Karnataka weather: ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
ಕರ್ನಾಟಕ, ನವೆಂಬರ್, 08: ಆಗಸ್ಟ್‌ನಿಂದ ಆಕ್ಟೋಬರ್ ತಿಂಗಳ ಕೊನೆಯವರೆಗೂ ಕರುಣೆ ತೋರದ ಮಳೆರಾಯ ನವೆಂಬರ್ ಆರಂಭವಾಗುತ್ತಿದ್ದಂತೆ ರಾಜ್ಯದ ಹಲವೆಡೆ ಅಬ್ಬರಿಸಿ ಬೊಬ್ಬರೆಯುತ್ತಿದ್ದಾನೆ. ಹಾಗೆಯೇ ಇದು ಕೂಡ (ನವೆಂಬರ್ 07) ರಾಜ್ಯ ರಾಜಧಾನಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಸುರಿಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಹೆಚ್ಚಿದೆ. ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ಹಾಸನ, ಕೊಡಗು, ಮೈಸೂರು ಸೇರಿದಂತೆ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಇನ್ನು ನಿನ್ನೆ (ನವೆಂಬರ್ 06) ಬೆಂಗಳೂರು, ಮೈಸೂರು, ದಾವಣಗೆರೆ, ಹುಬ್ಬಳ್ಳಿ ಸೇರಿದಂತೆ ಬಹುತೇಕ ಭಾಗಗಳಲ್ಲಿ ಮಳೆಯಾಗಿದೆ. ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಹಾಗಾದರೆ ಯಾವ್ಯಾವ ಏರಿಯಾದಲ್ಲಿ ಎಷ್ಟು ಮಳೆಯಾಗಿದೆ ಎಂದು ಇಲ್ಲಿ ತಿಳಿಯಿರಿ.
ಎಲ್ಲೆಲ್ಲಿ ಎಷ್ಟು ಮಳೆ?
1. ಯಲಹಂಕ - 11.4 ಸೆಂಟಿ ಮೀಟರ್
2. ನಾಗಪುರ 8.2 ಸೆಂಟಿ ಮೀಟರ್
3. ಪೀಣ್ಯ ಕೈಗಾರಿಕಾ ಪ್ರದೇಶ - 6.4 ಸೆಂಟಿ ಮೀಟರ್
4. ನಂದಿನಿ ಲೇಔಟ್ 7.5 ಸೆಂಟಿ ಮೀಟರ್
5. ಕೆಂಗೇರಿ 6 ಸೆಂಟಿ ಮೀಟರ್
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲು ಆಗಲಿದೆ. ಮತ್ತೊಂದೆಡೆ ಮಂಜಿನ ನಗರಿ ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲು ಆಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications