Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಜೊತೆ ಜೊತೆಗೆ ಒಂದಲ್ಲ ಒಂದು ಕಡೆಗಳಲ್ಲಿ ನಿತ್ಯ ಮಳೆ ಆಗುತ್ತಿದೆ. ಇತ್ತೀಚೆಗೆ ಬೆಂಗಳೂರು, ಕೊಡಗು, ತುಮಕೂರು, ಶಿವಮೊಗ್ಗ ಭಾಗದಲ್ಲಿ ಕೊಂಚ ಮಳೆ ಆಗಿತ್ತು. ಇದೀಗ ಬದಲಾದ ಹವಾಮಾನ ವೈಪರೀತ್ಯಗಳ ಪರಿಣಾಮದಿಂದ ಕರಾವಳಿ ಹಾಗೂ ಒಳನಾಡಿನ ಇತರ ಜಿಲ್ಲೆಗಳಲ್ಲೂ ಪೂರ್ವ ಮುಂಗಾರು ಮಳೆ ಮುಂದುವರಿಯಲಿದೆ. ಏಪ್ರಿಲ್ 13ರಿಂದ 15 ಹಾಗೂ 17ರವಗಿನ ಮಳೆ ಮುನ್ಸೂಚನೆ ಇಲ್ಲಿದೆ.

ನಾಳೆ ಸೋಮವಾರ ಏಪ್ರಿಲ್ 13 ರಿಂದ 15ರವರೆಗೆ ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಮತ್ತು ಏಪ್ರಿಲ್ 14 ರಿಂದ 15 ರವರೆಗೆ ಉತ್ತರ ಒಳನಾಡಿನ ಕೆಲವೆಡೆ ಗುಡುಗು ಸಹಿತ ಸಾಮಾನ್ಯ ಮಳೆ ಆಗಲಿದೆ. ಈ ವೇಳೆ ಗಾಲಿ ವೇಗ ಪ್ರತಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೇ. ಇದೇ ಅವಧಿಯಲ್ಲಿ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಎಲ್ಲಿಯೂ ಆಲಿಕಲ್ಲು ಸಹಿತ ಮಳೆ ಎಚ್ಚರಿಕೆ ಇಲ್ಲ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

Karnataka Weather

ಏಪ್ರಿಲ್ 17ರವರೆಗಿನ ಹವಾಮಾನ ವರದಿ

ಏಪ್ರಿಲ್ 17ರವರೆಗೆ ಕರಾವಳಿಯ ಉಡುಪಿ, ದಕ್ಷಿಣ ಕನ್ನಡದಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆ ಜೊತೆಗೆ, ಗರಿಷ್ಠ ತಾಪಮಾನ ಕಂಡು ಬರಲಿದೆ. ಉತ್ತರ ಕನ್ನಡದಲ್ಲಿ ಶುಷ್ಕ ವಾತಾವರಣ ಮುಂದುವರಿಯಲಿದೆ. ಬೆಳಗಾವಿ, ಹಾವೇರಿ, ಧಾರವಾಡ, ಗದಗ, ಬಾಗಲಕೋಟೆ ಮತ್ತು ವಿಜಯಪುರದಲ್ಲಿ ಮಬ್ಬು ವಾತಾವರಣ ಕಂಡು ಬರಲಿದ್ದು, ವಿವಿಧೆಡೆ ಹಗುರ ಮಳೆ ನಿರೀಕ್ಷೆ ಇದೆ. ಇನ್ನುಳಿದಂತೆ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು, ಚಾಮರಾಜನಗರ ಜಿಲ್ಲೆಗಳ ಒಂದೆರಡು ಪ್ರತ್ಯೇಕ ಸ್ಥಳದಲ್ಲಿ ಮಳೆ ಆಗುವ ಲಕ್ಷಣಗಳು ಇವೆ. ಇದರ ಹೊರತು ಎಲ್ಲಿಯೂ ಜೋರು ಮಳೆ, ಆಲಿಕಲ್ಲು ಮಳೆ ಸಾಧ್ಯತೆ ಇಲ್ಲ ಎನ್ನಲಾಗಿದೆ.

ಹವಾಮಾನ ವೈಪರೀತ್ಯ ಉಂಟಾಗಿದ್ದೆಲ್ಲಿ?

ರಾಜ್ಯಾದ್ಯಂತ ಬಹುತೇಕ ಬಿಸಿಲಿನ ವಾತಾವರಣ ಮೇಲುಗೈ ಸಾಧಿಸಲಿದೆ. ಇನ್ನೂ ಹವಾಮಾನ ವೈಫರೀತ್ಯ ನೋಡುವುದಾದರೆ, ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಮೇಲ್ಮಟ್ಟದ ವಾಯು ಸುಳಿಗಾಳಿ ಇದೆ. ಒಡಿಶಾದ ಒಳಭಾಗದಿಂದ ಮನ್ನಾರ್ ಕೊಲ್ಲಿಯವರೆಗೆ ದಕ್ಷಿಣ ಛತ್ತೀಸ್‌ಗಢ, ವಿದರ್ಭ, ಕರ್ನಾಟಕದ ಒಳಭಾಗ, ತಮಿಳುನಾಡಿನ ಒಳಭಾಗದಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಉತ್ತರ-ಟ್ರಫ್ ಉಂಟಾಗಿದೆ. ಉತ್ತರ ತಮಿಳುನಾಡು ಮತ್ತು ನೆರೆಹೊರೆಗಳಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದಲ್ಲಿ ಮೇಲ್ಮಟ್ಟದ ವಾಯು ಸುಳಿಗಾಳಿ ಇತ್ತು, ಅದರ ತೀವ್ರತೆ ಕಡಿಮೆ ಆಗಿದೆ ಎಂದು ಐಎಂಡಿ ತಿಳಿಸಿದೆ. ಸದ್ಯ ಇದರ ಪರಿಣಾಮವಾಗಿ ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆ ಆಗುತ್ತಿದೆ ಎಂದು ಮುನ್ಸೂಚನಾ ವರದಿಯಲ್ಲಿ ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+