Karnataka Weather: ಈ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ
ಆಗಸ್ಟ್‌ನ ಮೊದಲ ಮೂರು ವಾರ ಕೈಕೊಟ್ಟಿದ್ದ ಮಳೆ, ನಂತರ ಚುರುಕಾಗುವ ಲಕ್ಷಣ ತೋರಿಸಿದೆ ಶನಿವಾರ ಮತ್ತು ಭಾನುವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಕೊನೆಯ ವಾರ ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ.
ಸೋಮವಾರ ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ಆಗಸ್ಟ್ 21ರಂದು ಬೆಳಗ್ಗೆ 8.30ಕ್ಕೆ ಕೊನೆಯಾದಂತೆ ಕಳೆದ 24 ಗಂಟೆಗಳಲ್ಲಿ ಯಾದಗಿರಿ ಜಿಲ್ಲೆಯ ಗುರುಮಿಠಕಲ್‌ನಲ್ಲಿ 52.83 ಮಿಮೀ ಮಳೆಯಾಗಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾದ ಪ್ರದೇಶ ಎನಿಸಿಕೊಂಡಿದೆ.
ರಾಜ್ಯದ ಜಿಲ್ಲಾವಾರು ಮಳೆ ಮುನ್ಸೂಚನೆ
ಉಡುಪಿ, ದಕ್ಷಿಣ ಕನ್ನಡ, ಕೊಡಗು ಮತ್ತು ರಾಮನಗರ ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಗದಗ, ವಿಜಯಪುರ, ಚಾಮರಾಜನಗರ, ರಾಯಚೂರು, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಹಾಸನ, ಧಾರವಾಡ, ಬೆಂಗಳೂರು ನಗರ, ಚಿತ್ರದುರ್ಗ, ಮೈಸೂರು, ಕೊಪ್ಪಳ, ವಿಜಯನಗರ, ಹಾವೇರಿ, ಕಲಬುರಗಿ, ಮಂಡ್ಯ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ದಾವಣಗೆರೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚದುರಿದಂತೆ ಉತ್ತಮ ಮಳೆಯಾಗಲಿದೆ. ಕೋಲಾರ, ಬಳ್ಳಾರಿ, ಚಿಕ್ಕಬಳ್ಳಾಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಭಾನುವಾರ ಸಂಜೆ ರಾಜ್ಯದ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ. ಯಾದಗಿರಿ ಜಿಲ್ಲೆಯ ಗುರುಮಿಠಕಲ್‌ನಲ್ಲಿ 52.83 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಚಂದ್ರಿಕಿ, ಕಾಕಲ್ವಾರ್, ಪುತ್ಪಕ, ಗಾಜರಕೋಟೆ, ಮಿನಸಪುರ, ಹೊನಗೇರಾದಲ್ಲಿ ಉತ್ತಮ ಮಳೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ, ಸೋಮೇಶ್ವರ, ಮಾದಪ್ಪಾಡಿ, ಸಂಪಾಜೆ, ಮಂಗಳೂರು, ಉಲಿ, ಬಾಲ, ಕೋಟೆಕರ್, ಕೊಡಿಯಾಲದಲ್ಲಿ ಉತ್ತಮ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕೊಪ್ಪ, ಬೈಲೂರು, ಕೈಕಿನಿ, ಮಾರುಕೇರಿ, ಸೊಪ್ಪಿನಹಳ್ಳಿ, ಬೆಂಗ್ರೆ, ಹೊನ್ನಾವರದಲ್ಲಿ ಉತ್ತಮ ಮಳೆಯಾಗಿದೆ. ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯಾಗಿದ್ದು, ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರು ಹವಾಮಾನ
ಬೆಂಗಳೂರಿನಲ್ಲಿ ಮಳೆ ಕಣ್ಣಾ ಮುಚ್ಚಾಲೆ ಆಡುತ್ತಿದೆ. ಭಾನುವಾರ ಮಧ್ಯಾಹ್ನ ನಗರದ ಹಲವು ಪ್ರದೇಶಗಳಲ್ಲಿ ಮಳೆ ಆರಂಭವಾದರೂ, ಹೆಚ್ಚು ಹೊತ್ತು ಮಳೆಯಾಗಲಿಲ್ಲ. ಸೋಮವಾರ ಸಂಜೆ ನಗರದ ಹಲವು ಭಾಗಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.












Click it and Unblock the Notifications