Karnataka Weather Report: ಹವಾಮಾನ ಇಲಾಖೆಯ ಮಹತ್ವದ ಸೂಚನೆ

ಮುಂದಿನ ಐದು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲಿನ ಬೇಗೆಯಲ್ಲಿ ಬೆಂದಿರುವ ಜನತೆ ಮಳೆಗಾಗಿ ಕಾದು ಕೂತಿದ್ದಾರೆ, ಈ ನಡುವೆಯೇ ಹವಾಮಾನ ಇಲಾಖೆ ಒಳ್ಳೆಯ ಸುದ್ದಿ ನೀಡಿದೆ.

ಏಪ್ರಿಲ್ 21 ರಿಂದ ಏಪ್ರಿಲ್ 25 ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರ್ನಾಟಕ ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಏಪ್ರಿಲ್ 21, 22 ಮತ್ತು ಏಪ್ರಿಲ್ 25 ರಂದು ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Weather Report: Next 5 Days, Several Parts Of Karnataka Including Bengaluru Will Receive Rain

ಇನ್ನು ಉತ್ತರ ಒಳನಾಡಿನ 11 ಜಿಲ್ಲೆಗಳಲ್ಲಿ ಕೂಡ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಏಪ್ರಿಲ್ 23ರಂದು ಮಳೆಯಾಗುವ ಸಾಧ್ಯತೆ ಕಡಿಮೆ ಇದ್ದು, ಉಳಿದ ನಾಲ್ಕು ದಿನಗಳು ಮಳೆಯಾಗಬಹುದು ಎಂದು ಹೇಳಿದೆ. ಗುಡುಗು ಮಿಂಚಿನ ಬಗ್ಗೆ ಎಚ್ಚರದಿಂದ ಇರುವಂತೆ ಜನರಿಗೆ ಮನವಿ ಮಾಡಿದೆ.

ದಕ್ಷಿಣ ಒಳನಾಡಿನಲ್ಲಿ ವರುಣನ ಸಿಂಚನ

ದಕ್ಷಿಣ ಒಳನಾಡಿನಲ್ಲಿ ಮಳೆಯ ಸಾಧ್ಯತೆ ದಟ್ಟವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಏಪ್ರಿಲ್ 21ರಂದು ಸಂಜೆ ಅಥವಾ ರಾತ್ರಿ ದಕ್ಷಿಣ ಒಳನಾಡಿನ 17 ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಬೆಂಗಳುರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗಲಿದೆ ಎಂದು ತಿಳಿಸಿದೆ.

Karnataka Weather Report: Next 5 Days, Several Parts Of Karnataka Including Bengaluru Will Receive Rain

ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನಗಳ ಕಾಲ ನಿರಂತರವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಬೆಂಗಳೂರಿನಲ್ಲಿ ಕೂಡ ಮಳೆಯ ಮುನ್ಸೂಚನೆ ನೀಡಿದ್ದು, ಮೋಡ ಕವಿದ ವಾತಾವರಣ ಇರಲಿದ್ದು, ಶುಕ್ರವಾರ ರಾತ್ರಿ ನಗರದ ಗಲವು ಭಾಗಗಳಲ್ಲಿ ಮಳೆಯಾಗಬಹುದು ಎಂದು ತಿಳಿಸಿದೆ. ಅದರಲ್ಲೂ ಹಳೇ ಮೈಸೂರು ಭಾಗ ಮತ್ತು ಬೆಂಗಳೂರಿನ ಹೊರ ವಲಯಗಳಲ್ಲೆ ಹೆಚ್ಚಿನ ಮಳೆಯನ್ನು ನಿರೀಕ್ಷೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+