Karnataka Weather: ಫೆ.26 ರವರೆಗೆ ವಿವಿಧೆಡೆ ಮಳೆ ಮುನ್ಸೂಚನೆ, ದಾಖಲೆಯ 36 ಡಿಸೆ ತಾಪಮಾನ
ಬೆಂಗಳೂರು: ರಾಜ್ಯಾದ್ಯಂತ ಬೇಸಿಗೆ ಬಿಸಿಲು ಚುರುಕಾಗಿದೆ. ಬಹುತೇಕ ಎಲ್ಲ ಭಾಗಗಳಲ್ಲಿಯೂ ಒಣಹವೆ ಕಂಡು ಬರುತ್ತಿದೆ. ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಈ ಮಧ್ಯೆ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆಯು ಮುಂದಿನ ನಾಲ್ಕು ದಿನಗಳ ಕಾಲ ಅಲ್ಲಲ್ಲಿ ಮಳೆ ಆಗಲಿದೆ ಎಂದು ಎಚ್ಚರಿಕೆ ನೀಡಿದೆ. ಯಾವ ಭಾಗಗಳಲ್ಲಿ ಮಳೆ ಬರುತ್ತದೆ? ಗರಿಷ್ಠ ತಾಪಮಾನದ ಜಿಲ್ಲೆಗಳು ಸೇರಿ ರಾಜ್ಯದ ಸಂಪೂರ್ಣ ಮುನ್ಸೂಚನೆ ಇಲ್ಲಿದೆ.
ಕರಾವಳಿ ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ಒಣಹವೆ ಆರ್ಭಟ ಹೆಚ್ಚಾಗಿದೆ. ಗರಿಷ್ಠ ತಾಪಮಾನದಲ್ಲಿ ಏರಿಕೆ ಆಗುತ್ತಿದೆ. ಇನ್ನೂ ದಕ್ಷಿಣ ಒಳನಾಡಿನ ವ್ಯಾಪ್ತಿಯ ಮಲೆನಾಡು ಜಿಲ್ಲೆಗಳು ಸೇರಿ ವಿವಿಧೆಡೆ ಫೆಬ್ರವರಿ 26ರವರೆಗೆ ಮಳೆ ನಿರೀಕ್ಷೆ ಇದೆ. ದಕ್ಷಿಣ ಕನ್ನಡ ಜಿಲ್ಲೆ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಇಂದಿನಿಂದ ನಾಲ್ಕು ದಿನ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದೆಂದು ಹವಾಮಾನ ಇಲಾಖೆ ಬೆಂಗಳೂರು ಕೇಂದ್ರದ ಮುಖ್ಯಸ್ಥರು ಮತ್ತು ವಿಜ್ಞಾನಿ ಡಾ. ಎನ್. ಪುವಿಯರಸನ್ ಅವರು ತಿಳಿಸಿದ್ದಾರೆ.

ಇನ್ನೂ ಕರ್ನಾಟಕದ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮೇಲಗೈ ಸಾಧಿಸಲಿದೆ. ಈ ಭಾಗಗಳಲ್ಲಿ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಿದೆ.
ರಾಜ್ಯದ ಗರಿಷ್ಠ ತಾಪಮಾನ 36 ಡಿ.ಸೆ. ದಾಖಲು
ಕಲಬುರಗಿ ಹಾಗೂ ಕಾರವಾರದಲ್ಲಿ ರಾಜ್ಯ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮಂಗಳೂರು ಶಕ್ತಿ ನಗರ, ಹೊನ್ನಾವರ, ವಿಜಯಪುರದ ತಿಡಗುಂಡಿ, ಬಾಲಗಕೋಟೆ, ಕೊಪ್ಪಳ, ಬಳ್ಳಾರಿ ಮತ್ತು ರಾಯಚೂರು ಭಾಗಗಳಲ್ಲಿ 34 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಉಳಿದಂತೆ ಬೀದರ್, ವಿಜಯಪುರ, ಧಾರವಾಡ, ಗದಗ, ಹಾವೇರಿ, ಗಂಗಾವತಿ (ಕೊಪ್ಪಳ) ಯಲ್ಲಿ ತಲಾ 33 ಡಿಗ್ರಿ ಸೆಲ್ಸಿಯಸ್, ಹಿರಿಯೂರು ಚಿತ್ರದುರ್ಗ, ರಾಮನಗರ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ ಸೇರಿ ವಿವಿಧೆಡೆ 32 ಡಿಗ್ರಿ ಸೆಲ್ಸಿಯಸ್ ಕಂಡು ಬಂದಿದೆ.
