ಕರ್ನಾಟಕದಲ್ಲಿ ಇಂದು ಮಳೆ: ಸೆ.11, 12ರಂದು ಯಾವ ಜಿಲ್ಲೆಗಳಲ್ಲಿ ಮಳೆ? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Weather: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿರುವ ಪರಿಣಾಮ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಅಲ್ಲಲ್ಲಿ ಮಾತ್ರ ಹಗುರ ಮಳೆಯಾಗುತ್ತಿದ್ದು, ಮಳೆ ಕೊರತೆಯಿಂದ ಹಲವು ಜಿಲ್ಲೆಗಳಲ್ಲಿ ಬರದ ಆತಂಕವೂ ಮುಂದುವರಿದಿದೆ. ಈ ನಡುವೆ ಸೆಪ್ಟೆಂಬರ್ 11 ಮತ್ತು 12ರಂದು ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯಾದ್ಯಂತ ವ್ಯಾಪಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಸದ್ಯ ಕಡಿಮೆಯಿದ್ದರೂ, ಕೆಲವು ಜಿಲ್ಲೆಗಳಲ್ಲಿ ಸ್ಥಳೀಯವಾಗಿ ಮೋಡ ಕವಿದ ವಾತಾವರಣ, ಹಗುರ ಮಳೆ ಹಾಗೂ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

Karnataka Weather Light Rain Likely in Several Districts on September 11-12 Coastal Interior Districts

ಸೆ.11ರಂದು ಯಾವ ಜಿಲ್ಲೆಗಳಲ್ಲಿ ಮಳೆ?

ಇಂದು, ಸೆಪ್ಟೆಂಬರ್ 11ರಂದು ರಾಜ್ಯದ ಮೂರು ಹವಾಮಾನ ವಲಯಗಳ ಕೆಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಜಿಲ್ಲೆಗಳಾದ ಬೀದರ್, ಕಲಬುರಗಿ, ಗದಗ, ಕೊಪ್ಪಳ, ಧಾರವಾಡ ಹಾಗೂ ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆ ಇದೆ.

ಬಳ್ಳಾರಿ, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಇಂದು ರಾಜ್ಯದ ಎಲ್ಲೆಡೆ ಮಳೆಯಾಗುವ ಸಾಧ್ಯತೆ ಇಲ್ಲ. ನಿರ್ದಿಷ್ಟ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಾತ್ರ ಸ್ಥಳೀಯ ಮಳೆಯಾಗುವ ಸಾಧ್ಯತೆ ಇದೆ.

Karnataka Weather:ಸೆ.12ರಂದು ಕೆಲ ಜಿಲ್ಲೆಗಳಲ್ಲಿ ಮಳೆ

ಸೆಪ್ಟೆಂಬರ್ 12ರಂದು ಕೂಡ ಕರಾವಳಿ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯ ಸಾಧ್ಯತೆ ಮುಂದುವರಿಯಲಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗಬಹುದು. ದರ್, ಕಲಬುರಗಿ, ವಿಜಯಪುರ, ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಇತ್ತ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇದರಿಂದ ಸೆಪ್ಟೆಂಬರ್ 12ರಂದು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯ ಚಟುವಟಿಕೆ ತುಸು ಹೆಚ್ಚಾಗುವ ನಿರೀಕ್ಷೆಯಿದೆ.

Karnataka Weather:ಕರ್ನಾಟಕದಲ್ಲಿ ಮುಂಗಾರು ಏಕೆ ದುರ್ಬಲ?

ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಕೆಲವು ಕಡೆಗಳಲ್ಲಿ ಮಾತ್ರ ಮಳೆಯಾಗಿದೆ. ಇದರ ಪರಿಣಾಮ ಕೃಷಿ ಚಟುವಟಿಕೆಗಳ ಮೇಲೂ ಪರಿಣಾಮ ಬೀರುತ್ತಿದ್ದು, ಜಲಾಶಯಗಳಿಗೆ ಒಳಹರಿವು ಹಾಗೂ ಗ್ರಾಮೀಣ ಪ್ರದೇಶಗಳ ನೀರಿನ ಲಭ್ಯತೆ ಕುರಿತು ಆತಂಕ ಮುಂದುವರಿದಿದೆ.

ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ?

ರಾಜಧಾನಿ ಬೆಂಗಳೂರಿನಲ್ಲೂ ಸೆಪ್ಟೆಂಬರ್ 11ರಂದು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸ್ಥಳೀಯವಾಗಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಆದರೆ ನಗರಾದ್ಯಂತ ವ್ಯಾಪಕ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಸದ್ಯ ಇಲ್ಲ.

ಸೆಪ್ಟೆಂಬರ್ 12ರಂದು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇರುವುದರಿಂದ ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲೂ ಸ್ಥಳೀಯ ಹವಾಮಾನ ಬದಲಾವಣೆ ಕಂಡುಬರುವ ಸಾಧ್ಯತೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+