Karnataka Weather: ಕರ್ನಾಟಕದಲ್ಲಿ ಇನ್ನೆಷ್ಟು ದಿನ ಇರಲಿದೆ ಚಳಿ, ಜನವರಿ 14ರ ಹವಾಮಾನ ವರದಿ
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಚಳಿ ಪ್ರಮಾಣವು ತುಸು ಇಳಿಕೆಯಾಗಿದೆ. ಇಂದಿನಿಂದ ಚಳಿ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದೆ. ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದಲ್ಲಿ ಮಳೆ ಆಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಚಂಡಮಾರುತದ ತೀವ್ರತೆ ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಅಲ್ಲಲ್ಲಿ ಚದುರಿದಂತೆ ಮಳೆ ಆಗಿದೆ. ಜನವರಿ 14ರ ಹವಾಮಾನ ಹೇಗಿದೆ ಎನ್ನುವ ವಿವರ ಇಲ್ಲಿದೆ.
ಮುಂದಿನ ಮೂರು ದಿನಗಳವರೆಗೆ ಹವಾಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ಕನಿಷ್ಠ ತಾಪಮಾನದಲ್ಲಿ 2ರಿಂದ 3 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗಲಿದೆ. ಮುಂದಿನ 5 ದಿನಗಳ ವರೆಗೆ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳು ಇರುವುದಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಹವಾಮಾನ ಹೇಗಿದೆ ?
ಕೊಮೊರಿನ್ ಪ್ರದೇಶ ಮತ್ತು ನೆರೆಹೊರೆಗಳಲ್ಲಿ ವಾಯು ಚಂಡಮಾರುತದ ಮೇಲ್ಭಾಗದ ಪರಿಚಲನೆಯು ಮನ್ನಾರ್ ಕೊಲ್ಲಿ ಮತ್ತು ನೆರೆಹೊರೆಗಳಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿದೆ. ಚಂಡಮಾರುತದ ತೀವ್ರತೆ ಕಡಿಮೆಯಾಗಿದ್ದು, ಮಳೆಯಾಗುವ ಸಾಧ್ಯತೆ ಕಡಿಮೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಕನಿಷ್ಠ ತಾಪಮಾನದಲ್ಲಿ ಹೆಚ್ಚಳ
ಇನ್ನು ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಕೆಲವು ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 3ರಿಂದ 4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ. ಕರ್ನಾಟಕದ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಂಜು ಕವಿದ ವಾತಾವರಣವಿತ್ತು. ಇನ್ನು ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು 11ಡಿಗ್ರಿ ಸೆಲ್ಸಿಯಸ್ ದಾವಣಗೆರೆಯಲ್ಲಿ ದಾಖಲಾಗಿದೆ.
ಬೆಂಗಳೂರಿನಲ್ಲಿ ಹೇಗಿದೆ ಹವಾಮಾನ ?
ಬೆಂಗಳೂರಿನಲ್ಲಿ ಚಳಿ ಪ್ರಮಾಣದಲ್ಲಿ ಅಲ್ಪ ಇಳಿಕೆಯಾಗಿದೆ. ಮುಂಜಾನೆ ಸಮಯದಲ್ಲಿ ತುಸು ಚಳಿ ಹೆಚ್ಚಾಗಿದ್ದು, ಇಳಿದಂತೆ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಕಂಡು ಬಂದಿಲ್ಲ.
ಮುಂದಿನ 24 ಗಂಟೆಗಳ ವರೆಗೆ: ಬೆಂಗಳೂರಿನಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಕವಿದಿರುವ ಸಾಧ್ಯತೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಡಿಗ್ರಿ ಸೆಲ್ಸಿಯಸ್ ಮತ್ತು 17 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಮುಂದಿನ 48 ಗಂಟೆಗಳ ವರೆಗೆ: ಇನ್ನು ಮುಂದಿನ 48 ಗಂಟೆಗಳ ಅವಧಿಯಲ್ಲಿ ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಕವಿದಿರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಡಿಗ್ರಿ ಸೆಲ್ಸಿಯಸ್ ಹಾಗೂ 17 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ಮುನ್ಸೂಚನೆ ನೀಡಿದೆ.












Click it and Unblock the Notifications