Karnataka Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಕೆಲವೆಡೆ ಬಿರುಗಾಳಿಯೊಂದಿಗೆ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಭಾಗಗಳಲ್ಲಿ ಬಿಸಿಲಿನ ನಡುವೆ ಮೋಡ ಕವಿದ ವಾತಾವರಣ ನಿರ್ಮಾಣವಾಗಬಹುದು.

ಇನ್ನೂ ಧಾರವಾಡ ಮತ್ತು ಗದಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಬಹುದು. ಇತ್ತ ಬೀದರ್ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಬಾಗಲಕೋಟೆ, ಬೆಳಗಾವಿ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಜೊತೆಗೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ಇದೆ. ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.
ಇತ್ತ ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.
ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.
ಇನ್ನೂ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಮಳೆ ಜೊತೆಗೆ ಬಲವಾದ ಗಾಳಿ ಬೀಸುವ ಸಂದರ್ಭದಲ್ಲಿ ಸಾರ್ವಜನಿಕರು ಮರಗಳು, ವಿದ್ಯುತ್ ಕಂಬಗಳು ಹಾಗೂ ದುರ್ಬಲ ಕಟ್ಟಡಗಳ ಸಮೀಪ ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ರೈತರು ಸಹ ಗಾಳಿಯ ವೇಗ ಹೆಚ್ಚಾಗುವ ಸಂದರ್ಭದಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಸೂಚಿಸಲಾಗಿದೆ.


Click it and Unblock the Notifications
