Karnataka Rain Alert: ಕರ್ನಾಟಕದ ಈ ಜಿಲ್ಲೆಗಳಿಗೆ ಬಿರುಗಾಳಿ ಸಹಿತ ಭಾರೀ ಮಳೆ, ಉಳಿದೆಡೆ ಒಣಹವೆ ಮುನ್ಸೂಚನೆ

ಬೆಂಗಳೂರು: ಬಿಸಿಲಿನ ಸೆಖೆ, ಅಧಿಕ ತಾಪಮಾನದ ನಡುವೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರರಿಂದ ಐದು ದಿನ ಹಗುರದಿಂದ ಸಾಧಾರಣ ಮತ್ತು ಭಾರೀ ಮಳೆ ಆಗಲಿದೆ. ಒಣ ಹವೆಯಿಂದ ಕಂಗೆಟ್ಟಿದ್ದ ಒಳನಾಡು ಜಿಲ್ಲೆಗಳ ಜನರಿಗೆ ಪೂರ್ವ ಮುಂಗಾರು ಮಳೆ ತಂಪೆರೆಯಲಿದೆ. ಕೆಲವು ಜಿಲ್ಲೆಗಳಲ್ಲಿ ಗುಡುಗು-ಬಿರುಗಾಳಿ ಸಹಿತ ಭಾರೀ ಮಳೆಯ ಬರಲಿದ್ದು ಹವಾಮಾನ ಇಲಾಖೆ 'ಯೆಲ್ಲೋ ಅಲರ್ಟ್' ಘೋಷಿಸಿದೆ.

ಹವಾಮಾನ ವೈಪರೀತ್ಯಗಳ ತಿವ್ರತೆ ಕಾರಣದಿಂದ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳು ಹಾಗೂ ಉತ್ತರ ಒಳನಾಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆ ನಿರೀಕ್ಷೆ ಇದೆ. ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮೇ 10ರವರೆಗೆ ಬಿರುಗಾಳಿ-ಗುಡುಗು, ಮಿಂಚು ಸಹಿತ ಸಾಧಾರಣದಿಂದ ಭಾರೀ ಮಳೆ ಆಗಲಿದ್ದು, 'ಯೆಲ್ಲೋ ಅಲರ್ಟ್' ನೀಡಲಾಗಿದೆ. ಇಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ.ಯಷ್ಟಿರಲಿದೆ ಎಂದು ಹವಾಮಾನ ತಜ್ಞರು ಎಚ್ಚರಿಸಿದ್ದಾರೆ.

Karnataka Weather

ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ

ಉಡುಪಿ, ಮಂಗಳೂರು ಸೇರಿ ಕರಾವಳಿ ಭಾಗದಲ್ಲಿ ಕಳೆದ ಎರಡು ದಿನ ಸುರಿದಿದ್ದ ಮಳೆರಾಯ ಬ್ರೇಕ್ ನೀಡಿದ್ದಾನೆ. ಆ ಭಾಗದಲ್ಲಿ ಒಣಹವೆ ಮುಂದುವರಿಯಲಿದೆ. ಇನ್ನೂ ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ವಿಜಯನಗರ, ಚಾಮರಾಜನಗರ, ದಾವಣಗೆರೆ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ.

ತುಮಕೂರು, ರಾಮನಗರ, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಮಂಡ್ಯ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೊಪ್ಪಳ, ಹಾವೇರಿ, ಗದಗ, ಬೆಳಗಾವಿ, ರಾಯಚೂರು, ಯಾದಗಿರಿ, ಧಾರವಾಡ, ಕಲಬುರಗಿ, ಬೀದರ್, ವಿಜಯಪುರ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗಂಟೆಗೆ 40 ಕಿ.ಮೀ ವೇಗದ ಗಾಳಿ ಸಹಿತ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯ ಸಿಂಚನವಾಗಲಿದೆ. ಉತ್ತರ ಕರ್ನಾಟಕದಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಕಡಿಮೆ ಬಿಸಿಲು ಕಂಡು ಬರಲಿದ್ದು, ಒಣಹವೆ ಮುಂದುವರಿಯಲಿದೆ ಎಂದು ಐಎಂಡಿ ಮುನ್ಸೂಚನಾ ವರದಿಯಲ್ಲಿ ತಿಳಿಸಿದೆ.

ಸಮುದ್ರ ಮೇಲ್ಮೈನಲ್ಲಿ ಬದಲಾವಣೆ

ಮಧ್ಯಪ್ರದೇಶದ ನೈಋತ್ಯ ಭಾಗ, ವಿದರ್ಭ, ಮರಾಠವಾಡ, ಕರ್ನಾಟಕದ ಒಳನಾಡು, ರಾಯಲಸೀಮಾ ಮತ್ತು ತಮಿಳುನಾಡಿನ ಮೂಲಕ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಗಾಳಿಯ ಚಲನೆಯ ವೇಗ (ಟ್ರಫ್) ಹೆಚ್ಚಾಗಿದೆ. ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ವಾಯು ಚಂಡಮಾರುತದ ಪರಿಚಲನೆ ನಿರ್ಮಾಣವಾಗಿದೆ. ಇದು ಸರಾಸರಿ ಸಮುದ್ರ ಮಟ್ಟದಿಂದ ಸುಮಾರು 1.5 ಕಿ.ಮೀ ಎತ್ತರದಲ್ಲಿ ಕೇಂದ್ರೀಕರಿಸಿದೆ.

ಅದೇ ರೀತಿ ಕೇರಳದ ದಕ್ಷಿಣ ಕರಾವಳಿಯ ಆಗ್ನೇಯ ಅರಬ್ಬಿ ಸಮುದ್ರ ಹಾಗೂ ಪಕ್ಕದ ಲಕ್ಷದ್ವೀಪದ ಮೇಲೆ ವಾಯು ಚಂಡಮಾರುತದ ಪರಿಚಲನೆ ಸೃಷ್ಟಿಯಾಗಿದೆ. ಇದೆಲ್ಲ ಕಾರಣಗಳಿಂದ ರಾಜ್ಯದ ಕೆಲವೆಡೆ ಆಗಾಗ ಪೂರ್ವ ಮುಂಗಾರು ಸುರಿಸುವ ಮಾರುತಗಳು ಸಕ್ರಿಯವಾಗುತ್ತಿವೆ. ಅಲ್ಲಲ್ಲಿ ಮಳೆ ಸುರಿಯುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+