Karnataka Weather: ರಾಜ್ಯದಲ್ಲಿ ಆಗಸ್ಟ್ 2ರವರೆಗೆ ಭಾರೀ ಮಳೆ, ಮಲೆನಾಡು-ಕರಾವಳಿಗೆ ಆರೆಂಜ್ ಅಲರ್ಟ್

ಬೆಂಗಳೂರು: ಕರ್ನಾಟಕದಾದ್ಯಂತ ಮುಂಗಾರು ಮಳೆ ಚುರುಕಾಗುವ ಲಕ್ಷಣಗಳು ಕಂಡು ಬರುತ್ತಿವೆ. ಸದ್ಯ ಕರಾವಳಿ, ದಕ್ಷಿಣ ಒಳನಾಡಿನ ಒಂದಷ್ಟು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀಯಿಂದ ಅತ್ಯಧಿಕ ಧಾರಾಕಾರ ಮಳೆ ಆಗಲಿದೆ. ಆಗಸ್ಟ್ 2ರವರೆಗೆ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಐಎಂಡಿ ಪ್ರಕಾರ, ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆ ಮತ್ತು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಭಾಗಗಳಲ್ಲಿ ಪ್ರತಿ ಗಂಟೆಗೆ 30-40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಸಹಿತ ಭಾರೀ ಮಳೆ ಆಗಲಿದ್ದು, ಎರಡು ದಿನ ಆರೆಂಜ್ ಅಲರ್ಟ್ ಕೊಡಲಾಗಿದೆ.

Karnataka Weather

ಆಗಸ್ಟ್ 2ರವರೆಗೆ ಮಳೆ ಎಚ್ಚರಿಕೆ

ಬೆಳಗಾವಿ, ಧಾರವಾಡ, ಬಾಗಲಕೋಟೆ ಸೇರಿದಂತೆ ಉತ್ತರ ಒಳನಾಡಿನ ಒಂದೆರಡು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಆಗುವ ಸಾಧ್ಯತೆ ಇದ್ದು, ಐದು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಆಗಸ್ಟ್ 2ರವರೆಗೆ ಹಾವೇರಿ, ಗದಗ, ಕೊಪ್ಪಳ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಸುರಿಯಲಿದ್ದು, ಇಡಿ ದಿನ ಮಬ್ಬು ಕವಿದ ತಂಪು ವಾತಾವರಣ ನಿರ್ಮಾಣವಾಗಲಿದೆ.

ಇನ್ನೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಬಳ್ಳಾರಿ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆ ಆಗಲಿದೆ.

ಕಳೆದ 24 ಗಂಟೆಗಳಲ್ಲಿ ಬಾಳೆಹೊನ್ನೂರು, ಗೋಣಿಕೊಪ್ಪಲು, ಕೊಪ್ಪಳ, ಹಾಸನ, ಹಿರಿಯೂರು, ಚಿತ್ರದುರ್ಗ, ಮಂಗಳೂರು, ಕಾರವಾರ, ಹೊನ್ನಾವರ, ಮೂಡಿಗೆರೆ, ಆಗುಂಬೆ ಸೇರಿದಂತೆ ವಿವಿಧ ಕಡೆಗಳಲ್ಲಿ ಉತ್ತಮ ಮಳೆ ಆಗಿದೆ.

ಬೆಂಗಳೂರು ಹವಾಮಾನ ಮುನ್ಸೂಚನೆ

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ, ತಂಪು ಗಾಳಿ ಬೀಸಲಿದೆ. ಕೆಲವು ಪ್ರದೇಶಗಳಲ್ಲಿ ಸಾಮಾನ್ಯದಿಂದ ಹಗುರ ಮಳೆ ಆಗಲಿದೆ. 30-40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಕಂಡು ಬರಲಿದೆ.

ಹವಾಮಾನ ವೈಪರೀತ್ಯದ ಅಪ್ಡೇಟ್

ಪೂರ್ವ-ಮಧ್ಯ ಅರಬ್ಬಿ ಸಮುದ್ರದಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 5.8 ಕಿಲೋ ಮೀಟರ್ ಎತ್ತರದಲ್ಲಿ ಅದಕ್ಕೆ ಹೊಂದಿಕೊಂಡು ಕೊಂಕಣ ಕರಾವಳಿ ಮೇಲ್ಭಾಗದಲ್ಲಿ ವಾಯು ಚಂಡಮಾರುತ ಪರಿಚಲನೆ ಮುಂದುವರಿದಿದೆ. ಇನ್ನೂ ಮಧ್ಯ ಭಾರತದ ವ್ಯಾಪ್ತಿಯಲ್ಲಿ ಸರಾಸರಿ ಸಮುದ್ರಮಟ್ಟದಿಂದ ಸುಮಾರು 5.8 ಕಿಲೋ ಮೀಟರ್ ಎತ್ತರದಲ್ಲಿ ಟ್ರಫ್ ಮುಂದುವರಿದಿದೆ. ಇದರ ಪರಿಣಾಮದಿಂದಲೂ ಮುಂಗಾರು ಮಳೆ ಚುರುಕಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+