Karnataka Weather: ಬೆಂಗಳೂರು ಗ್ರಾಮಾಂತರ ಸೇರಿದಂತೆ ಕರ್ನಾಟಕದ 5 ಜಿಲ್ಲೆಗಳಲ್ಲಿ ಮಳೆ
ಬೆಂಗಳೂರು ಫೆಬ್ರವರಿ 26: ಕರ್ನಾಟಕದ ಹಲವು ಭಾಗಗಳಲ್ಲಿ ಬಿಸಿಲಿನ ಬಿಸಿ ಹೆಚ್ಚಾಗಿದೆ. ಫೆಬ್ರವರಿ ಕಳೆಯುತ್ತಿದ್ದಂತೆ ಅಂದರೆ ಶಿವರಾತ್ರಿ ಬಳಿಕ ಬಿಸಿಲು ಇನ್ನಷ್ಟು ಹೆಚ್ಚಾಗಲಿದೆ. ಫೆಬ್ರವರಿ 23ರಂದು ಬೆಂಗಳೂರು ನಗರದಲ್ಲಿ 2024ರ ಫೆಬ್ರವರಿಯ ಅತೀ ಹೆಚ್ಚು ತಾಪಮಾನ ದಾಖಲಾಗಿದೆ. ಈ ನಡುವೆ ಹವಾಮಾನ ಇಲಾಖೆ ರಾಜ್ಯದಲ್ಲಿ ಮಳೆ ಮುನ್ಸೂಚನೆಯನ್ನು ನೀಡಿದೆ.
ಹೌದು.. ಕಳೆದ ಎರಡು ದಿನಗಳಿಂದ ಶೀತಗಾಳಿ ಬೀಸುತ್ತಿರುವ ಕರ್ನಾಟಕದ ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಬೆಂಗಳೂರಿನಲ್ಲಿ ಮಳೆಯಾಗುವ ಸೂಚನೆಯನ್ನು ನೀಡಿದೆ. ಇದಲ್ಲದೆ ಬೆಂಗಳೂರು ಗ್ರಾಮಾಂತರ, ಕೊಡಗು, ದಾವರಣಗೆರೆ, ತುಮಕೂರು, ಚಿತ್ರದುರ್ಗದಲ್ಲಿ ಮುಂದಿನ ಎರಡು ದಿನಗಳಲ್ಲಿ ಲಘು ಮಳೆಯಾಗಿಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನೂ ಬಳ್ಳಾರಿ, ಗದಗ, ಕೊಪ್ಪಳ, ಯಾದಗಿರಿ, ರಾಮನಗರ, ಶಿವಮೊಗ್ಗ, ಉತ್ತರ ಕನ್ನಡ, ಕುಲಬುರಗಿ, ದಕ್ಷಿಣ ಕನ್ನಡ, ಹಾವೇರಿ, ಉಡುಪಿ, ಹಾವೇರಿ, ಬಾಗಲಕೋಟೆ, ಧಾರವಾಡ, ಬೆಳಗಾವಿ, ಬೀದರ್, ರಾಯಚೂರು, ಹಾಸನ, ವಿಜಯಪುರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಮಂಡ್ಯ, ಕೋಲಾರ, ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ.
ಕರ್ನಾಟಕದಾದ್ಯಂತ ಒಂದೆರೆಡು ಕಡೆಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಎರಡು ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ. ಇನ್ನೂ ಬೆಳಗಾವಿ ವಿಮಾನ ನಿಲ್ದಾಣದಲ್ಲಿ 15.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಂಟಮಾರುತ ಎಫೆಕ್ಟ್: ಈ ಭಾಗಗಳಲ್ಲಿ ಮಳೆ..
ಜೊತೆಗೆ ಉತ್ತರ ಭಾರತದ ಬಹುತೇಕ ರಾಜ್ಯಗಳಲ್ಲಿ ಹಗಲಿನಲ್ಲಿ ತಾಪಮಾನ ಹೆಚ್ಚಿದೆ. ಆದರೆ ರಾತ್ರಿಯಲ್ಲಿ ಸ್ವಲ್ಪ ತಂಪು ಇರುತ್ತದೆ. ಆದರೆ ಎರಡು ದಿನಗಳಲ್ಲಿ ಅಂದರೆ ಪೆಬ್ರವರಿ 26-27 ರಂದು ಹವಾಮಾನದಲ್ಲಿ ಬದಲಾವಣೆಯ ಸಾಧ್ಯತೆಯನ್ನು ಐಎಂಡಿ ವ್ಯಕ್ತಪಡಿಸಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ದೇಶದ ಹಲವು ರಾಜ್ಯಗಳಲ್ಲಿ ಮಳೆ, ಚಂಡಮಾರುತ ಮತ್ತು ಆಲಿಕಲ್ಲು ಸಹಿತ ಮಳೆಯಾಗುವ ಎಚ್ಚರಿಕೆ ನೀಡಿದೆ.
ಇದರ ಹೊರತಾಗಿ, ಫೆಬ್ರವರಿ 29ರಂದು ಭಾರತದ ಗುಡ್ಡಗಾಡು ರಾಜ್ಯಗಳಲ್ಲಿ ಹವಾಮಾನ ವೈಪರಿತ್ಯ ಉಂಟಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಪೆಬ್ರವರಿ 27ರ ನಡುವೆ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಬಿಹಾರ್, ಪಶ್ಚಿಮ ಬಂಗಾಳ, ಒಡಿಶಾ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ. ಹವಾಮಾನ ಇಲಾಖೆ ಪ್ರಕಾರ, ಇಂದು ಪೆಬ್ರವರಿ 26 ರಾತ್ರಿಯ ಸಮಯದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ವಲ್ಪ ಮಳೆಯಾಗಬಹುದು. ಇದರ ನಂತರ ಪೆಬ್ರವರಿ 27 ರಿಂದ ಹವಾಮಾನವು ತೆರವುಗೊಳ್ಳಲು ಪ್ರಾರಂಭಿಸುತ್ತದೆ ಎಂದು ಸ್ಕೈಮೆಟ್ ಹವಾಮಾನ ಇಲಾಖೆ ಹೇಳಿದೆ.
ಇನ್ನೂ ಮುಂದಿನ 24 ಗಂಟೆಗಳಲ್ಲಿ ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್ ಬಾಲ್ಚಿಸ್ತಾನ್, ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.
ಜಾರ್ಖಂಡ್, ದಕ್ಷಿಣ ಛತ್ತೀಸ್‌ಗಢ, ಪೂರ್ವ ಅಸ್ಸಾಂ, ಬಿಹಾರ್, ಒಡಿಸಾ, ಕರಾವಳಿ ಆಂಧ್ರಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಲಘು ಮಳೆ ಬೀಳಲಿದೆ.












Click it and Unblock the Notifications