Karnataka Rains: ಜನವರಿ 19ರಂದು ಭೀಕರ ಚಳಿ ನಡುವೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೀಗ ಭೀಕರ ಚಳಿ ಮುಂದುವರೆದಿದೆ. ಈ ನಡುವೆಯೇ ಜನವರಿ 19 ಅಂದರೆ ಭಾನುವಾರಂದು 11 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ಒಳ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇಂದು (ಜನವರಿ 18) ಬೆಳಗ್ಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಚಳಿ ಮುಂದುವರೆದಿದೆ. ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಭೀಕರ ಚಳಿ ಮುಂದುವರೆದ್ದು, ಇದೀಗ ತುಸು ಕಡಿಮೆಯಾಗುತ್ತಾ ಬರುತ್ತಿದೆ. ಮತ್ತೊಂದೆಡ ಚಂಡಮಾರುತದ ಪರಿಚಲನೆ ಹಿನ್ನೆಲೆ ನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

Karnataka Weather Heavy rainfall forecast in these districts of state on January 19 2025

ಇಂದು (ಜನವರಿ 18) ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಳಿ ಮುಂದುವರೆದಿದೆ. ಬೆಂಗಳೂರು ಹಾಗೂ ಸುತ್ತಮುತ್ತ ಜಿಲ್ಲೆಗಳಲ್ಲಿ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಜೊತೆ ಚಳಿ ಮುಂದುವರೆದಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಮಂಡ್ಯ, ರಾಮನಗರ, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇದೆ.

ಜೊತೆ ಅಲ್ಲಲ್ಲಿ ಸಾಧಾರಣ ಚಳಿ ಮತ್ತು ಅಲ್ಲಲ್ಲಿ ಮಂಜು ಆವರಿಸಿದೆ. ಇನ್ನು ಶುಕ್ರವಾರ (ಜನವರಿ 17)ದಂದು ರಾಜ್ಯದ ಯಾವುದೇ ಭಾಗದಲ್ಲಿ ಮಳೆ ಆಗಿಲ್ಲ. ಒಣ ಹವೆ ಮುಂದುವರಿದಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಮಾಹಿತಿ ನೀಡಿದೆ. ಇಂದಿನಿಂದ ಜನವರಿ 21ರ ವರೆಗೆ ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ 2-4 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗುವ ಸಾಧ್ಯತೆಯಿದೆ.

ಮುಂದಿನ 3 ದಿನಗಳವರೆಗೆ ದಕ್ಷಿಣ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗಲಿದೆ. ಬೆಳಗ್ಗೆ ವೇಳೆ ಅಲ್ಲಲ್ಲಿ ದಟ್ಟ ಮಂಜು ಇರುವ ಕವಿಯುವ ಸಾಧ್ಯತೆಯಿದೆ.
ಇನ್ನು ಜನವರಿ 19ರಂದು ಭೀಕರ ಚಳಿ ನಡುವೆಯೂ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು ಹಾಗೂ ಹಾಸನ ಸೇರಿದಂತೆ 11 ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಇದೇ ವೇಳೆ ಉತ್ತರ ಒಳನಾಡು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಂಜಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+