Karnataka Weather: ಕರ್ನಾಟಕದ ವಿವಿಧ ಭಾಗದಲ್ಲಿ ಮಳೆ: ಈ ಜಿಲ್ಲೆಗಳಲ್ಲಿ ಚಳಿ ಹೆಚ್ಚಳ!
Karnataka Weather: ಕರ್ನಾಟಕದಲ್ಲಿ ಹಿಂಗಾರು ಮಳೆ ದುರ್ಬಲವಾಗಿದ್ದು, ವಿವಿಧ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಇನ್ನೂ ಎರಡು ದಿನ ರಾಜ್ಯದಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಳಿದಂತೆ ರಾಜ್ಯದ ವಿವಿಧ ಭಾಗದಲ್ಲಿ ಚಳಿ ಮುಂದುವರಿದಿದೆ. ರಾಜ್ಯದ ಹವಾಮಾನ ಹೇಗಿದೆ ಎನ್ನುವ ವಿವರ ಇಲ್ಲಿದೆ.
ರಾಜ್ಯದಲ್ಲಿ ಕಳೆದ ಒಂದುವಾರದಿಂದಲೂ ಮಳೆ ತುಸು ಬಿಡುವು ನೀಡಿದೆ. ಇಂದು ಚಾಮರಾಜನಗರ, ಕೊಡಗು, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಉಳಿದಂತೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ದಕ್ಷಿಣ ಕೇರಳ ಕರಾವಳಿಯಿಂದ ಆಗ್ನೇಯ ಅರೇಬಿಯಾ ಸಮುದ್ರದ ಮೇಲೆ ಮೇಲ್ಮಟ್ಟದ ವಾಯು ಚಂಡಮಾರುತದ ಪರಿಕಲ್ಪನೆ ಇದ್ದು, ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ ವರೆಗೆ ವಿಸ್ತರಿಸಿದೆ. ಬಂಗಾಳಕೊಲ್ಲಿಯ ಮಧ್ಯ ಭಾಗದಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 3.1 ಕಿ.ಮೀ ವರೆಗೆ ವಿಸ್ತರಿಸಿರುವ ಮೇಲ್ಮಟ್ಟದ ವಾಯು ಚಂಡಮಾರುತದ ಪರಿಚಲನೆಯು ಕಡಿಮೆಯಾಗಿದೆ. ತಮಿಳುನಾಡಿನ ಉತ್ತರ ಒಳನಾಡು ಮತ್ತು ನೆರೆಹೊರೆ ಪ್ರದೇಶದಲ್ಲಿ ಸರಾಸರಿ ಸಮುದ್ರಮಟ್ಟದಿಂದ 3.1 ಕಿ.ಮೀ ವರೆಗೆ ವಿಸ್ತರಿಸಿರುವ ಮೇಲ್ಮಟ್ಟದ ವಾಯು ಚಂಡಮಾರುತ ಪರಿಚಲನೆ ಕಡಿಮೆಯಾಗಿದೆ.
ಈ ಭಾಗದಲ್ಲಿ ತಾಪಮಾನದ ಎಚ್ಚರಿಕೆ: ಇನ್ನು ಬೀದರ್, ವಿಜಯಪುರ, ಹಾವೇರಿ, ಬೆಳಗಾವಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 5ರಿಂದ 6 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗುವ ಸಾಧ್ಯತೆ ಇದೆ. ಮುಂದಿನ 2ರಿಂದ 3 ದಿನಗಳ ವರೆಗೆ ಕನಿಷ್ಠ ತಾಪಮಾನವು 1ರಿಂದ 2 ಡಿಗ್ರಿ ಸೆಲ್ಸಿಯಸ್ ರಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಹವಾಮಾನ ಹೇಗಿದೆ ?
ಇನ್ನು ಬೆಂಗಳೂರಿನಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರಲಿದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್ ಹಾಗೂ 19 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಇನ್ನು ಮುಂದಿನ 48 ಗಂಟೆ ಅವಧಿಯಲ್ಲೂ ಇದೇ ವಾತಾವರಣ ಮುಂದುವರಿಯು ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ವರದಿ ನೀಡಿದೆ. ಇನ್ನು ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತಿ ಕನಿಷ್ಠ ತಾಪಮಾನವು 11.5ಡಿಗ್ರಿ ಸೆಲ್ಸಿಯಸ್ ದಾವಣಗೆರೆಯಲ್ಲಿ ದಾಖಲಾಗಿದೆ. ಅಲ್ಲದೇ ರಾಜ್ಯದಾದ್ಯಂತ ಈಶಾನ್ಯ ಮಾನ್ಸೂನ್ ದುರ್ಬಲವಾಗಿತ್ತು. ರಾಜ್ಯದಾದ್ಯಂತ ಒಣಹವೆ ಇತ್ತು.












Click it and Unblock the Notifications