Karnataka Rains: ರಾಜ್ಯದ ಹಲವು ಜಿಲ್ಲೆಗಳಲ್ಲಿ 5 ದಿನ ಮಳೆ ಮುನ್ಸೂಚನೆ

Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರಣಬಿಸಿಲು ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ 5 ದಿನ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಮಾರ್ಚ್ 07) ಮೋಡ ಕವಿದ ವಾತಾವರಣ ಇದ್ದು, 8 ಗಂಟೆಯಿಂದ ಇಲ್ಲಿವರೆಗೂ ರಣಬಿಸಿಲು ಮುಂದುವರೆದಿದೆ. ಹಾಗೆಯೇ ಬಹುತೇಕ ಜಿಲ್ಲೆಗಳಲ್ಲೂ ಇದೇ ರೀತಿಯ ವಾತಾವರಣ ಇದೆ. ಈ ನಡುವೆಯೂ ಮಲೆನಾಡು, ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Weather Heavy Rainfall Forecast for in Many districts of state for Next 5 days

ಮುಂದಿನ 5 ದಿನಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಚಾಮರಾಜನಗರ, ಕೊಡಗು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮತ್ತೊಂದೆಡೆ ಇನ್ನೂ ಕೆಲವೇ ದಿನಗಳಲ್ಲಿ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಎಂಟ್ರಿ ಕೊಡಲಿದೆ. ಉಳಿದಂತೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.

ಇದೀಗ ಕಳೆದ ಒಂದು ತಿಂಗಳಿನಿಂದಲೂ ರಾಜ್ಯದಲ್ಲಿ ಬೇಸಿಗೆಗೂ ಮುನ್ನ ತಪಾಮಾನ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ನಡುವೆಯೇ ಹವಾಮಾನ ಇಲಾಖೆಯು ಬೆಂಗಳೂರು ಮತ್ತು ದಕ್ಷಿಣ ಕರ್ನಾಟಕದಲ್ಲಿ ಮುಂಗಾರು ಪೂರ್ವದ ಮಳೆ ಶೀಘ್ರದಲ್ಲೇ ಸುರಿಯಲಿದೆ. ಉಳಿದ ಉತ್ತರ ಕರ್ನಾಟಕದ ಭಾಗಗಳಲ್ಲಿ ಮಾತ್ರ ಶಾಖದ ಅಲೆಗಳು ಮುಂದುವರೆಯಲಿವೆ ಎಂದು ತಿಳಿಸಿದೆ.

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಇತರ ಜಿಲ್ಲೆಗಳಲ್ಲಿ ಮಾರ್ಚ್‌ನಿಂದ ಮೇ ತಿಂಗಳವರೆಗೆ ಮುಂಗಾರು ಪೂರ್ವ ಮಳೆಯು ಸಾಮಾನ್ಯಕ್ಕಿಂತ 30-40 ಪ್ರತಿಶತ ಹೆಚ್ಚಾಗಲಿದೆ. ಕರಾವಳಿ ಕರ್ನಾಟಕ ಮತ್ತು ಮಲೆನಾಡು ಪ್ರದೇಶಗಳಲ್ಲಿ ಇದು ಇನ್ನೂ ಹೆಚ್ಚು, ಅಂದರೆ ಶೇಕಡ 50-60ರಷ್ಟು ಹೆಚ್ಚುವರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಮುಂಗಾರು ಪೂರ್ವ ಮಳೆಯಿಂದ ಬೆಂಗಳೂರಿನಲ್ಲಿ ಹಗಲಿನ ತಾಪಮಾನ ಕಡಿಮೆಯಾಗಲಿದೆ. ಆದರೆ, ಜನದಟ್ಟಣೆ ಪ್ರದೇಶಗಳಲ್ಲಿ ತಾಪಮಾನ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಹಗಲಿನ ತಾಪಮಾನ ಸಾಮಾನ್ಯವಾಗಿ ಕಂಡರೂ, ರಾತ್ರಿ ವೇಳೆ ಇದು ಹೆಚ್ಚಾಗಲಿದೆ. ಭಾರತೀಯ ಹವಾಮಾನ ಇಲಾಖೆ ಹಿರಿಯ ವಿಜ್ಞಾನಿ ಸಿಎಸ್ ಪಾಟೀಲ್ ಅವರು, ರಾತ್ರಿಯ ತಾಪಮಾನವು ಸಾಮಾನ್ಯಕ್ಕಿಂತ 1-2 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗುವ ಸಾಧ್ಯತೆಯಿದ್ದು, ಪರಿಣಾಮ ಸಂಜೆ ಮತ್ತು ಬೆಳಗಿನ ಜಾವ ಸೆಖೆ ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಇದೀಗ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನಪದಲ್ಲಿ ಏರಿಕೆ ಕಂಡುಬಂದಿದೆ. ಕರಾವಳಿ ಭಾಗದಲ್ಲಿ ಏರಿಳಿತ ಆಗುತ್ತಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಮತ್ತೆ ಹೆಚ್ಚಳ ಆಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್‌ ಸಮೀಪಕ್ಕೆ ಬಂದಿದೆ ಎಂದು ತಿಳಿಸಿದೆ.

ಕಳೆದ ಎರಡ್ಮೂರು ವಾರಗಳಿಂದ ಕರಾವಳಿ ಜಿಲ್ಲೆಗಳಲ್ಲೂ ಸಹ ತಾಪಮಾನ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಲೇ ಇದೆ. ಇಂದು ಕೂಡ ಏರಿಕೆಯಾಗುವ ಸಾಧ್ಯತೆಯಿದೆ. ಇನ್ನು ಕಲಬುರಗಿಯಲ್ಲೂ ಕೂಡ ತಾಪಮಾನ ಹೆಚ್ಚಾಗಿದ್ದು, ವಿಜಯಪುರ, ಗದಗ, ಬಾಗಲಕೋಟೆ, ಚಿತ್ರದುರ್ಗ ಸೇರಿ ಹಲವೆಡೆ 36 ಡಿಗ್ರಿ ಸೆಲ್ಸಿಯಸ್‌ಗೂ ಹೆಚ್ಚಿನ ಪ್ರಮಾಣದಲ್ಲಿ ತಾಪಮಾನ ದಾಖಲಾಗಿದೆ. ಪ್ರತಿ ಬಾರಿಯೂ ರಾಯಚೂರು, ಕಲಬುರಗಿ, ಬಳ್ಳಾರಿ ಜಿಲ್ಲೆಗಳಲ್ಲಿ ದಾಖಲೆ ಪ್ರಮಾಣದಲ್ಲಿ ತಾಪಮಾನ ದಾಖಲಾಗುತ್ತಿತ್ತು. ಆದರೆ, ಈ ಬಾರಿ ಇದು ಉಲ್ಟಾ ಆಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ತಾಪಮಾನ ದಾಖಲಾದ ಬಗ್ಗೆ ವರದಿಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+