Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ರಣಭೀಕರ ಮಳೆ, ಐಎಂಡಿ ಅಪ್ಡೇಟ್ಸ್‌ ಇಲ್ಲಿದೆ!

Karnataka Weather: ಕರ್ನಾಟಕದ ವಿವಿಧ ಭಾಗದಲ್ಲಿ ಮಳೆ ಅಬ್ಬರ ಜೋರಾಗಿದೆ. ಈ ಬಾರಿ ಕರ್ನಾಟಕಕ್ಕೆ ಮುಂಗಾರು ಭರ್ಜರಿ ಎಂಟ್ರಿ ಕೊಟ್ಟಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಸೋಮವಾರ ಜೂನ್ 23ರಂದು ಸಹ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಇನ್ನು ಬೆಂಗಳೂರಿನಲ್ಲಿ ಮಳೆ ತುಸು ಇಳಿಕೆಯಾಗಿದೆ. ಆದರೆ ಉಳಿದಂತೆ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಈ ಬಾರಿ ಕರ್ನಾಟಕಕ್ಕೆ ಮುಂಗಾರು ಮಳೆ ಭರ್ಜರಿ ಎಂಟ್ರಿ ಕೊಟ್ಟಿದೆ. ಇಂದಿನ ಹವಾಮಾನ ಹೇಗಿದೆ ಹಾಗೂ ಮುಂದಿನ ಮೂರು ದಿನಗಳ ಕಾಲ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಕರ್ನಾಟಕದಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದೆ. ಆದರೆ ರಾಜ್ಯದಾದ್ಯಂತ ಮಳೆ ಆಗುತ್ತಿಲ್ಲ. ರಾಜ್ಯದ ಕೆಲವು ಭಾಗದಲ್ಲಿ ಮಾತ್ರ ಧಾರಾಕಾರ ಮಳೆ ಆಗುತ್ತಿದೆ. ಉಳಿದಂತೆ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರಿದಿದೆ. ಕರಾವಳಿ ಕರ್ನಾಟಕದಾದ್ಯಂತ ನೈಋತ್ಯ ಮಾನ್ಸೂನ್ ಸಾಮಾನ್ಯವಾಗಿದ್ದು, ಒಳನಾಡಿನ ಕರ್ನಾಟಕದಲ್ಲಿ ದುರ್ಬಲವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Karnataka Weather Heavy rains in these districts IMD updates here

ಇನ್ನು ಕಳೆದ 24 ಗಂಟೆಯ ಅವಧಿಯಲ್ಲಿ ಕರಾವಳಿ ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಕರ್ನಾಟಕದ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗಿದೆ. ಭಾನುವಾರ ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನ ಭಾಗದಲ್ಲಿ ಧಾರಾಕಾರ ಮಳೆಯಾಗಿದೆ. ಬಹುತೇಕ ಇದೇ ವಾತಾವರಣ ಇಂದೂ ಸಹ ಮುಂದುವರಿಯುವ ಸಾಧ್ಯತೆ ಇದೆ.

ಜೂನ್ 23ರ ಹವಾಮಾನ ವರದಿ: ಇನ್ನು ಜೂನ್ 23ರ ಸೋಮವಾರ ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ. ಮಲೆನಾಡಿನಲ್ಲಿ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಹೀಗಾಗಿ ಈ ಭಾಗದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇನ್ನು ಕರಾವಳಿ ಭಾಗದಲ್ಲಿ ಗಾಳಿಯ ವೇಗವು 30ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ. ಮೂರು ಜಿಲ್ಲೆಗಳಲ್ಲಿ ಭರ್ಜರಿ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಕರ್ನಾಟಕದ ವಿವಿಧ ಭಾಗದಲ್ಲೂ ಮಳೆ ಆಗಲಿದೆ. ಇಲ್ಲಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ. ಬಾಗಲಕೋಟೆ, ಕೊಪ್ಪಳ, ಬೀದರ್‌, ಕಲಬುರಗಿ, ವಿಜಯಪುರ, ರಾಯಚೂರು ಹಾಗೂ ಯಾದಗಿರಿಯಲ್ಲಿ ಸಾಧಾರಣ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕರ್ನಾಟಕದ ವಿವಿಧ ಭಾಗದಲ್ಲೂ ಮಳೆ ಮುಂದುವರಿದಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ, ರಾಮನಗರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ದಾವಣಗೆರೆ, ತುಮಕೂರು ಹಾಗೂ ವಿಜಯನಗರದಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+