Weather Report: ಮಾರ್ಚ್ ತಿಂಗಳಿನಲ್ಲಿ ರಾಜ್ಯದಲ್ಲಿ ಮಳೆ ಬರುತ್ತಾ?

ಕರ್ನಾಟಕ ರಾಜ್ಯಾದ್ಯಂತ ಬೇಸಿಗೆ ಬಿಸಿ ಜೋರಾಗಿದೆ. ಆರಂಭದಲ್ಲೇ ರಾಜ್ಯದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಆದಷ್ಟು ಬೇಗನೆ ಮಳೆ ಬಂದ್ರೆ ಸಾಕಪ್ಪಾ ಎಂದು ಜನ ಕಾಯುತ್ತಿದ್ದಾರೆ. ರಾಜ್ಯದ ಬಹುತೇಕ ಜಲಾಶಯಗಳಲ್ಲಿ ನೀರಿಲ್ಲ, ಕೃಷಿಗೆ ಇರಲಿ ಕುಡಿಯಲು ನೀರು ಸಿಕ್ಕರೆ ಸಾಕು ಎನ್ನುವಂತಾಗಿದೆ.

ಮಾರ್ಚ್ ತಿಂಗಳಿನಲ್ಲಿ ಹವಾಮಾನದ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ನಾಲ್ಕು ವಾರಗಳ ಕಾಲ ರಾಜ್ಯದಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಮಾಹಿತಿ ನೀಡಿದೆ. ಆದರೂ ರಾಜ್ಯದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಕೂಡ ಇದೆ.

Karnataka Weather Karnataka s Rainfall Outlook for the Next Four Weeks

ಕೊಡಗು ಮತ್ತು ಮೈಸೂರಿನ ಪಶ್ಚಿಮ ಭಾಗಗಳಲ್ಲಿ ಏಪ್ರಿಲ್ ಮೊದಲ ವಾರದಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ. ಮಾರ್ಚ್ ತಿಂಗಳು ರಾಜ್ಯದಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಮಾಹಿತಿ ನೀಡಿದೆ.

ಈ ಬಾರಿ ಕರಾಳ ಬೇಸಿಗೆ!

ಬೇಸಿಗೆ ಆರಂಭದಲ್ಲೇ ಕರ್ನಾಟಕ ಕಾದ ಹೆಂಚಿನಂತಾಗಿದೆ. ಕಳೆದ ವರ್ಷ ಮಳೆಗಾಲ ಸಂಪೂರ್ಣವಾಗಿ ಕೈಕೊಟ್ಟಿದ್ದರಿಂದ ಕೆರೆ ಕಟ್ಟೆಗಳಲ್ಲಿ ಹನಿ ನೀರಿಲ್ಲದಂತಾಗಿದೆ. ಸಾವಿರಾರು ಬೋರ್ ವೆಲ್‌ಗಳು ಬತ್ತಿಹೋಗಿವೆ. ಕನಿಷ್ಠ ಇನ್ನೂ ಎರಡು ತಿಂಗಳು ಇದೇ ಪರಿಸ್ಥಿತಿ ಮುಂದುವರೆಯಲಿದೆ ಎಂದು ಅಂದಾಜಿಸಲಾಗಿದೆ.

ರಾಜ್ಯದಲ್ಲಿ ಮಳೆ ಯಾವಾಗ ಬರುತ್ತೆ?

ಬಿರು ಬೇಸಿಗೆಯಿಂದ ಕಂಗಾಲಾಗಿರುವ ರಾಜ್ಯಕ್ಕೆ ಹವಾಮಾನ ಇಲಾಖೆ ಸಮಾಧಾನಕರ ಸುದ್ದಿ ನೀಡಿದೆ. ಈ ಬಾರಿ ರಾಜ್ಯದಲ್ಲಿ ವಾಡಿಕೆಯಂತೆ ಮಳೆಯಾಗಲಿದೆ ಎಂದು ತಿಳಿಸಿದೆ. ಎಲ್‌ ನಿನೋ ಪರಿಣಾಮ ಕಡಿಮೆಯಾಗಿದ್ದು ಈ ಬಾರಿ ಮುಂಗಾರು ಉತ್ತಮವಾಗಿರಲಿದೆ ಎಂದು ನಿರೀಕ್ಷೆ ಮಾಡಲಾಗಿದೆ.

ಮೇ - ಜೂನ್ ವೇಳೆಗೆ ಉತ್ತಮ ಮಳೆ ಸಾಧ್ಯತೆ

ಮೇ ಜೂನ್ ತಿಂಗಳ ವೇಳೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ತಜ್ಞರ ಪ್ರಕಾರ ಜೂನ್ ವೇಳೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದ್ದು, ನೀರಿನ ಸಮಸ್ಯೆ ಪರಿಹಾರವಾಗಲಿದೆ ಎಂದು ಅಂದಾಜಿಸಿದ್ದಾರೆ.

ಕಳೆದ ಬಾರಿ ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ರೈತಾಪಿ ವರ್ಗ ಭಾರಿ ನಷ್ಟ ಅನುಭವಿಸಿದೆ. ಬೇಸಿಗೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಿದೆ. ಈ ಬಾರಿಯಾದರೂ ಉತ್ತಮವಾಗಿ ಮಳೆಯಾದರೆ ಸಾಕು ಎಂದು ರೈತರು ಕಾಯುತ್ತಿದ್ದಾರೆ. ಆದರೆ ಮಳೆಗಾಲ ಆರಂಭವಾಗುವವರೆಗೂ ನೀರಿನ ಸಮಸ್ಯೆಯನ್ನು ನಿವಾರಿಸುವುದು ದೊಡ್ಡ ಸವಾಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+