Karnataka Weather: ರಣಬಿಸಿಲಿನ ನಡುವೆ ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ: IMD ಮುನ್ಸೂಚನೆ ಏನಿದೆ?

Karnataka Weather: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿರು ಬಿಸಿಲಿನ ವಾತಾವರಣ ಮುಂದುರೆದಿದೆ. ಈ ನಡುವೆಯೇ ಕೆಲವೆಡೆ ಅಲ್ಲಲ್ಲಿ ಮಳೆಯಾಗುತ್ತಿದೆ. ಇಂದಿನಿಂದ ಅಂದರೆ ಏಪ್ರಿಲ್‌ 29ರಿಂದ ಮುಂದಿನ ಮೂರು ದಿನಗಳ ಕಾಲ ಕೆಲವು ಭಾಗಗಳಲ್ಲಿ ವರುಣ ಆರ್ಭಟಿಸಲಿದ್ದು, ಇನ್ನುಳಿದ ಕಡೆಗಳಲ್ಲಿ ಬಿಸಿಲಿನ ವಾತಾವರಣವೇ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ರಾಜಧಾನಿಯ ಬೆಂಗಳೂರಿನ ಹಲವೆಡೆ ಮಂಗಳವಾರ (ಏಪ್ರಿಲ್‌ 28) ಸಂಜೆ ವೇಳೆ ತುಂತುರು ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಬುಧವಾರ (ಏಪ್ರಿಲ್‌ 29) ಬೆಳಗ್ಗೆಯೇ ನಗರದಲ್ಲಿ ಬಿಸಿಲಿನ ವಾತಾವರಣ ಮುಂದುವರೆದಿದ್ದು, ಸಂಜೆ ವೇಳೆಗೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ರಾಜ್ಯದ ಕೆಲವು ಭಾಗಗಳಲ್ಲಿ ಮೂರು ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನೂ ಹವಾಮಾನ ಇಲಾಖೆ ನೀಡಿದೆ. ಈಗಾಗಲೇ ಕೆಲವೆಡೆ ಬಿರುಗಾಳಿ ಸಹಿತ ಮಳೆಯಾದ ಪರಿಣಾಮ ಅಡಿಕೆಯಂತಹ ಬೆಳೆಗಳು ನಾಶವಾದ ಉದಾಹರಣೆಗಳಿವೆ.

Karnataka Weather Rain Forecast for 3 Days Yellow Alert in Bengaluru amp amp South Interior Districts

ಮೂರು ದಿನ ಎಲ್ಲೆಲ್ಲಿ ಮಳೆ?

ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಕೊಡಗು ಹಾಗೂ ರಾಮನಗರ ಜಿಲ್ಲೆಗಳಲ್ಲೂ ಏಪ್ರಿಲ್ 30 ಮತ್ತು ಮೇ 1ರ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಸುಮಾರು 64.5 ಮಿಲಿ ಮೀಟರ್‌ನಿಂದ 115.5 ಮಿಲಿ ಮೀಟರ್‌ವರೆಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಇಂದಿನಿಂದ ಮುಂದಿನ ಮೂರು ದಿನ ಉತ್ತರ ಒಳನಾಡಿದ ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು ಮತ್ತು ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ಧಾರವಾಡ ಮತ್ತು ಗದಗ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರವಾಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಇನ್ನುಳಿದಂತೆ ಕೆಲವೆಡೆ ಅಲ್ಲಲ್ಲಿ ಮಳೆಯಾಗಲಿದ್ದು, ಉಳಿದೆಡೆಯೆಲ್ಲ ಬಿಸಿಲಿನ ವಾತಾವರಣವೇ ಮುಂದುವರೆಯಲಿದೆ ಎಂದು ತಿಳಿಸಿದೆ.

ಇದೀಗ ಬಿಸಿಲಿನ ತಾಪತಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲಿದ್ದು, ಒಂದು ವೇಳೆ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಏಪ್ರಿಲ್ 30ರಿಂದ ಮಳೆಯಾದರೆ ತಾಪಮಾನದಲ್ಲಿ ಗಣನೀಯ ಇಳಿಕೆಯಾಗಲಿದೆ. ಈಗಾಗಲೇ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ತಂಪೆರೆದಂತಾಗಿದೆ. ಮತ್ತೊಂದೆಡೆ ಕೆಲವೆಡೆ ಬಿರುಗಾಳಿ ಸಹಿತ ಮಳೆಯಿಂದ ಅತೀವೃಷ್ಟಿಯಿಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಕಂಗಾಲದ ಘಟನೆಗಳು ಕೂಡ ನಡೆದಿವೆ. ಇನ್ನೂ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಹಗಲಿನ ವೇಳೆ ರಣಬಿಸಿಲು ಮುಂದುವರೆದಿದ್ದು, ಜನರು ಮನೆಯಿಂದ ಹೊರಬಾರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಬೆಂಗಳೂರಿನ ಹವಾಮಾನ

ಬೆಂಗಳೂರಿನಲ್ಲಿ ಇಂದು (ಏಪ್ರಿಲ್‌ 29) ಗರಿಷ್ಠ ತಾಪಮಾನ 36°C ಮತ್ತು ಕನಿಷ್ಠ ತಾಪಮಾನ 24°C ದಾಖಲಾಗುವ ಸಾಧ್ಯತೆಯಿದೆ. ಸಂಜೆ ವೇಳೆಗೆ ನಗರದ ಅಲ್ಲಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+