Karnataka Weather: ಬೆಂಗಳೂರು ಸೇರಿ ಕರ್ನಾಟಕದ ಈ ಭಾಗಗಳಲ್ಲಿ ಜೂನ್ 3ರ ವರೆಗೆ ಮಳೆ, ಯೆಲ್ಲೋ & ಆರೆಂಜ್ ಅಲರ್ಟ್

Karnataka Weather: ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಧಾರಾಕಾರ ಮಳೆಯಾಗಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಇನ್ನೂ ಒಂದು ವಾರದ ಅವಧಿಗೆ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದ್ದು, ನೈಋತ್ಯ ಮಾನ್ಸೂನ್ ಪ್ರವೇಶಕ್ಕೆ ದಿನಗಣನೆ ಪ್ರಾರಂಭವಾಗಿದೆ. ಮುಂದಿನ 2-3 ದಿನಗಳಲ್ಲಿ ನೈಋತ್ಯ ಮತ್ತು ಆಗ್ನೆಯ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ನೈಋತ್ಯ, ಆಗ್ನೇಯ ಮತ್ತು ಪೂರ್ವ ಮಧ್ಯ ಬಂಗಾಳ ಕೊಲ್ಲಿಗಳು ಮತ್ತು ಅಂಡಮಾನ್ ಸಮುದ್ರದ ಉಳಿದ ಭಾಗಗಳಿಗೆ ನೈಋತ್ಯ ಮಾನ್ಸೂನ್ ಮತ್ತಷ್ಟು ಪ್ರಬಲವಾಗುವ ಸಾಧ್ಯತೆ ಇದೆ. ಆಗ್ನೇಯ ಅರೇಬಿಯನ್ ಸಮುದ್ರ ಮತ್ತು ನೆರೆಹೊರೆಗಳಲ್ಲಿ ಸರಾಸರಿ ಸಮುದ್ರ ಮಟ್ಟಕ್ಕಿಂತ 3.1 ಮತ್ತು 7.6 ಕಿಮೀ ನಡುವೆ ಮೇಲ್ಭಾಗದ ವಾಯು ಚಂಡಮಾರುತದ ಪರಿಚಲನೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿಯ ಮತ್ತು ನೆರೆಹೊರೆ ಪ್ರದೇಶಗಳಲ್ಲಿ ಸರಾಸರಿ ಸಮುದ್ರ ಮಟ್ಟಕ್ಕಿಂತ 3.1 ಮತ್ತು 7.6 ಕಿಮೀ ನಡುವೆ ಮೇಲ್ಬಾಗದ ವಾಯು ಚಂಡಮಾರುತದ ಪರಿಚಲನೆ ಇರುತ್ತದೆ. ಪಶ್ವಿಮ ಮತ್ತು ಮಧ್ಯ ಬಂಗಾಳಕೊಲ್ಲಿಯ ಪೂರ್ವ-ಮಧ್ಯ ಭಾಗದಿಂದ ಆಗ್ನೇಯ ಅರೇಬಿಯನ್ ಸಮುದ್ರದವರೆಗೆ ನೈಋತ್ಯ ಬಂಗಾಳಕೊಲ್ಲಿ, ಮನ್ನಾರ್ ಕೊಲ್ಲಿ, ದಕ್ಷಿಣ ತಮಿಳುನಾಡು ಕರಾವಳಿ ಮತ್ತು ಪಕ್ಕದ ಕೊಮೊರಿನ್ ಪ್ರದೇಶದಾದ್ಯಂತ ಸರಾಸರಿ ಸಮುದ್ರ ಮಟ್ಟದಿಂದ 3.1 ಮತ್ತು 5.8 ಕಿ.ಮೀ. ನಡುವಿನ ವಾಯುಪರಿಚಲನೆ ಕಡಿಮೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