ಬೆಂಗಳೂರು ವಾತಾವರಣ ಹೇಗಿರಲಿದೆ?
ರಾಜದಾನಿ ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳವರೆಗೆ ಬೆಳಗ್ಗೆ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದೆ. ಒಣಹವೆಯ ವಾತಾವರಣ ಸಹ ನಿರ್ಮಾಣವಾಗಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಡಿಗ್ರಿ ಸೆಲ್ಸಿಯಸ್ ಮತ್ತು 19 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ಇಂದು ಭಾನುವಾರ ಫೆ.22 ರಂದು ಬೆಳಗ್ಗೆ 9 ಗಂಟೆಗೆ ನಗರದಲ್ಲಿ ಕನಿಷ್ಠ 19.7 ಡಿಗ್ರಿ ಸೆಲ್ಸಿಯಸ್, ಬೆಂಗಳೂರ ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ಬಳಿ 18, ಬೆಂಗಳೂರು ಎಚ್‌ಎಎಲ್ 18.4 ಡಿ.ಸೆ ದಾಖಲಾಗಿದೆ. ಗರಿಷ್ಠ ಎಲ್ಲೆಡೆ 30-31 ಡಿಗ್ರಿ ಸೆಲ್ಸಿಯಸ್ ಕಂಡು ಬಂದಿದೆ ಎಂದು ಐಎಂಡಿ ವರದಿ ತಿಳಿಸಿದೆ.
ಮುಂದುವರಿದ ಹವಾಮಾನ ವೈಪರೀತ್ಯಗಳು, ಅಲರ್ಟ್
ಹಿಂದೂ ಮಹಾಸಾಗರ ಮತ್ತು ಅಗ್ನಿಯ ಬಂಗಾಳ ಕೊಲ್ಲಿಯ ಮೇಲೆ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವು ಮುಂದುರಿದಿದೆ. ಈ ಚಂಡಮಾರುತದ ಪರಿಚಲನೆಯು ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ ವರೆಗೆ ವಿಸ್ತರಿಸಿದೆ. ಇದು ಮುಂದಿನ 24 ಗಂಟೆಗಳಲ್ಲಿ ಪಶ್ಚಿಮ ಮತ್ತು ವಾಯುವ್ಯಕ್ಕೆ ಚಲಿಸುವ ನಿರೀಕ್ಷೆ ಇದೆ. ಅದೇ ರೀತಿ ಪಕ್ಕದ ನೈಋತ್ಯ ಬಂಗಾಳ ಕೊಲ್ಲಿಯ ಮೇಲಿನ ಇನ್ನೊಂದು ವಾಯು ಚಂಡಮಾರುತದ ಪರಿಚಲನೆಯು ಮೇಲಿನ ವೈಪರೀತ್ಯದೊಂದಿಗೆ ವಿಲೀವಾಗಿದೆ. ಇದು ಲಕ್ಷದ್ವೀಪ ಪ್ರದೇಶದವರೆಗೂ ಕೇಂದ್ರೀಕೃತವಾಗಿದೆ. ಮುಂದಿನ ದಿನಗಳಲ್ಲಿ ಇವು ಮತ್ತಷ್ಟು ತೀವ್ರಗೊಂಡರೆ ಹವಾಮಾನ ಬದಲಾವಣೆ ಉಂಟಾಗಬಹುದು ಎಂದು ಐಎಂಡಿ ತಿಳಿಸಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ











Click it and Unblock the Notifications