Karnataka Weather: ಇಂದು-ನಾಳೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್: ಈ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜುಲೈ 18-19ರಂದು ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ ರಾಜ್ಯದ ಹಲವು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ. ಜುಲೈ 18ರಂದು ಕೂಡ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್‌ನಲ್ಲಿ 12 ಸೆಂ.ಮೀ ಮಳೆಯಾಗಿದೆ.

ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ 11 ಸೆಂ.ಮೀ, ಉತ್ತರ ಕನ್ನಡ ಜಿಲ್ಲೆಯ ಜಗಲಬೆಟ್‌ನಲ್ಲಿ 8 ಸೆಂ.ಮೀ., ಕದ್ರಾ ಮತ್ತು ಮಂಚಿಕೆರೆಯಲ್ಲಿ ತಲಾ 7 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Karnataka Weather

ಜುಲೈ 22ರವರೆಗೆ ಬಿರುಗಾಳಿ ಸಹಿತ ಮಳೆಯಾಗಲಿದ್ದು, 40-45 ಕಿಮೀ ನಿಂದ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಸಮುದ್ರದಲ್ಲಿ ಭಾರಿ ಅಲೆಗಳು ಏಳಲಿದ್ದು ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಶೃಂಗೇರಿ, ಹೊರನಾಡು, ಕೊಲ್ಲೂರು, ಆಗುಂಬೆ, ಮಾವಿನಕಾಡು, ಕಾಪು, ಪಣಂಬೂರು, ಮಲ್ಪೆ, ಉಡುಪಿ, ಗೋಕರ್ಣ, ಶಿಕಾರಿಪುರ, ಮೂಡಿಗೆರೆ, ಸಾಗರ, ಕಾರ್ಗಲ್, ಉಜಿರೆ, ಧರ್ಮಸ್ಥಳ, ಸುಬ್ರಹ್ಮಣ್ಯ ಸೇರಿದಂತೆ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ.

ಮಲೆನಾಡು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ

ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಮೂರು ಜಿಲ್ಲೆಗಳಲ್ಲಿ ಗಾಳಿ ಸಹಿತ ಗುಡುಗು ಮಿಂಚಿನೊಂದಿಗೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿರುವುದು ರೈತರಿಗೆ ಸಂತಸ ತಂದಿದೆ. ಈಗಾಗಲೇ ಕೃಷಿ ಚಟುವಟಿಕೆಗಳು ಚುರುಕುಗೊಂಡಿದ್ದು, ಭತ್ತ ನಾಟಿ ಕಾರ್ಯ ನಡೆಯುತ್ತಿದೆ. ನದಿಗಳು ಕೂಡ ಮೈದುಂಬಿಕೊಳ್ಳುತ್ತಿವೆ. ಚಿಕ್ಕಮಗಳೂರಿನ ಹಲವು ಜಲಪಾತಗಳು ಮೈದುಂಬಿಕೊಂಡು ಹರಿಯುತ್ತಿವೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಹಳದಿ ಎಚ್ಚರಿಕೆ

ಬೆಳಗಾವಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಿಗೂ ಹಳದಿ ಎಚ್ಚರಿಕೆ ನೀಡಲಾಗಿದ್ದು ಉತ್ತಮ ಮಳೆಯಾಗಲಿದೆ ಎಂದು ಹೇಳಲಾಗಿದೆ. ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗಲಿದ್ದು ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+