Karnataka Weather: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಹಿನ್ನೆಲೆ ರಾಜ್ಯದ ಈ ಜಿಲ್ಲೆಗಳಲ್ಲಿ ಎರಡು ದಿನ ಮಳೆ ಮುನ್ಸೂಚನೆ
Karnataka Weather: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೀಗ ಚಳಿಯ ಪ್ರಮಾಣ ಕಡಿಮೆಯಾಗುತ್ತಿದೆ. ಮತ್ತೊಂದೆಡೆ ಬೇಸಿಗೆಗೂ ಮುನ್ನವೇ ತಾಪಮಾನದ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ನಡುವೆಯೂ ಬಂಗಾಳ ಕೊಲ್ಲೆಯಲ್ಲಿ ಚಂಡಮಾರುತ ಹಿನ್ನೆಲೆ ಮುಂದಿನ ಎರಡು ದಿನ ಹಲವು ಜಿಲ್ಲಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ ಮೋಡ ಕವಿದ ವಾತಾವರಣದ ನಡುವೆ ಚಳಿ ಮುಂದುವರೆದಿದ್ದು, ಬೆಳಗ್ಗೆ 9 ಗಂಟೆಯಾಗುತ್ತಿದ್ದಂತೆ ಬಿರು ಬಿಸಿಲಿನ ವಾತಾವರಣ ಮುಂದುವರೆದಿದೆ. ಮುಂದಿನ ದಿನಗಳಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಇನ್ನೂ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಭಾರೀ ಮಳೆ?: ಫೆಬ್ರವರಿ 20ರವರೆಗೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನಲ್ಲಿ ಚಳಿ ಮುಂದುವರೆಯಲಿದೆ. ಇನ್ನು ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಪರಿಣಾಮ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಳಗಾವಿ, ಮೈಸೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಮಾತ್ರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಎನ್ನುವ ಮುನ್ಸೂಚನೆ ಇದೆ.
ಫೆಬ್ರವರಿ 19ರಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ. ಹೀಗೆಯೇ ಬುತೇಕ ಜಿಲ್ಲೆಗಳಲ್ಲಿ ತಾಪಮಾನ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಬೇಸಿಗೆ ಆರಂಭದ ದಿನಗಳು ಹತ್ತಿರಲ್ಲಿರುವಂತೆ ಬಿಸಿಲಿನ ಅಬ್ಬರ ತುಸು ಜೋರಾಗಿಯೇ ಇದೆ.
ಈಗಾಗಲೇ ಬೇಸಿಗೆಗೂ ಮುನ್ನವೇ ಬಹುತೇಕ ಜಿಲ್ಲೆಗಳಲ್ಲಿ ಬಿರು ಬಿಸಿಲು ಮುಂದುವರೆದಿದ್ದು, ಜನರು ಇದರಿಂದ ಬೇಸತ್ತು ಹೋಗಿದ್ದಾರೆ. ಅಲ್ಲದೆ, ಈಗಲೇ ಇಷ್ಟೊಂದು ತಾಪಮಾನ ದಾಖಲಾದರೆ, ಇನ್ನೂ ಬೇಸಿಗೆ ಕಾಲದಲ್ಲಿ ಮತ್ತೇನು ಕಾದಿದೆಯೋ ಎಂದು ಜನರ ಆತಂಕವಾಗಿದೆ. ಈಗಲೇ ರಣಭೀಕರ ಬಿಸಿಲಿನಿಂದ ಜನರು ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಈಗಾಗಲೇ ಕಳೆದ ವರ್ಷ ಅಂದರೆ 2024ರ ಜೂನ್ ಆರಂಭವಾಗುತ್ತಿದ್ದಂತೆ ಮುಂಗಾರು ಮಳೆ ಆರ್ಭಟಿಸಿದ ಪರಿಣಾಮ ರಾಜ್ಯದಲ್ಲಿನ ಪ್ರಮುಖ ಜಲಾಶಯಗಳು, ಕೆರೆ-ಕಟ್ಟೆಗಳು, ಹಳ್ಳಗಳು ತುಂಬಿ ಹರಿದಿದ್ದವು. ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿತ್ತು. ಇದೀಗ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಸಂಪೂರ್ಣ ನೀರು ಇರುವ ಹಿನ್ನೆಲೆ ಈ ಬಾರಿ ನೀರಿನ ಅಬಾವ ಎದುರಾಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.
ಆದರೂ ಈ ಬಾರಿ ಅಂದರೆ, 2025ರಲ್ಲಿ ಉತ್ತಮ ಮಳೆಯಾದರೆ, ಜಲಾಶಯಗಳು ಮತ್ತೆ ತುಂಬುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ, ಈ ಬಾರಿ ಮೈಲಾರಲಿಂಗೇಶ್ವರನ ಕಾರ್ಣಿಕ ತುಂಬಿದ ಕೊಡ ತುಳುಕಿತಲೇ ಪರಾಕ್ ಎಂಬ ಭವಿಷ್ಯವಾಗಿ ಆಗಿದೆ. ಇದರ ಅರ್ಥ ವಿಶ್ಲೇಕರ ಪ್ರಕಾರ, ಉತ್ತಮ ಮಳೆ, ಬೆಳೆ ಆಗುತ್ತದೆ. ಆದರೆ ಭಾರೀ ಮಳೆಯಿಂದ ಬೆಳೆಗಳು ಕಿಚ್ಚಿಕೊಂಡು ಹೋಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಅಂದರೆ ಅತೀವೃಷ್ಟಿಯಾಗುವ ಸಾಧ್ಯತೆಯಿದೆ ಎಂದರ್ಥ.












Click it and Unblock the Notifications