Karnataka Weather: ಮೇ 20ರವರೆಗೂ ರಾಜ್ಯದ ಈ ಜಿಲ್ಲೆಗಳಿಗೆ ಗುಡುಗು ಸಹಿತ ಬಿರುಗಾಳಿ ಮಳೆ ಮುನ್ಸೂಚನೆ

Karnataka Weather: ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯ ಎಂಟ್ರಿ ಕೊಟ್ಟು ತಂಪೆರೆಯುವುದಲ್ಲದೆ, ಅವಾಂತರಗಳನ್ನೂ ಸೃಷ್ಟಿಸಿದ್ದಾನೆ. ಹಾಗೆಯೇ ಮೇ 20ರವರೆಗೂ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಯಾವ್ಯಾವ ಜಿಲ್ಲೆಗಳಲ್ಲಿ ಯಾವಾಗ ವರುಣ ಆರ್ಭಟಿಸಲಿದ್ದಾನೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾದರೂ ಕೂಡ ಬಿಸಿಲಿನ ತಾಪಮಾನ ಕಡಿಮೆಯಾಗುತ್ತಿಲ್ಲ ಎನ್ನುವ ಮಾಹಿತಿಯೊಂದು ಲಭ್ಯವಾಗಿದೆ. ಆದರೆ ಇಂದು (ಮೇ 14) ಸಂಜೆ ವೇಳೆಗೆ ನಗರದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆರಾಯ ಆರ್ಭಟಿಸಲಿದ್ದಾನೆ ಎನ್ನುವ ಮುನ್ಸೂಚನೆ ಇದೆ.

Karnataka Weather Heavy rainfall forecast in these districts till May 20

ಇಂದು (ಮೇ 14) ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಕಲಬುರಗಿ, ಯಾದಗಿರಿ ಮತ್ತು ಬೆಳಗಾವಿ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಕೋಲಾರ, ವಿಜಯಪುರ, ಬಾಗಲಕೋಟೆ, ಬೀದರ್‌, ಧಾರವಾಡ, ಗದಗ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 15ರಂದು ಉಡುಪಿ, ಶಿವಮೊಗ್ಗ, ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ವಿಜಯಪುರ, ಕಲಬುರಗಿ, ಬಾಗಲಕೋಟೆ, ಬೆಳಗಾವಿ, ಯಾದಗಿರಿ, ದಾವಣಗೆರೆ, ಬಳ್ಳಾರಿ, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯೆತೆಯಿದೆ ಎಂದು ಮುನ್ಸೂಚನೆ ನೀಡಿದೆ. ಇಲ್ಲಿ ಗಾಳಿಯ ವೇಗವು ಗಂಟೆಗೆ 40-50 ವೇಗದಲ್ಲಿ ಬೀಸಲಿದೆ ಎಂದು ತಿಳಿಸಿದೆ.

ಮೇ 16ಎಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಭಾಗಗಳ್ಲಿ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಇಲ್ಲಿನ ಗಾಳಿಯ ವೇಗವು ಗಂಟೆಗೆ 40-50 ಕಿಲೋ ಮೀಟರ್‌ ವೇಗದಲ್ಲಿ ಬೀಸಲಿದೆ ಅಂತಳು ತಿಳಿಸಿದೆ.

ಮೇ 17ರಂದು ಉಡುಪಿ, ದಕ್ಷಿಣ ಜಿಲ್ಲೆಗಳ ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ಶಿವಮೊಗ್ಗ, ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

ಮೇ 18ರಿಂದ 20ರವರೆಗೂ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದ್ದು, ಕಡಲತೀರದ ಮೀನುಗಾರರಿಗೆ ಯಾವುದೇ ಎಚ್ಚರಿಕೆ ಸಂದೇಶವನ್ನು ರವಾನಿಸಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+