Karnataka Weather: ಮುಂದಿನ ಎರಡು ದಿನಗಳ ಕಾಲ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ-ಮಾಹಿತಿ ಇಲ್ಲಿದೆ
Karnataka Weather: ಮತ್ತೊಂದೆಡೆ ಕಳೆದ ಮೂರು ದಿನಗಳಿಂದ ಬೆಂಗಳೂರಿನ ಕೆಲವೆಡಸೆ ಸೇರಿದಂತೆ ಎರಡ್ಮೂರು ಜಿಲ್ಲೆಗಳಲ್ಲಿ ಮಾತ್ರ ಮಳೆರಾಯ ತಂಪೆರೆದಿದ್ದಾನೆ. ಇದನ್ನು ಹೊರತುಪಡಿಸಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವೇ ಮುಂದುವರೆದಿದೆ. ಇದರ ನಡುವೆಯೂ ಮುಂದಿನ ಎರಡು ದಿನಗಳ ಕಾಲ ಕೆಲವು ಜಿಲ್ಲೆಗಳಲ್ಲಿ ಮಳೆ ಸುರಿಯಲಿದ್ದು, ಇನ್ನುಳಿದ ಭಾಗಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆಯಲಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಕಳೆದ ಗುರುವಾರ, ಶುಕ್ರವಾರ ರಾಜ್ಯ ರಾಜ್ಯಧಾನಿ ಬೆಂಗಳೂರಿನ ಹಲವೆಡೆ ಗುಡುಗು, ಸಿಡಿಲು ಸಹಿತ ಸಾಧಾರಣ ಮಳೆ ಸುರಿದಿತ್ತು. ಇನ್ನು ಶನಿವಾರ (ಮೇ 04) ಬರೀ ಬಿಸಿಲಿನ ವಾತಾವರಣವೇ ಮುಂದುವರೆದಿದ್ದು, ಇಂದು (ಮೇ 05) ಕೂಡ ಬೆಳಗ್ಗೆಯಿಂದಲೂ ಸೂರ್ಯನ ಹಾವಳಿ ಶುರುವಾಗಿದೆ. ಇನ್ನು ಸಂಜೆ ವೇಳೆಗೆ ನಗರದಲ್ಲಿ ಮಳೆಯಾಗುವ ಸಾಧ್ಯೆಯಿದೆ ಎನ್ನುವ ಮುನ್ಸೂಚನೆ ಇದೆ.

ಇಂದು ಎಲ್ಲೆಲ್ಲಿ ಮಳೆ?: ಈಗಾಗಲೇ ಚಾಮರಾಜನಗರ, ಮೈಸೂರು, ಕೊಡಗು, ಬೆಂಗಳೂರು, ರಾಮನಗರ ಸೇರಿದಂತೆ ಹಲವೆಡೆ ಏಪ್ರಿಲ್ ಮೊದಲ ವಾರದಲ್ಲಿ ಮಳೆರಾಯ ತಂಪೆರದಿದ್ದಾನೆ. ಇನ್ನು ರಾಜ್ಯದ ದಕ್ಷಿಣ ಒಳನಾಡಿನ ಕೆಲವೆಡೆ ಮಾತ್ರ ಆಗಾಗ ಸಾಧಾರಣ ಮಳೆಯಾಗುತ್ತಲೇ ಇದೆ. ಇಂದು (ಮೇ 5) ಕೂಡ 8 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ. ಆದರೆ ಉತ್ತರ ಒಳನಾಡಿನಲ್ಲಿ ತಾಪಮಾನ ಪ್ರಮಾಣ ಹೆಚ್ಚಾಗುವ ಸಾಧ್ಯೆತಯಿದೆ ಅಂತಾ ಮುನ್ಸೂಚನೆ ನೀಡಿದೆ.
ಇಂದು (ಮೇ 05) ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಭ ಮಳೆಯಾಗುವ ಸಾಧ್ಯತೆಯಿದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎನ್ನುವ ಮುನ್ಸೂಚನೆ ಇದೆ.
ಮೇ 6 & 7ರಂದು ಎಲ್ಲೆಲ್ಲಿ ವರುಣಾರ್ಭಟ?: ಇನ್ನು ಮೇ 6ರಂದು ಚಾಮರಾಜನಗರ, ಮೈಸೂರು ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ. ಮೇ 7ರಂದು ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು (ಮೇ 5) ಸಂಜೆ ವೇಳೆಗೆ ಗುಡುಗು, ಬಿರುಗಾಳಿ ಸಹಿತ ಮಳೆ ಸುರಿಯಿವ ನಿರೀಕ್ಷೆಯಿದೆ. ಅಲ್ಲದೆ ನಗರದಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಅಂತಲೂ ತಿಳಿಸಿದೆ.
ಎಲ್ಲೆಲ್ಲಿ ಮಳೆಯಾಗಿದೆ?: ಕಳೆದ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಮಳೆ ಬಿದ್ದದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ 6 ಸೆಂಟಿ ಮೀಟರ್, ಮೈಸೂರು 5 ಸೆಂಟಿ ಮೀಟರ್, ಹುಣಸೂರು 3 ಸೆಂಟಿ ಮೀಟರ್, ಸರಗೂರು 3 ಸೆಂಟಿ ಮೀಟರ್, ಬೆಂಗಳೂರು ನಗರ 2 ಸೆಂಟಿ ಮೀಟರ್, ಕೊಡಗು ಜಿಲ್ಲೆಯ ಹಾರಂಗಿ, ಕುಶಾಲನಗರ, ಮೈಸೂರು ಜಿಲ್ಲೆಯ ಕೆ.ಆರ್. ನಗರ, ಹಾಸನ ಜಿಲ್ಲೆಯ ಕೊಣನೂರಿನಲ್ಲಿ ತಲಾ 1 ಸೆಂಟಿ ಮೀಟರ್ ತುಂತುರು ಮಳೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ತಾಪಮಾನ ಏರಿಕೆ: ಬೆಂಗಳೂರು ಹವಾಮಾನ ಕೇಂದ್ರದ ದೈನಂದಿನ ವರದಿ ಪ್ರಕಾರ, ಉತ್ತರ ಒಳನಾಡಿನ ಕೆಲವೆಡೆ ಸಾಮಾನ್ಯಕ್ಕಿಂತ ತಾಪಮಾನದಲ್ಲಿ ಏರಿಕೆ ಆಗಿದೆ. 3.1 ಡಿಗ್ರಿ ಸೆಲ್ಸಿಯಸ್‌ನಿಂದ 5 ಡಿಗ್ರಿ ಸೆಲ್ಸಿಯಸ್‌ವರೆಗೆ ಹೆಚ್ಚಳವಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ತಾಪಮಾನದಲಗಲಿ ಏರಿಕೆಯಾಗುತ್ತಲೇ ಇದೆ. ಅದರಲ್ಲೂ ಕಲಬುರಗಿ, ರಾಯಚೂರಿನ ಕಡೆ ಗರಿಷ್ಠ 44 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲೆ ಮಟ್ಟದಲ್ಲಿ ದಾಖಲು ಆಗಿದೆ ಎಂದು ತಿಳಿದುಬಂದಿದೆ.
ಮೇ 6ರಂದು ಬೀದರ್, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಬಳ್ಳಾರಿ, ಬೆಂಗಳೂರು ನಗರ, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಬಿಸಲಿನ ವಾತಾವರಣ ಮುಂದುವರೆಯಲಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.












Click it and Unblock the Notifications