Karnataka Weather: ಮುಂದಿನ ಎರಡು ದಿನಗಳ ಕಾಲ ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಕರ್ನಾಟಕ, ಮಾರ್ಚ್‌, 23: ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಿಲ್ಲದೆ ಬಿಸಿಲಿನ ಬೇಗೆಯಿಂದ ಜನ ಬೆಂದು ಹೋಗಿದ್ದು, ಮಳೆರಾಯ ಯಾವಾ ಭೂಮಿ ತಂಪೆರೆಯುತ್ತಾನೋ ಎಂದು ಮೋಡದ ಕಡೆ ಮುಖ ಮಾಡಿ ಕೂತಿದ್ದಾರೆ. ಇನ್ನು ಹಲವೆಡೆ ಮಾತ್ರ ಈಗಾಗಲೇ ವರುಣ ಕೃಪೆ ತೋರಿದ್ದಾನೆ. ಹಾಗೆಯೇ ಇಂದಿನಿಂದ 2 ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಇಂದು ಗಹಾಗೂ ಇನ್ನು ಎರಡು ದಿನಗಳ ಕಾಳ ಯಾವೆಲ್ಲ ಭಾಗಗಳಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಗಾಗ ಕೆಲವೆಡೆ ಮಾತರ ಮೋಡ ಕವಿದ ವಾತಾವರಣ ನಿರ್ಮಾಣವಾಗುತ್ತಿದೆ. ಇದನ್ನ ಹೊರತುಪಡಿಸಿದರೆ ನಗರದ ಬಹುತೇಕ ಭಾಗಗಳಲ್ಲಿ ಬಿಸಿಲಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದ್ದು, ಜನರು ಮನೆಯಿಂದ ಹೊರಗಡೆ ಕಾಲಿಡದಂತಹ ಪರಿಸ್ಥಿತಿ ನಿರ್ಮಾಣವಾಗಿಬಿಟ್ಟಿದೆ. ಇದರ ನಡುವೆಯೂ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ.

Karnataka Weather Heavy rainfall forecast in this parts of state for next two days

ರಾಜ್ಯದಲ್ಲಿ ಇಂದಿನಿಂದ 2 ದಿನಗಳ ಕಾಲ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ಕೊಡಗು, ಮೈಸೂರು, ದಾವಣಗೆರೆ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಮಳೆರಾಯ ಕೃಪೆ ತೋರಲಿದ್ದಾನೆ ಎಂದು ತಿಳಿಸಿದೆ. ಹಾಗೆಯೇ ಮುಂದಿನ ಕೆಲವೇ ದಿನಗಳಲ್ಲಿ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಭಾಗಗಲ್ಲಿಯೂ ಸಾಧಾರಣ ಮಳೆ ಸುರಿಯಲಿದೆ ಎಂದು ನೀರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಮಾಡಿದೆ.

ಇನ್ನು ಇಂದು (ಮಾರ್ಚ್‌ 23) ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆ ಸುರಿಯಲಿದೆ. ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಮತ್ತೊಂದೆಡೆ ಬೆಳಗಾವಿ, ಬೀದರ್, ಬಾಗಲಕೋಟೆ, ಗುಲ್ಬರ್ಗ, ರಾಯಚೂರು ಜಿಲ್ಲೆಗಳಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಿರುವ ಕಾರಣ ಮಳೆ ಬೀಳುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ರಾಜ್ಯ ರಾಜಧಾನು ಇಂದು ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲು ಆಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+