Karnataka Weather: ನವೆಂಬರ್ 4ರಿಂದ ಭಾರೀ ಮಳೆ ಮುನ್ಸೂಚನೆ, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು ನವೆಂಬರ್ 03: ಮಳೆಯಿಲ್ಲದೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲೊನ ತಾಪಮಾನ ಏರಿಕೆಯಾಗುತ್ತಲೇ ಇದೆ. ಪರಿಣಾಮ ಅನ್ನದಾತ ಬೆಳೆದಿರುವ ಬೆಳೆಗಳೆಲ್ಲವೂ ಸೂರ್ಯನ ಶಾಖಕ್ಕೆ ನೆಲಕಚ್ಚುತ್ತಿವೆ. ಆದರೆ ಮತ್ತೊಂದೆಡೆ ಹವಾಮಾನ ಇಲಾಖೆ ಕೆಲವು ಜಿಲ್ಲೆಗಳಲ್ಲಿ ನಾಳೆಯಿಂದ ಅಂದರೆ ನವೆಂಬರ್ 4ರಿಂದ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಬಿಸಿಲಿನ ವಾತಾವರಣವೇ ಮುಂದುವರೆದಿದೆ. ಮತ್ತೊಂದೆಡ ಇನ್ನು ಮುಂದಿನ 5 ದಿನಗಳ ಕಾಲ ನಗರದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಇನ್ನು ನವೆಂಬರ್ 4ರಿಂದ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ದಕ್ಷಿಣ ಒಳನಾಡಿನ ಶಿವಮೊಗ್ಗ, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಚಾಮರಾಜನಗರ, ಮಂಡ್ಯ, ಕೋಲಾರ, ಮೈಸೂರು, ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದ್ದು, ಇನ್ನಳಿದ ಜಿಲ್ಲೆಗಳಲ್ಲಿ ತಾಪಾಮಾನ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ನವೆಂಬರ್ 6 ರವರೆಗೆ ಕೇರಳದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮತ್ತು ಗಾಳಿಯ ವೇಗ 30-40 ಕಿ.ಮೀ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ನವೆಂಬರ್ 3 ರಿಂದ 6ರವರೆಗೆ ತಮಿಳುನಾಡು, ಕೇರಳ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸಚನೆ ನೀಡಿದೆ. ಶುಕ್ರವಾರ ಮತ್ತು ಶನಿವಾರ ಇಡುಕ್ಕಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಇನ್ನು ಕೊಲ್ಲಂ, ಪತ್ತನಂತಿಟ್ಟ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್, ವಯನಾಡ್, ಕಣ್ಣೂರಿನಲ್ಲಿ ಶುಕ್ರವಾರ ಹಳದಿ ಅಲರ್ಟ್ ಘೋಷಿಸಲಾಗಿದೆ. ಇಡುಕ್ಕಿ ಹೊರತುಪಡಿಸಿ ಪತ್ತನಂತಿಟ್ಟ ಜಿಲ್ಲೆಗೆ ಶನಿವಾರ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಇನ್ನು ಕರ್ನಾಟಕದಲ್ಲಿ ಜುಲೈ ತಿಂಗಳಿನಲ್ಲಿ ಅಬ್ಬರದ ಮಳೆಯಾಗಿತ್ತು. ನಂತರ ಆಗಸ್ಟ್‌ನಲ್ಲಿ ಸಂಪೂರ್ಣ ಮಳೆ ಕೈಕೊಟ್ಟ ಹಿನ್ನೆಲೆ ಬಿತ್ತನೆ ಮಾಡಿದ್ದ ಬೆಳೆಗಳೆಲ್ಲ ನೆಲಕಚ್ಚಿದ್ದವು. ಹಾಗೆಯೇ ಇದೀಗ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಲಿದ್ದು, ಇದರಿಂದ ಜನರು ಬೇಸತ್ತು ಹೋಗಿದ್ದಾರೆ. ಒಂದು ವೇಳೆ ಅಕ್ಟೋಬರ್ ತಿಂಗಳಲ್ಲೀ ಮಳೆರಾಯ ಕರುಣೆ ತೋರದಿದ್ದರೆ ಕುಡಿಯುವ ನೀರಿಗೂ ಹಾಹಾಕಾರ ಎದುರಾಗುವುದರಲ್ಲೀ ಯಾವುದೇ ಅನುಮಾನವಿಲ್ಲ.
ಈಗಾಗಲೇ ಹಲವು ಜಿಲ್ಲೆಳಲ್ಲಿ ಕೆರೆ, ಕಟ್ಟೆಗಳು ಸೇರಿದಂತೆ ಇನ್ನುಳಿನ ನೀರಿನ ಮೂಲಗಳು ಬರಿದಾಗುತ್ತಿವೆ. ಮತ್ತೊಂದೆಡೆ ಜಲಾಶಯಗಳಲ್ಲೂ ಬೇಸಿಗೆ ಬರುವ ಮುನ್ನವೇ ನೀರಿನ ಪ್ರಮಾಣ ಕಡಿಮೆಯಾಗುತ್ತಲೇ ಇದೆ.












Click it and Unblock the Notifications