Karnataka weather: ಅಬ್ಬಬ್ಬಾ.. ಎಂಥ ಚಳಿ ಮಾರ್ರೆ.. ಈ ನಡುವೆಯೂ ರಾಜ್ಯದ ಹಲವೆಡೆ ಮಳೆಯಂತೆ.!
ಕರ್ನಾಟಕ, ಜನವರಿ, 19: ಇದೀಗ ದೇಶದೆಲ್ಲೆಡೆ ಬೆಳಗ್ಗೆ 10 ಗಂಟೆಯಾದರೂ ದಟ್ಟ ಮಂಜಿನ ವಾತಾವರಣವೇ ಕವಿಯುತ್ತಿದೆ. ಇನ್ನು ಕರ್ನಾಟಕ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತರ ಭಾರತಕ್ಕೆ ಹೋಲಿಕೆ ಮಾಡಿದರೆ ಚಳಿಯ ಪ್ರಮಾಣ ತುಸು ಕಡಿಮೆಯೇ ಇದೆ. ಇನ್ನು ಇಂದು (ಜನವರಿ 19) ರಾಜ್ಯದ ಕೆಲವೆಡೆ ಮಾತ್ರ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯ ಮುನ್ಸೂಚನೆ ಇದೆ.
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದು ಮೋಡ ಕವಿದ ವಾತಾವರಣ ಮತ್ತು ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ನಡುವೆಯೂ ಕೆಲವೇ ಕೆಲವುಜಿ ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಂಗಳೂರು, ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ಉತ್ತರ ಕನ್ನಡ, ರಾಮನಗರಗ, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ವೇಳೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಮಧ್ಯಾಹ್ಯದ ವೇಳೆಗೆ ಒಣಹವೆಯ ವಾತಾವರಣ ಇರಲಿದೆ. ಇನ್ನು ಸಂಜೆಯಾಗುತ್ತಿದ್ದಂತೆ ಚಳಿಯ ವಾತಾವರಣದ ನಡುವೆಯೇ ಮಳೆ ಬೀಳುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.
ಇಂದು ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎನ್ನುವ ಮಾಹಿತಿ ಇದೆ. ಹಾಗಾದರೆ ಇನ್ನುಳಿದ ಜಿಲ್ಲೆಗಳಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನ ಎಷ್ಠಿರಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.












Click it and Unblock the Notifications