Karnataka weather: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ
ಕರ್ನಾಟಕ, ನವೆಂಬರ್, 26: ಈ ಬಾರಿ ಮುಂಗಾರು ಕೈಕೊಟ್ಟ ಹಿನ್ನೆಲೆ ರೈತರು ಬೆಳೆದ ಬೆಳೆಗಳೆಲ್ಲವೂ ಬಿಸಿಲಿನ ಬೇಗೆಗೆ ಬೆಂದು ಹೋಗಿವೆ. ಇನ್ನೂ ಕೆಲವು ದಿನಗಳಿಂದಷ್ಟೇ ಹಲವು ಜಿಲ್ಲೆಗಲ್ಲಿ ಹಿಂಗಾರು ಚುರುಕು ಪಡೆದಿದೆ. ಹಾಗೆಯೇ ಇಂದಿನಿಂದ ಡಿಸೆಂಬರ್ 2ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಾತ್ರ ಮೋಡ ಕವಿದ ವಾತಾವರಣ ಇರಲ್ಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಂಜೆ ವೇಳೆಗೆ ಭಾರೀ ಮಳೆ
ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಗಾಗ ಮಳೆರಾಯ ಅಬ್ಬರಿಸುತ್ತಲೇ ಇದ್ದಾನೆ. ಹಾಗೆಯೇ ಇಂದು ಕೂಡು ಸಂಜೆ ವೇಳೆಗೆ ನಗರದ ಹಲವೆಡೆ ಭಾರೀ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ. ಬೆಂಗಳೂರು ಸೇರಿ ರಾಜ್ಯದ ಬಹುತೇಕ ಕಡೆಗಳಲ್ಲಿ ಡಿಸೆಂಬರ್ 2ರವರೆಗೂ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ನಿನ್ನೆ ಕೆಲವೆಡೆ ಭಾರೀ ಮಳೆ
ಇನ್ನು ನಿನ್ನೆ (ನವೆಂಬರ್ 25) ಉಡುಪಿ, ಮಂಗಳೂರು ವಿಮಾನ ನಿಲ್ದಾಣ, ಮಂಗಳೂರು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ದೇವನಹಳ್ಳಿ, ಮಧುಗಿರಿಯಲ್ಲಿ ಮಳೆ ಆಗಿದೆ. ದಾವಣಗೆರೆ ಮತ್ತು ವಿಜಯಪುರದಲ್ಲಿ 19.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲು ಆಗಲಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಶನಿವಾರ ಕೆಲವೆಡೆ ಮಳೆ ಆಗಿದೆ. ಇಂದು (ನವೆಂಬರ್ 26) ಕೂಡ ಮೋಡ ಮುಸುಕಿದ ವಾತಾವರಣ ನಿರ್ಮಾಣ ಆಗಲಿದ್ದು, ಮಳೆ ಸುರಯುವ ಸಾಧ್ಯತೆಯಿದೆ. HALನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, KIALನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದೆ ಎನ್ನಲಾಗಿದೆ.












Click it and Unblock the Notifications