Karnataka Rain Alert: ರಾಜ್ಯದಲ್ಲಿ ವರುಣ ದೇವನ ಆಗಮನದ ಮುನ್ಸೂಚನೆ: ಎಲ್ಲೆಲ್ಲಿ ಮಳೆ?

ಬೆಂಗಳೂರು, ಮಾರ್ಚ್‌ 04: ಮಳೆ ಬಾರದೆ ಭೂಮಿ ಬಾಯಿ ಬಿಟ್ಟಿದೆ. ಕಳೆದ ವರ್ಷ ವರುಣ ದೇವನ ಮುನಿಸಿನಿಂದಾಗಿ ರೈತ ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯದಲ್ಲಿ ಸಂಪೂರ್ಣ ಬರ ಪರಿಸ್ಥಿತಿ ಎದುರಾಗಿತ್ತು. ಇನ್ನೂ ಬರ ಪರಿಸ್ಥಿತಿಯ ಪರಿಣಾಮ ಬೇಸಗೆ ಆರಂಭದ ವೇಳೆಯೇ ಈ ಬಾರಿ ರಾಜ್ಯದ ಹಲವೆಡೆ ನೀರಿನ ಕೊರತೆ ಉಂಟಾಗಿದ್ದು, ರೈತಪಿ ವರ್ಗಕ್ಕೆ ಹವಾಮಾನ ಇಲಾಖೆ ಶುಭ ಸುದ್ದಿ ನೀಡಿದೆ.

ಹೌದು, ಮಳೆ ನಿರೀಕ್ಷೆಯಲ್ಲಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಗುಡ್ ನ್ಯೂಸ್ ನೀಡಿದ್ದು, ಮುಂದಿನ 2 ವಾರ ಭರ್ಜರಿ ಮಳೆ ಮುನ್ಸೂಚನೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಬಿಸಿಲಿನ ಧಗೆ ಹೆಚ್ಚಾಗುದ್ದು, ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಹವಾಮಾನ ಇಲಾಖೆ ಮಾಹಿತಿಯ ಪ್ರಕಾರ ಕರ್ನಾಟಕದಲ್ಲಿ ಮುಂದಿನ ಕೆಲ ದಿನದಲ್ಲಿ ಮಳೆಯಾಗುವ ನಿರೀಕ್ಷೆಯಿದೆ.

Karnataka Weather Heavy Rainfall Is Expected In The State For The Next 2 Weeks

ಬರಗಾಲದ ಪರಿಸ್ಥಿತಿಯಿಂದ ಮಾರ್ಚ್ ನಿಂದ ಮೇ ವರೆಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಲಿದೆ. ಈಗಾಗಲೇ ಟ್ಯಾಂಕರ್ ಮತ್ತು ಬೋರ್ವೆಲ್ ಗಳ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಂಡಿದ್ದು, ಖಾಸಗಿ ಬೋರ್ವೆಲ್ ಗಳು ಇಲ್ಲದ ಕಡೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಇತ್ತ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮಳೆಯಾದರೆ ನೀರಿನ ಅಭಾವ ಕೊಂಚ ಮಟ್ಟಿಗೆ ಕಡಿಮೆಯಾಗಲಿದೆ.

ಇನ್ನೂ ಮಾರ್ಚ್ ತಿಂಗಳ ಮೊದಲ 10 ದಿನ ದಾವಣಗೆರೆ, ಬೆಂಗಳೂರು, ಮೈಸೂರು, ಕೊಡಗು ಚಿಕ್ಕಮಗಳೂರು, ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಬಾರಿ ಒಳ್ಳೆಯ ಮುಂಗಾರು ಮಳೆ ನಿರೀಕ್ಷೆ ಮಾಡಲಾಗಿದ್ದು ಅದಕ್ಕೂ ಮುನ್ನ ನೈರುತ್ಯ ಮಾನ್ಸೂನ್ ಸಮಯದಲ್ಲಿ ಗುಡುಗು ಸಿಡಿಲು ಸಹಿತ ಮಳೆ ಬೀಳುವ ನಿರೀಕ್ಷೆ ಇದೆ.

ಈ ಮಳೆ ದಕ್ಷಿಣ ಭಾರತಕ್ಕೂ ವ್ಯಾಪಿಸಲಿದ್ದು ಹವಾಮಾನ ಇಲಾಖೆ ತಜ್ಞರ ಪ್ರಕಾರ ಕರ್ನಾಟಕದಲ್ಲಿ ಮುಂದಿನ ಕೆಲ ದಿನದಲ್ಲಿ ಮಳೆ ಬೀಳುವ ನಿರೀಕ್ಷೆ ಇದೆ. ಮಾರ್ಚ್ ತಿಂಗಳ ಮೊದಲ 10 ದಿನ ದಾವಣಗೆರೆ, ಬೆಂಗಳೂರು, ಮೈಸೂರು, ಕೊಡಗು ಚಿಕ್ಕಮಗಳೂರು, ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಬರಲಿದೆ ಅಂತಾ ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+