Karnataka Weather: ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ವರ್ಷದ ಮೊದಲ ಮಳೆ..ಇಂದು ಎಲ್ಲೆಲ್ಲಿ?

Karnataka Weather: ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲಿನ ಬೇಗೆಯಿಂದ ಜನರು ಬೆಂದು ಹೋಗಿದ್ದಾರೆ. ಮತ್ತೊಂದೆ ಭೀಕರ ಬರದಿಂದ ರೈತಾಪಿ ವರ್ಗದವರು ದಿಕ್ಕು ತೋಚದವರಂತೆ ಕಂಗೆಟ್ಟು ಹೋಗಿದ್ದಾರೆ. ಈ ನಡುವೆಯೇ ಮೊನ್ನೆಯಷ್ಟೇ ಮಂಜಿನ ನಗರಿ ಕೊಡಗು, ದಕ್ಷಿಣ ಕನ್ನಡ, ನಿನ್ನೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ವರುಣ ಕೃಪೆ ತೋರಿ ಕಾದಿದ್ದ ಭೂಮಿಯನ್ನು ತಂಪೆರೆದಿದ್ದಾರೆ. ಹಾಗಾದರೆ ಮುಂದಿನ ದಿನಗಳಲ್ಲಿ ಯಾವೆಲ್ಲ ಭಾಗಗಳಲ್ಲಿ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ ಎಂದು ಇಲ್ಲಿ ತಿಳಿಯಿರಿ.

ಇನ್ನು ಇಂದು ಕೂಡ (ಮಾರ್ಚ್‌ 15) ಕೊಡಗು ಮತ್ತು ದಕ್ಷಿಣ ಕನ್ನಡದ ಜಿಲ್ಲೆಯ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನುವ ಮುನ್ಸೂಚನೆ ಇದೆ.

Karnataka Weather Heavy rainfall forecast in this parts of Karnakata on March 15 2024

ಮಂಜಿನ ನಗರಿ ಮಡಿಕೇರಿ, ಭಾಗಮಂಡಲ, ವಿರಾಜಪೇಟೆ ಮತ್ತು ದಕ್ಷಿಣ ಕನ್ನದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾರ್ಚ್ 20ರ ನಂತರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನು ಹೊರತುಪಡಿಸಿ ಇನ್ನೂ ರಾಜ್ಯದ ಬೇರೆ ಬೇರೆ ಕಡೆ ಒಣಹವೆ ಮುಂದುವರೆಯಲಿದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಉಷ್ಣಾಂಶ ಹೆಚ್ಚಿರಲಿದ್ದು, ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದೆ ಎನ್ನುವ ಮುನ್ಸೂಚನೆ ಇದೆ.

ಅದರಲ್ಲೂ ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಬೀದರ್, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ಹಲವೆಡೆ ಬಿಲಿನಿನ ಪ್ರಮಾಣ ಹೆಚ್ಚಿರಲಿದೆ ಎನ್ನುವ ಮುನ್ಸೂಚನೆ ಇದೆ. ಇನ್ನು ಮಾರ್ಚ್ ಅಂತ್ಯದ ವೇಳೆಗೆ 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುವ ಸಾಧ್ಯತೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ದೇಶದ ಈ ಭಾಗಗಳಲ್ಲಿ ಮಳೆ: ಇನ್ನು ದೇಶದ ಹಲವಾರು ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆ ನೀಡಿದೆ. ಜೊತೆಗೆ ಮಾರ್ಚ್ 15ರಂದು ಕರ್ನಾಟಕದ ಪ್ರತ್ಯೇಕ ಭಾಗಗಲ್ಲಿ ಅಲ್ಲಿಲ್ಲಿ ಮಳೆ, ಇನ್ನು ಬಹುತೇಕ ಭಾಗಗಲ್ಲಿ ಬಿಸಿಲಿನ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಮುಂದಿನ ನಾಲ್ಕು ದಿನಗಳಲ್ಲಿ ಕೇರಳ, ಮಾಹೆ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಬಿಸಿಲಿನ ವಾತಾವರಣ ಇರುತ್ತದೆ. ಜಮ್ಮು ಮತ್ತು ಕಾಶ್ಮೀರದ ಅಲ್ಲಲ್ಲಿ ಮಾರ್ಚ್ 22-24ರ ನಡುವೆ ಮಳೆಯಾಗುವ ಸಾಧ್ಯತೆಯಿದೆ. ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮಾರ್ಚ್ 15 ಮತ್ತು 16 ರಂದು ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಮಾರ್ಚ್ 17 ಮತ್ತು 18ರಂದು ಪೂರ್ವ ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಆಲಿಕಲ್ಲು ಮಳೆ ಬೀಳಲಿದೆ ಎಂದು IMD ಮುನ್ಸೂಚನೆ ನೀಡಿದೆ. ಮಾರ್ಚ್ 15 ರಿಂದ 20ರವರೆಗೆ ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಪ್ರತ್ಯೇಕ ಸ್ಥಳಗಳ ಅಲ್ಲಲಿ ಸಾಧಾರಣ ಮಳೆ ಸುರಿಯಲಿದೆ ಎಂದು IMD ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+