Karnataka Weather: ಕೆಲವೇ ಕ್ಷಣಗಳಲ್ಲಿ ಈ ಜಿಲ್ಲೆಗಳಿಗೆ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ

Karnataka Rain: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಿಲ್ಲದೆ ಜನರು ಬೇಸತ್ತು ಹೋಗಿದ್ದಾರೆ. ಮತ್ತೊಂದೆಡೆ ಕೆಲವೆಡೆ ಆಗಾಗ ಮಳೆರಾಯ ಅಬ್ಬರಿಸುತ್ತಿದ್ದರೂ ಕೂಡ ಮತ್ತೆ ಅದೇ ಆಡಿದ್ದೇ ಆಟ ಎಂಬಂತೆ ಬಿಸಿಲಿನ ಪ್ರಮಾಣ ಹೇಚ್ಚಾಗುತ್ತಲೇ ಇದೆ. ಇನ್ನು ಕೆಲವೆಡೆ ಸತತವಾಗಿ ಮಳೆಯಾಗಿ ಭೂಮಿ ತಂಪಾಗಿದೆ. ಇನ್ನು ಇಂದು (ಮೇ 11) ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಅಬ್ಬರದ ಮಳೆ ಸುರಿಯಲಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಬಿಸಿಲಿನ ಬೇಗೆಯಿಂದ ಬೆಂದಿದ್ದ ರಾಜಧಾನಿಗೆ ಮಳೆರಾಯ ಇದೀಗ ಸತತವಾಗಿ ಸಮಯ ಕೊಟ್ಟು ತಂಪೆರೆಯುತ್ತಲೇ ಇದ್ದಾನೆ. ಈ ಹಿನ್ನೆಲೆ ನಗರದ ಜನರು ಇದೀಗ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಇನ್ನು ಇಂದು ಕೂಡ (ಮೇ 11) ಬೆಳಗ್ಗೆಯೇ ಮೋಡ ಕವಿದಿದ್ದು, ಮಧ್ಯಾಹ್ನದ ವೇಳೆಗೆ ಬಿಸಿಲಿನ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

Karnataka Rain Heavy rain thunderstorm forecast for these districts in few moments

ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ, ಉತ್ತಡ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಗುಡುಗು ಸಹಿತ ಅಬ್ಬರದ ಮಳೆ ಸುರಿಯುವ ಸಾಧ್ಯತೆಯಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ.

ಈಗಾಗಲೇ ಬೆಂಗಳೂರು ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಮೈಸೂರು, ಕೊಡಗು, ಕೋಲಾರ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಈಗಲೂ ಕೂಡ ಕೆಲವೆಡೆ ಸತತವಾಗಿ ಬಿಟ್ಟು ಬಿಡದೇ ಆರ್ಭಟಿಸುತ್ತಲೇ ಇದ್ದಾನೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+