Karnataka Weather

ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ

ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಜೂನ್ 3ರ ವರೆಗೆ ಭಾರೀ ಮಳೆ ಆಗಲಿದೆ. ಬೆಂಗಳೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಿಂಚು - ಗುಡುಗು ಸಹಿತ ಮಳೆ ಆಗಲಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೇ 28ರಂದು ಭಾರೀ ಮಳೆ ಸಾಧ್ಯತೆಯಿದ್ದು, ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಉತ್ತರ ಒಳನಾಡು ಜಿಲ್ಲೆಗಳಲ್ಲಿಯೂ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Bengaluru Weather: ಇಂದು 115 ವಾರ್ಡ್‌ಗಳಲ್ಲಿ ವರ್ಷಧಾರೆ, ಮುಂದಿನ 48 ಗಂಟೆ ಭಾರೀ ಮಳೆ, ಯೆಲ್ಲೋ ಅಲರ್ಟ್
Bengaluru Weather: ಇಂದು 115 ವಾರ್ಡ್‌ಗಳಲ್ಲಿ ವರ್ಷಧಾರೆ, ಮುಂದಿನ 48 ಗಂಟೆ ಭಾರೀ ಮಳೆ, ಯೆಲ್ಲೋ ಅಲರ್ಟ್

ಕರಾವಳಿ ಜಿಲ್ಲೆಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನ ಬೀದರ್, ವಿಜಯಪುರ, ಕಲಬುರಗಿ ಭಾಗದಲ್ಲಿ ಮಳೆ ಆಗಲಿದೆ. ಗಾಳಿಯ ವೇಗವು ಪ್ರತಿ ಗಂಟೆಗೆ 50ರಿಂದ 60 ಕಿ.ಮೀ ವೇಗದಲ್ಲಿ ಇರಲಿದೆ. ಕೊಪ್ಪಳ, ಬಾಗಲಕೋಟೆ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿಯೂ ಭಾರೀ ಮಳೆ ಇರಲಿದೆ. ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಪ್ರದೇಶ, ಕೊಡಗು, ಮೈಸೂರು, ಚಿಕ್ಕಮಗಳೂರು, ಹಾಸನದಲ್ಲೂ ಭಾರೀ ಮಳೆ ಆಗಲಿದೆ. ತುಮಕೂರು, ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ಚಾಮರಾಜನಗರ, ಕೋಲಾರ, ರಾಮನಗರ, ಮಂಡ್ಯ, ಚಿಕ್ಕಬಳ್ಳಾಪುರ, ವಿಜಯನಗರ ಭಾಗದಲ್ಲೂ ಭಾರೀ ಮಳೆ ಆಗಲಿದೆ. ಗಾಳಿಯ ವೇಗವು ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Monsoon Rain: ಮುಂಗಾರು ಆಗಮನ ವಿಳಂಬ, ಜೂನ್ ಮೊದಲ ವಾರ ಗುಡ್‌ನ್ಯೂಸ್ ಸಾಧ್ಯತೆ: ಐಎಂಡಿ
Monsoon Rain: ಮುಂಗಾರು ಆಗಮನ ವಿಳಂಬ, ಜೂನ್ ಮೊದಲ ವಾರ ಗುಡ್‌ನ್ಯೂಸ್ ಸಾಧ್ಯತೆ: ಐಎಂಡಿ

ಧಾರಾಕಾರ ಮಳೆ

ಇನ್ನು ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಧಾರಾಕಾರ ಮಳೆಯಾಗಿದೆ. ಬೆಂಗಳೂರಿನ ಹಲವು ಭಾಗದಲ್ಲಿ ಧಾರಾಕಾರ ಮಳೆಯಾಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಮಂಗಳವಾರ 7 ಸೆಂ.ಮೀ ಮಳೆಯಾಗಿದೆ. ಇದರೊಂದಿಗೆ ಬೆಂಗಳೂರು, ರಾಮನಗರ, ಬೀದರ್, ಕೊಪ್ಪಳ ಹಾಗೂ ಕನಕಪುರ ಸೇರಿದಂತೆ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+