Karnataka Weather: ಆಗಸ್ಟ್ 30ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ
ಕರ್ನಾಟಕ, ಆಗಸ್ಟ್, 24: ಆಗಸ್ಟ್ ಆರಂಭದಿಂದಲೂ ಇಲ್ಲಿಯವರೆಗೂ ರಾಜ್ಯದ ಹಲವೆಡೆ ಮಾತ್ರ ಮಳೆ ಸುರಿಯುತ್ತಿದ್ದು, ಇನ್ನು ಕೆಲವೆಡೆ ಮಳೆಯೇ ಇಲ್ಲದೆ ಭರದ ಛಾಯೆ ಆವರಿಸುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಕಾಫಿನಾಡು, ಕರವಾಳಿ ಜಿಲ್ಲೆಗಳ ಕಡೆ ಮಾತ್ರ ಸಾಧಾರಣ ಮಳೆಯಾಗುತ್ತಿದೆ. ಹಾಗೆಯೇ ಇಂದಿನಿಂದ ಆಗಸ್ಟ್ 30ರವರೆಗೆ ಈ ಜಿಲ್ಲೆಗಳಲ್ಲಿ ಮಾತ್ರ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಖೆ ಮಾಹಿತಿ ನೀಡಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಿಲ್ಲದೆ ಜಲಾಶಯಗಳ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಲೇ ಇದೆ. ಮತ್ತೊಂದೆಡೆ ಬಿಸಿಲಿನ ತಾಪಾಮನ ಹೆಚ್ಚುತ್ತಿದ್ದು, ಇದರಿಂದ ಅನ್ನದಾತ ಮುಂಗಾರು ನಂಬಿ ಬೆಳೆದಂತಹ ಬೆಳೆಗಳು ಸೂರ್ಯನ ಶಾಖಕ್ಕೆ ಮುದುಡಿಹೋಗುವ ಹಂತವನ್ನು ತಲುಪಿವೆ. ಇನ್ನು ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ ಆಗಸ್ಟ್ 30 ಒಳಗೆ ಮಳೆ ಬಾರದಿದ್ದರೆ ಅನ್ನದಾತರ ಪರಿಸ್ಥಿತಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್ 30ರವರೆಗೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ.
ಅದರಲ್ಲೂ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ನಿರೀಕ್ಷೆ ಹೆಚ್ಚಿದೆ. ಉಳಿದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮಾಹಿತಿಯನ್ನು ರವಾನಿಸಿದೆ.
ಭಾರೀ ಮಳೆ ಮುನ್ಸೂಚನೆ
ಭಾರತದ ಕೆಲವೇ ರಾಜ್ಯಗಳಲ್ಲಿ ಮಾತ್ರ ಅಬ್ಬರದ ಮಳೆಯಾಗುತ್ತಿದೆ. ಅದರಲ್ಲೂ ಉತ್ತರ ಭಾರದಲ್ಲಂತೂ ಭಾರೀ ಮಳೆಯಿಂದ ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಹಾಗೆಯೇ ಹಿಮಾಚಲ ಪ್ರದೇಶದಲ್ಲಿ ಕಳೆದ ರಾತ್ರಿ ಮಳೆರಾಯನ ಆರ್ಭಟಕ್ಕೆ ಭೂಕುಸಿತ ಉಂಟಾಗಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಲ್ಲದೆ ಇಂದು (ಆಗಸ್ಟ್ 24) ಕೂಡ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಇನ್ನೆಷ್ಟು ಅನಾಹುತಗಳು ಸಂಭವಿಸುತ್ತವೆಯೋ ಅನ್ನುವ ಆತಂಕದಲ್ಲಿ ಇಲ್ಲಿನ ಜನರಿದ್ದಾರೆ.
ಜುಲೈ ತಿಂಗಳಿನಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದ. ಆದರೆ ಆಗಸ್ಟ್ ತಿಂಗಳು ಆರಂಭದಿಂದಲೂ ಹಲವು ರಾಜ್ಯಗಳಲ್ಲಿ ಮಳೆ ಕೊರತೆ ಆಗುವುದಲ್ಲದೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಇನ್ನು ಮುಂಗಾರು ನಂಬಿಕೊಂಡು ಬಿತ್ತನೆ ಮಾಡಿದ ದಕ್ಷಿಣ ಭಾರತ ಭಾಗದ ಅದೆಷ್ಟೋ ರೈತರ ಜೀವನ ಸೂರ್ಯನ ಶಾಖಕ್ಕೆ ಬತ್ತಿಹೋಗುತ್ತಲೇ ಇದೆ. ಮತ್ತೊಂದೆಡೆ ಉತ್ತಡ ಭಾರತದ ಕಡೆ ಸುನಾಮಿಯಂತಹ ಮಳೆಯಿಂದ ಅಪಾರ ಪ್ರಮಾಣ ಹಾನಿ ಸಂಭವಿಸುತ್ತಲೇ ಇದೆ.
ಅಲ್ಲದೆ ಹಿಮಾಚಲ ಪ್ರದೇಶದಲ್ಲಿ ಹಲವೆಡೆ ಮನೆಗಳಿಗೆ ಹಾನಿಯಾಗಿದ್ದು, 200ಕ್ಕೂ ಹೆಚ್ಚು ರಸ್ತೆಗಳು ಬಂದ್ ಆಗಿವೆ ಎಂದು ಅಲ್ಲಿನ ಮೂಲಗಳು ತಿಳಿಸಿವೆ. ಇಂದು (ಆಗಸ್ಟ್ 24) ರಾಜ್ಯದ 12 ಜಿಲ್ಲೆಗಳ ಪೈಕಿ 4 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 24 ಗಂಟೆಗಳಲ್ಲಿ ಹಿಮಾಚಲ ಪ್ರದೇಶದ ಕೆಲವೆಡೆ ಅಬ್ಬರದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕಂಗ್ರಾ, ಕುಲು, ಮಂಡಿ ಮತ್ತು ಶಿಮ್ಲಾ ಜಿಲ್ಲೆಗಳ ಕೆಲವು ಭಾಗಗಳಲ್ಲಿ ರೆಡ್ ಅಲರ್ಟ್, ಕೆಲ ಭಾಗಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ಭಾರೀ ಮಳೆಗೆ ಈ ತಿಂಗಳು ರಾಜ್ಯದಲ್ಲಿ ಸುಮಾರು 80ಕ್ಕೂ ಹೆಚ್ಚು ಜನ ಬಲಿಯಾಗಿದ್ದು, ಜೂನ್ 24ರಂದು ರಾಜ್ಯದಲ್ಲಿ ಮುಂಗಾರು ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ ಒಟ್ಟು 227 ಜನರು ಸಾವನ್ನಪ್ಪಿದ್ದು, 38 ಜನರು ಕಾಣೆಯಾಗಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.












Click it and Unblock the Notifications