Karnataka weather: ಈ ಜಿಲ್ಲೆಗಳಲ್ಲಿ ಅಕ್ಟೋಬರ್‌ 25ರವರೆಗೂ ಭಾರೀ ಮಳೆ ಮುನ್ಸೂಚನೆ, ಎಲ್ಲೆಲ್ಲಿ?, ಮಾಹಿತಿ

ಕರ್ನಾಟಕ, ಅಕ್ಟೋಬರ್‌, 18: ಇದೀಗ ಮಳೆ ಇಲ್ಲದ ಪರಿಣಾಮ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಲೇ ಇದೆ. ಇನ್ನು ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಾತ್ರ ಆಗಾಗ ಸಾಧಾರಣ ಮಳೆಯಾಗುತ್ತಿದೆ ಅಷ್ಟೇ. ಹಾಗೆಯೇ ಮತ್ತೊಂದೆಡೆ ಅಕ್ಟೋಬರ್‌ 25ರವರೆಗೂ ಈ ಜಿಲ್ಲೆಗಳಲ್ಲಿ ಮಾತ್ರ ಭಾರೀ ಮಳೆಯಾಗಲಿದ್ದು, ಕೆಲವು ಕಡೆ ಜಿನುಗು ಮಳೆ ಸುರಿಯುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ರಾಜ್ಯ ರಾಜಧಾನಿ ಬೆಂಗಳೂರು, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಆಗಾಗ ಮಳೆಯಾಗುತ್ತಿದೆ. ಇದನ್ನು ಹರತುಪಡಿಸಿದರೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಿಲ್ಲದೆ ಬಿಸಲಿನ ಧಗೆ ಹೆಚ್ಚಾಗುತ್ತಲೇ ಇದೆ. ಇದರಿಂದ ರೈತರು ಬೆಳೆದ ಬೆಳೆಗಳೆಲ್ಲವೂ ಸೂರ್ಯನ ಶಾಖಕ್ಕೆ ಮುದುಡಿ ನೆಲಕಚ್ಚಿತ್ತಿವೆ. ಇನ್ನು ಅಕ್ಟೋಬರ್ 25ರವರೆಗೆ ರಾಜ್ಯಗಳಲ್ಲಿ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka weather: Heavy rainfall forecast till October 25 in these districts

ಅದರಲ್ಲೂ ಮಂಜಿನ ನಗರಿ ಕೊಡಗು ಮತ್ತು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಈ ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. ಇನ್ನು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳಲಿದೆ ಎಂದು ಮನ್ಸೂಚನೆ ನೀಡಿದೆ.

ಈಗಾಗಲೇ ವಿರಾಜಪೇಟೆ, ಮಂಗಳೂರು, ಪಣಂಬೂರು, ಉಡುಪಿ, ತಿ,ನರಸೀಪುರ, ಹುಣಸೂರು, ಬೆಳ್ತಂಗಡಿ, ಧರ್ಮಸ್ಥಳ, ಯಲ್ಲಾಪುರ, ಗೋಕರ್ಣ, ಸಿದ್ದಾಪುರ, ಶೃಂಗೇರಿ, ಮೈಸೂರು, ಮುಲ್ಕಿ, ಪುತ್ತೂರು, ಕೊಲ್ಲೂರು, ಕಡೂರು, ತರೀಕೆರೆ, ಕಮ್ಮರಡಿ, ಹಾರಂಗಿ, ಅರಕಲಗೂಡು, ಹಾಸನ, ಬೆಳ್ಳೂರು, ಕುಣಿಗಲ್​ನಲ್ಲಿ ಮಳೆ ಬಿದ್ದಿದ್ದು, ಕೆಆರ್​ ಪೇಟೆಯಲ್ಲಿ ಅತೀ ಹೆಚ್ಚು ಮಳೆ ಸುರಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇನ್ನು ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ. ರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗಲಿದದೆ ಎನ್ನುವ ಮಾಹಿತಿಯನ್ನು ರವಾನಿಸಿದೆ.

ಮತ್ತೊಂದೆಡೆ ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಚಿತ್ರದುರ್ಗ, ಹಾಸನ, ಬಳ್ಳಾರಿ, ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆ ಹಗುರ ಮಳೆ ಬೀಳುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲು ಆಗಲಿದೆ. ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎನ್ನುವ ಮಾಹಿತಿಯನ್ನು ನೀಡಿದೆ.

ಒಟ್ಟಿನಲ್ಲಿ ಹವಮಾನ ಇಲಾಖೆಯ ಮಾಹಿತಿಯ ಪ್ರಕಾರ ಕೆಲವೇ ಜಿಲ್ಲೆಗಳಲ್ಲಿ ಮಾತ್ರ ಇಂದು ಮಳೆಯಾಗುವ ನಿರೀಕ್ಷೆಯಿದ್ದು, ಇನ್ನು ಬಹುತೇಕ ಜಿಲ್ಲೆಗಳಲ್ಲಿ ನಿನ್ನೆಗಿಂತ ಇಂದು ಬಿಸಿನಿಲ ತಾಪಮಾನ ಹೆಚ್ಚಾಗುವ ಸಂಭವ ಇದೆ. ಒಂದು ವೇಳೆ ಮೈಸೂರು, ಕೊಡಗು ಭಾಗದಲ್ಲಿ ಒಂದು ವಾರ ಮಳೆಯಾದರೆ ಕೆಆರ್‌ಎಸ್‌ ಜಲಾಶಯದಲ್ಲಿ ನೀರಿನ ಮಟ್ಟ ಕೊಂಚ ಏರಿಕೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+