Karnataka Weather: ಈ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಕರ್ನಾಟಕ, ಅಕ್ಟೋಬರ್, 19: ಮುಂಗಾರು ಕೈಕೊಟ್ಟ ಪರಿಣಾಮ ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರದ ಛಾಯೆ ತಾಂಡವ ಆಡುತ್ತಿದೆ. ಇನ್ನೂ ಏನೇ ಇದ್ದರೂ ಹಿಂಗಾರು ಕರುಣೆ ತೋರಬೇಕಷ್ಟೇ. ಇದೀಗ ಕೆಲವೇ ಕಡೆ ಮಾತ್ರ ಹಿಂಗಾರು ಮಳೆ ಚುರುಕು ಪಡೆದಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಬಿಸಿಲಿನ ವಾತಾರವಣವೇ ಮುಂದುವರೆದಿದೆ. ಮತ್ತೊಂದೆಡೆ ಮುಂದಿನ ಎರಡು ದಿನಗಳ ಕಾಲ ಹಲವೆಡೆ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಆಗಾಗ ಮಳೆರಾಯ ಅಬ್ಬರಿಸುತ್ತಿದ್ದಾನೆ. ಇದನ್ನು ಹೊರತುಪಡಿಸಿದರೆ ಕೊಡಗು, ಮೈಸೂರು, ದಕ್ಷಿಣ ಕನ್ನಡ, ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ ಅಷ್ಟೇ. ಹಾಗೆಯೇ ಇಂದಿನಿಂದ ಎರಡು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಇನ್ನು ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವ ಮುಂದುವರೆಯಲಿದೆ ಎಂದು ತಿಳಿಸಿದೆ.

Karnataka Weather: Heavy rainfall forecast in these three districts

ಮತ್ತೊಂದೆಡೆ ಇಂದು ಕರಾವಳಿಯ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ ರಾಯಚೂರು, ಯಾದಗಿರಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಹೆಚ್ಚಳ ಆಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ದಾವಣಗೆರೆ, ಮೈಸೂರು, ಚಿತ್ರದುರ್ಗ, ಹಾಸನ, ಬಳ್ಳಾರಿ, ವಿಜಯನಗರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಹೆಚ್ಚಳ ಆಗುವ ಸಾಧ್ಯತೆಯಿದೆ. ಆದರೆ ರಾಜಧಾನಿ ಬೆಂಗಳೂರಿನಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಮಳೆರಾಯ ಆರ್ಭಟಿಸುವ ಸಾಧ್ಯತೆಯಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+