Karnataka weather: ರಾಜ್ಯದ ಈ ಜಿಲ್ಲೆಗಳಲ್ಲಿ ನವೆಂಬರ್‌ 25ರವರೆಗೂ ಭಾರೀ ಮಳೆ ಮುನ್ಸೂಚನೆ, ವಿವರ

ಕರ್ನಾಟಕ, ನವೆಂಬರ್‌, 19: ಮಳೆಯಿಲ್ಲದೆ ರಾಜ್ಯದ ಬಹುತೇಕ ಕಡೆ ಬರದ ಛಾಯೆ ಆವರಿಸಿದೆ. ಮತ್ತೆ ಕೆಲವೆಡೆ ಆಗಾಗ ಸಾಧಾರಣ ಮಳೆಯಾಗುತ್ತಿದೆ ಅಷ್ಟೆ. ಇನ್ನು ಇಂದಿನಿಂದ (ನವೆಂಬರ್‌ 19) 25ರವರೆಗೂ ಭಾರೀ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಷ್ಟು ಜಿಲ್ಲೆಗಳಲ್ಲಿ ಮಳೆಯಾಗಲಿದ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಗಾಗ ಮಳೆ ಸುರಿಯುತ್ತಿದೆ. ಹಾಗೆಯೇ ಮಂಗಳೂರು, ಕೊಡದು, ಉಡುಪಿ, ಕಾರವಾರ ಜಿಲ್ಲೆಗಳಲ್ಲೂ ಕೂಡ ಆಗಾಗ ಮಳೆ ಬೀಳುತ್ತಿದೆ. ಇನ್ನು ರಾಜ್ಯದ ದಕ್ಷಿಣ ಒಳನಾಡಿನ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಅಂದರೆ ನವೆಂಬರ್‌ ಮಳೆಯಾಗಲಿದೆ ರಿಂದ 25ರವರೆಗೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Karnataka weather: Heavy rainfall forecast till November 25 in these districts of state

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ಕೋಲಾರ, ಕೊಡಗು, ಹಾಸನ, ರಾಮನಗರ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮತ್ತೊಂದೆಡೆ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮಳೆ ಸುರಿಯುವ ಸಾಧ್ಯತೆಯಿದೆ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿನಿನ ವಾತಾವರಣ ಮುಂದುವರೆಯಲಿದೆ ಎಂದು ತಿಳಿಸಿದೆ.

ಯಾವ್ಯಾವ ರಾಜ್ಯಗಳಲ್ಲಿ ಮಳೆ?

ಭಾರತೀಯ ಹವಾಮಾನ ಇಲಾಖೆ ತಮಿಳುನಾಡು, ಕೇರಳ, ಕರಾವಳಿ ಆಂಧ್ರಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಅಲ್ಲಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆ ಇದೆ. ಇನ್ನು ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಮಂಜು ಮುಚ್ಚಿದ ವಾತಾವರಣ ಇರಲಿದೆ ಎಂದು ತಿಳಿಸಿದೆ. ಹಲವಾರು ರಾಜ್ಯಗಳಲ್ಲಿನ

ರಾಷ್ಟ್ರ ರಾಜಧಾನಿ ನಹದೆಹಲಿಯಲ್ಲಿ ಬಹುತೇಕ ಭಾಗಗಳಲ್ಲಿ ಮಂಜು ಮುಸುಕಿದ ವಾತಾವರಣ ಇದ್ದು, ಗರಿಷ್ಠ 28 ಮತ್ತು ಕನಿಷ್ಠ ತಾಪಮಾನ 12 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಶನಿವಾರ ಗರಿಷ್ಠ 28.9 ಮತ್ತು ಕನಿಷ್ಠ 12.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.

ಕೋಲ್ಕತ್ತಾದಲ್ಲಿ ಭಾನುವಾರ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ಗರಿಷ್ಠ 30 ಮತ್ತು ಕನಿಷ್ಠ ತಾಪಮಾನವು 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಇನ್ನು ಸಿಕ್ಕಿಂ ಮತ್ತು ಪಶ್ಚಿಮ ಬಂಗಾಳದ ಹಲವು ಕಡೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆಯುವ ಮುನ್ಸೂಚನೆ ನೀಡಿದೆ. ಹಾಗೆಯೇ ಒಡಿಶಾದ ಎಲ್ಲಾ ಜಿಲ್ಲೆಗಳಲ್ಲೂ ಬಿಸಿಲಿನ ವಾತಾವಾರಣ ಕಂಡುಬರಲಿದೆ. ಭುವನೇಶ್ವರದಲ್ಲಿ ಗರಿಷ್ಠ 32 ಮತ್ತು ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ತಿಳಿಸಿದೆ.

ಶಿಮ್ಲಾದಲ್ಲಿ ಹಲವೆಡೆ ಮೋಡ ಕವಿದ ವಾತಾವರಣ ಇರುತ್ತದೆ. ಗರಿಷ್ಠ 19 ಮತ್ತು ಕನಿಷ್ಠ ತಾಪಮಾನ 9 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಇನ್ನು ಕಲವೆಡೆ ಒಣಹವೆ ಮುಂದುವರೆಯಲಿದೆ ಎನ್ನುವ ಮಾಹಿತಿಯನ್ನು ನೀಡಿದೆ.
ತಮಿಳುನಾಡಿನ ಹಲವೆಡೆ ಮಳೆ

ಇನ್ನು ಕಳೆದ 24 ಗಂಟೆಗಳಲ್ಲಿ ತಮಿಳುನಾಡಿನ ಹಲವೆಡೆ ಮಳೆ ಆಗಿದೆ. ಕಾರೈಕಲ್ ಭಾಗದಲ್ಲಿ ಸಾಧಾರಣ ಮಳೆಯಾಗಿದ್ದರೆ, ಪುದುಚೇರಿಯಲ್ಲಿ ಅತೀ ಕಡಿಮೆ ಮಳೆಯಾಗಿದೆ. ಈ ಪ್ರದೇಶದ ಬಯಲು ಸೀಮೆಯಲ್ಲಿ ನಾಮಕ್ಕಲ್‌ನಲ್ಲಿ ಕನಿಷ್ಠ ಕನಿಷ್ಠ ತಾಪಮಾನ 19.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಈರೋಡ್ ಈ ಪ್ರದೇಶದಲ್ಲಿ ಗರಿಷ್ಠ ತಾಪಮಾನ 34.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+