿದೆ.












Click it and Unblock the Notifications