Karnataka Weather: ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಐಎಂಡಿ ಮುನ್ಸೂಚನೆ

Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಆಗಸ್ಟ್‌ 21ರ ವರೆಗೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಇರಲಿದೆ. ಮುಂದಿನ ಮೂರು ದಿನಗಳ ವರೆಗೆ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಸಾಧಾರಣ ಮಳೆ ಇರಲಿದೆ. ಉಳಿದಂತೆ ಹವಾಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ಮುನ್ಸೂಚನೆ ನೀಡಿದೆ.

ಆಗ್ನೇಯ ಜಾರ್ಖಂಡ್ ಮತ್ತು ನೆರೆಹೊರೆ ಪ್ರದೇಶಗಳಲ್ಲಿ ಕಡಿಮೆ ಒತ್ತಡದ ಪ್ರದೇಶ ಮತ್ತು ಪ್ರದೇಶವು ಅದೇ ಪ್ರದೇಶದಲ್ಲಿ ಮುಂದುವರೆದಿದೆ. ಸಂಬಂಧಿತ ಆವರ್ತನ ಪರಿಚಲನೆಯು ಸರಾಸರಿ ಸಮುದ್ರ ಮಟ್ಟಕ್ಕಿಂತ 4.5 ಕಿ.ಮೀ ವರೆಗೆ ವಿಸ್ತರಿಸಿದೆ. ಸರಾಸರಿ ಸಮುದ್ರ ಮಟ್ಟದಲ್ಲಿ ಮಾನ್ಸೂನ್ ತಗ್ಗು ಈಗ ಫಿರೋಜ್‌ಪುರ, ರೋಹಕ್, ಒರೆ, ಸಿಧಿ ಮೂಲಕ ಹಾದುಹೋಗುತ್ತದೆ. ಇದು ಆಗ್ನೇಯ ಜಾರ್ಖಂಡ್ ಮತ್ತು ನೆರೆಹೊರೆಗಳಲ್ಲಿ ಕಡಿಮೆ ಒತ್ತಡದ ಪ್ರದೇಶದ ಕೇಂದ್ರವಾಗಿದೆ ಮತ್ತು ಅಲ್ಲಿಂದ ಆಗ್ನೇಯಕ್ಕೆ ಪೂರ್ವಮಧ್ಯ ಬಂಗಾಳ ಕೊಲ್ಲಿಗೆ ಹಾದುಹೋಗುತ್ತದೆ. ವಾಯುವ್ಯ ಬಂಗಾಳ ಕೊಲ್ಲಿಯ ಮೇಲೆ ಸರಾಸರಿ ಸಮುದ್ರ ಮಟ್ಟಕ್ಕಿಂತ 5.8 ಮತ್ತು 7.6 ಕಿ.ಮೀ ನಡುವೆ ಮೇಲ್ಬಾಗದ ವಾಯುವ್ಯ ಆವರ್ತನ ಪರಿಚಲನೆ ಮುಂದುವರೆದಿದೆ. ಅಲ್ಲದೆ ಭಾರತದ ಮಧ್ಯ ಮತ್ತು ಪಕ್ಕದ ಉತ್ತರ ಪರ್ಯಾಯ ದ್ವೀಪದಲ್ಲಿ ಸರಿಸುಮಾರು 22°N ಉದ್ದಕ್ಕೂ ಶಿಯರ್ ವಲಯವು ಮುಂದುವರೆದಿದೆ ಮತ್ತು ಈಗ ಸರಾಸರಿ ಸಮುದ್ರ ಮಟ್ಟಕ್ಕಿಂತ 5.8 ಮತ್ತು 7.6 ಕಿ.ಮೀ ನಡುವೆ ಕಂಡುಬರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

Karnataka Weather

Karnataka Weather: 14 ರಾಜ್ಯಗಳಲ್ಲಿ ಮಳೆ ಆರ್ಭಟ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದ ವಿವಿಧ ಭಾಗಗಳು ಸೇರಿದಂತೆ ದಕ್ಷಿಣ ಭಾರತ ಹಾಗೂ ಉತ್ತರ ಭಾರತದ ಭಾಗದಲ್ಲಿ ಮಳೆ ಮುಂದುವರಿದಿದೆ. ಇದರ ಪರಿಣಾಮವಾಗಿ ಕರ್ನಾಟಕವೂ ಸೇರಿದಂತೆ ಭಾರತದ 14 ರಾಜ್ಯಗಳಲ್ಲಿ ಭಾರೀ ಮಳೆ ಇರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

Karnataka Weather: ಕರ್ನಾಟಕದ ಕರಾವಳಿಯಲ್ಲಿ ಮಳೆ

ಇನ್ನು ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆ ಇರಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ ಇರಲಿದೆ. ಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ.

Karnataka Weather: ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಮಳೆ

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮೀಣ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಗಾಳಿಯ ವೇಗವು 30 ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ. ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಾಳಿಯೊಂದಿಗೆ (40-50 ಕಿ.ಮೀ.) ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ (30-40 ಕಿ.ಮೀ.) ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ವಿಜಯಪುರ, ಕಲಬುರ್ಗಿ, ಬಾಗಲಕೋಟೆ, ರಾಯಚೂರು, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ (40-50 ಕಿ.ಮೀ.) ಬೀಸುವ ಸಾಧ್ಯತೆ ಇದೆ ಎಂದೂ ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

ಬೆಂಗಳೂರಲ್ಲಿ ಹೇಗಿದೆ ಆಗಸ್ಟ್‌ 16ರ ಹವಾಮಾನ ?

ಬೆಂಗಳೂರಲ್ಲಿ ಬಹುತೇಕ ಮೋಡ ಕವಿದ ವಾತಾವರಣವಿದೆ. ಮುಂದಿನ 24 ಗಂಟೆ ಅವಧಿಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು ಕೆಲವು ಪ್ರದೇಶಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್ ಹಾಗೂ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಅಲ್ಲದೆ ಮುಂದಿನ 48 ಗಂಟೆ ಅವಧಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮೋಡ ಕವಿದ ವಾತಾವರಣವಿರಲಿದೆ. ಕೆಲವು ಪ್ರದೇಶಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್ ಹಾಗೂ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದೂ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+