Karnataka weather: ಈ ಜಿಲ್ಲೆಗಳಲ್ಲಿ ನವೆಂಬರ್ 8ರವರೆಗೂ ಭಾರೀ ಮಳೆ ಮುನ್ಸೂಚನೆ
ಕರ್ನಾಟಕ, ನವೆಂಬರ್, 02: ಈ ಬಾರಿ ಮುಂಗಾರು ಕೈಕೊಟ್ಟ ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸಿದೆ. ಇದೀಗ ಹಿಂಗಾರು ಮಳೆಯದ್ದೇ ಹಾವಳಿ ಎನ್ನುವ ಮಾತು ಕೇಳಿಬರುತ್ತಿತ್ತು. ಆದರೆ ಮಳೆ ಮರೆಯಾಗುತ್ತಿದ್ದು, ಇದು ಕೋಡ ಸುಳ್ಳಾದಂತಾಗಿದೆ. ಮತ್ತೊಂದೆಡೆ ಹವಾಮಾನ ಇಲಾಖೆ ನವೆಂಬರ್ 4ರಿಂದ 8ರವರೆಗೂ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಹಾಗಾದರೆ ಯಾವ್ಯಾವ ಕಡೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಈಗಾಗಲೇ ಮುಂಗಾರು ಕೈಕೊಟ್ಟಿದ್ದು, ಇನ್ನು ಹಿಂಗಾರು ಕೈಹಿಡಿಯುತ್ತದೆ ಎಂದು ರೈತರು ನಂಬಿಕೆಯಿಂದಿದ್ದರು. ಆದರೆ ಹಿಂಗಾರು ಕೂಡ ಕೈಕೊಡುವ ಲಕ್ಷಣಗಳು ಎದ್ದು ಕಾಣುತ್ತಿವೆ. ಇದೀಗ ರಾಜ್ಯದಲ್ಲಿ ಚಳಿಗಾಳಿ ಶುರುವಾಗಿದೆ. ಉತ್ತರ ಒಳನಾಡಿನಲ್ಲಿ ಬಿಸಿಲಿನ ವಾತಾವರಣ ಮುಂದುವರೆದಿದ್ದು, ಗರಿಷ್ಠ ಉಷ್ಣಾಂಶವು ಏರುತ್ತಲೇ ಇದೆ. ಇನ್ನು ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಾತ್ರ ಮಳೆ ಬೀಳುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ನವೆಂಬರ್ 4ರಿಂದ 8ರವರೆಗೂ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಒಳನಾಡಿನ ಶಿವಮೊಗ್ಗ, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮೈಸೂರು, ತುಮಕೂರು, ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಇನ್ನಳಿದ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆಯು ಮುನ್ಸೂಚನೆ ಇದೆ.
ಹಾಗೆಯೇ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಾತ್ರ ಗಡುಗು ಸಹಿತ ಮಳೆ ಸುರಿಯಲಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಳ ಆಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.












Click it and Unblock the Notifications