Karnataka Weather: ರಾಜ್ಯಾದ್ಯಂತ ತೀವ್ರ ಚಳಿ ಮುನ್ಸೂಚನೆ, ಕರಾವಳಿಯಲ್ಲಿ ಅಧಿಕ ತಾಪಮಾನ
Karnataka Cold Weather Alert: ಕರ್ನಾಟಕದಾದ್ಯಂತ ಮಳೆ ಅಬ್ಬರ ಕೊನೆಗೊಂಡಿದೆ. ಎಲ್ಲೆಡೆ ಅಧಿಕ ತಾಪಮಾನ ಹಾಗೂ ಅಲ್ಲಲ್ಲಿ ಮೈಕೊರೆವ ಚಳಿಯ ವಾತಾವರಣ ಸೃಷ್ಟಿಯಾಗಿದೆ. ಬಿಸಿಲು ಹೆಚ್ಚಾಗಿ ಕಂಡು ಬರುವ ಉತ್ತರ ಕರ್ನಾಟಕದ ಭಾಗಗಳಲ್ಲಿ ಮೈಕೊರೆವ ಚಳಿ ಸೃಷ್ಟಿಯಾಗಿದೆ. ಬೆಳಗ್ಗೆ ದಟ್ಟ ಮಂಜು, ಚಳಿ ಆವರಿಸಿದೆ. ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಇದೇ ರೀತಿಯ ವಾತಾವರಣ ಕಂಡು ಬರಲಿದೆ. ಬೆಂಗಳೂರಿನಲ್ಲೂ ಅಧಿಕ ಚಳಿ ಮುಂದುವರಿವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಿಂಗಾರು ಮಳೆ ಕ್ರಮೇಣ ಕಡಿಮೆಯಾದ ಬೆನ್ನಲ್ಲೆ ಚಳಿ ಆವರಿಸಿಕೊಂಡಿದೆ. ಕರಾವಳಿ ಭಾಗದಲ್ಲಿ, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ತೀವ್ರ ಚಳಿ ಆವರಿಸಿದೆ. ನಂತರ ದಕ್ಷಿಣ ಒಳನಾಡಿನ ಬೆಂಗಳೂರು, ತುಮಕೂರು, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಆವರಿಸಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಿನ ಚಳಿ ನಿರೀಕ್ಷೆ ಇದೆ.

ಕರಾವಳಿಯಲ್ಲಿ ರಾಜ್ಯದ ಅತ್ಯಧಿಕ ತಾಪಮಾನ!
ಉತ್ತರ ಕರ್ನಾಟಕದ ಒಂದೆರಡು ಜಿಲ್ಲೆ ಮತ್ತು ಕರಾವಳಿ ಭಾಗದಲ್ಲಿ ಅಧಿಕ ತಾಪಮಾನ ದಾಖಲಾಗಿದೆ. ಬೆಳಗ್ಗೆ ಮತ್ತು ರಾತ್ರಿ ಚಳಿ ಕಂಡು ಬರುತ್ತಿದೆ. ದಟ್ಟ ಮಂಜು ಆವರಿಸಿಕೊಳ್ಳುತ್ತದೆ. ಉಳಿದಂತೆ ಒಣಹವೆ ವಾತಾವರಣ ಸೃಷ್ಟಿಯಾಗುತ್ತಿದೆ. ಕಾರವಾರದಲ್ಲಿ 35 ಡಿಗ್ರಿ ಸೆಲ್ಸಿಯಸ್, ಹೊನ್ನಾವರ 34.9 ಡಿಗ್ರಿ ಸೆಲ್ಸಿಯಸ್, ಮಂಗಳೂರು ವಿಮಾನ ನಿಲ್ದಾಣ 32 ಡಿಗ್ರಿ ಸೆಲ್ಸಿಯಸ್, ದಕ್ಷಿಣ ಕನ್ನಡ 33 ಡಿಗ್ರಿ ಸೆಲ್ಸಿಯಸ್, ಕಲಬುರಗಿ 32.5 ಡಿಗ್ರಿ ಸೆಲ್ಸಿಯಸ್, ಹಾವೇರಿ 30ಡಿಗ್ರಿ ಸೆಲ್ಸಿಯಸ್, ವಿಜಯಪುರ 30 ಡಿಗ್ರಿ ಸೆಲ್ಸಿಯಸ್, ರಾಯಚೂರು 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.
ಬೆಂಗಳೂರು ಹವಾಮಾನ, ಚಳಿ ಮುನ್ಸೂಚನೆ
ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ತಾಪಮಾಣ ಪ್ರಮಾಣ ಹಾಗೂ ಚಳಿ ಪ್ರಮಾಣ ಹೆಚ್ಚಾಗಬಹುದೆಂದು ರಾಜ್ಯ ಹವಾಮಾನ ಇಲಾಖೆ ಅಂದಾಜಿಸಿದೆ. ಇನ್ನೂ ಬೆಂಗಳೂರಿನ ಕೆಲವೆಡೆ ಭಾಗಶಃ ಮೋಡ ಕವಿದ ವಾತಾವರಣ ಸೃಷ್ಟಿಯಾಗಲಿದೆ. ಬೆಳಗ್ಗೆ ದಟ್ಟ ಮಂಜು ಆವರಿಸಲಿದೆ. ಹೆಚ್ಚಿನ ಚಳಿ ನಿರೀಕ್ಷಿಸಲಾಗಿದೆ. ಆಗಾಗ ಬಿಸಿಲು ಕಣ್ಮರೆಯಾಗಲಿದೆ. ನಗರದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಕಂಡು ಬರಲಿದೆ ಎಂದು ಇಂದಿನ ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.












Click it and Unblock the Notifications