Karnataka Weather: ಐದು ದಿನಗಳ ಕಾಲ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ

ಬೆಂಗಳೂರು, ಅಕ್ಟೋಬರ್‌ 26: ಕಳೆದು ಒಂದು ವಾರ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅಬ್ಬರ ಮಳೆಯಾಗಿದೆ. ಕಳೆದ ಎರಡು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಇಳಿಕೆಯಾಗಿದ್ದು, ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿ ಕಡೆಗೆ ಮರಳತೊಡಗಿದೆ.

ಇತ್ತ ಮುಂದಿನ ಐದು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಹಾಗೂ ಉತ್ತರ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ತುಂತುರು ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಗೆ ಮುನ್ಸೂಚನೆಯನ್ನ ನೀಡಿದೆ.

Karnataka weather Rain expected in some districts of the state for five days

ವಾಯುಭಾರ ಕುಸಿತ ಮತ್ತು ದಾನಾ ಚಂಡ ಮಾರುತದ ಪರಿಣಾಮ ಹೆಚ್ಚು ಮಳೆಯಾಗಿತ್ತು. ಇದೀಗ ಮಳೆ ರಾಯನ ಆರ್ಭಟ ಕಡಿಮೆಯಾಗಿದ್ದು, ಇಂದು ಕೇರಳದ ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ. ಪಶ್ಚಿಮ ಕರಾವಳಿಯಲ್ಲಿ ಮಳೆ ಮತ್ತೆ ಆವರಿಸತೊಡಗಿದೆ. ಭಾರತೀಯ ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನೆ ಪ್ರಕಾರ, ಅಕ್ಟೋಬರ್ 27ರ ಬೆಳಗ್ಗೆ 8.30ರ ತನಕ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಬಹುತೇಕ ಬಿಸಿಲು ಆವರಿಸಲಿದ್ದು, ಕೊಂಚ ನೆಮ್ಮದಿಯ ವಾತಾವರಣ ಕಾಣಬಹುದು ಎಂದು ತಿಳಿಸಿದೆ.

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಅಂದರೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡಗಳಲ್ಲಿ ಮಳೆ ಕಡಿಮೆಯಾಗಿದೆ. ಅಲ್ಲದೇ ಉತ್ತರ ಒಳನಾಡಿನ ಯಾವುದೇ ಜಿಲ್ಲೆಗಳಲ್ಲೂ ಅಂದರೆ, ಬಾಗಲಕೋಟೆ, ಬೆಳಗಾವಿ, ಬೀದರ್, ದಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆ ಇರಲ್ಲ ಎಂದು ಹವಾಮಾನ ಇಲಾಖೆ ನೀಡಿರುವ ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವಿಶೇಷವಾಗಿ ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಶೇಕಡ 50 ಭೂ ಪ್ರದೇಶದಲ್ಲಿ (ಅಲ್ಲಲ್ಲಿ) ಚದುರಿದಂತೆ ಸಾಧಾರಣೆ ಮಳೆ ಸುರಿಯುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಇಂದು ಮಳೆ ಇರಲ್ಲ ಎಂದು ಹವಾಮಾನ ಮುನ್ಸೂಚನೆ ವರದಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+