Get Updates
Get notified of breaking news, exclusive insights, and must-see stories!

Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ

Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು ಹಾಗೂ ಒಣಹವೆ ಮುಂದುವರಿದಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತಾದರೂ, ಮಳೆ ಕೊರತೆ ಎದುರಾಗಿದೆ. ಕರ್ನಾಟಕದಲ್ಲಿ ಏಪ್ರಿಲ್ 10ರಂದು ಸಹ ಬೆಂಗಳೂರು ಸೇರಿದಂತೆ ಬಹುತೇಕ ಪ್ರದೇಶಗಳಲ್ಲಿ ಒಣಹವೆ ಮುಂದುವರಿದಿದೆ. ಆದರೆ, ಕರ್ನಾಟಕದ ನಾಲ್ಕು ಪ್ರಮುಖ ಜಿಲ್ಲೆಗಳಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಮಳೆ ಆಗಲಿದೆ ಹಾಗೂ ಎಲ್ಲಿ ಬಿಸಿಲು ಹೆಚ್ಚಾಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಒಡಿಶಾ ಮತ್ತು ನೆರೆಹೊರೆ ಪ್ರದೇಶಗಳಲ್ಲಿ ತೆಲಂಗಾಣ, ರಾಯಲಸೀಮಾ, ತಮಿಳುನಾಡಿನ ಒಳಭಾಗದಾದ್ಯಂತ ಮನ್ನಾ‌ ಕೊಲ್ಲಿಯವರೆಗೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಮೇಲಿನ ಸುಳಿಗಾಳಿಯಿಂದ ಉತ್ತರ-ದಕ್ಷಿಣ ಆಫ್ ಗಾಳಿಯ ನಿಲುಗಡೆ ಮುಂದುವರಿದಿದೆ. ನೈಜ ಸಮಯದ ದತ್ತಾಂಶದ ಆಧಾರದ ಮೇಲೆ ರಾಜ್ಯದಾದ್ಯಂತ ಗರಿಷ್ಠ ತಾಪಮಾನವು 31.1 ಡಿಗ್ರಿ ಸೆಲ್ಸಿಯಸ್‌ನಿಂದ 39.2 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿತ್ತು.

Karnataka Weather

ನೈಜ ಸಮಯದ ದತ್ತಾಂಶದ ಆಧಾರದ ಮೇಲೆ ಕರಾವಳಿ ಕರ್ನಾಟಕದ ಮಂಗಳೂರು ವಿಮಾನ ನಿಲ್ದಾಣ ಮತ್ತು ದಕ್ಷಿಣ ಒಳನಾಡಿನ ಶಿವಮೊಗ್ಗದಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮಯಾಗಿತ್ತು. ದಕ್ಷಿಣ ಒಳನಾಡಿನ ಕರ್ನಾಟಕದ ಮಂಡ್ಯ ಮತ್ತು ಮೈಸೂರಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿತ್ತು. ಉಳಿದ ಸ್ಥಳಗಳಿಗಿಂತ ಗರಿಷ್ಠ ತಾಪಮಾನವು ಸಾಮಾನ್ಯವಾಗಿತ್ತು. ಕಳದ 24 ಗಂಟೆಗಳಲ್ಲಿ, ದಕ್ಷಿಣ ಒಳನಾಡಿನ ಚಿತ್ರದುರ್ಗ ಮತ್ತು ಮಂಡ್ಯದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ಉಳಿದ ಸ್ಥಳಗಳಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಕರ್ನಾಟಕದ ವಿವಿಧ ಭಾಗಗಳಲ್ಲಿ ಹವಾಮಾನ ಹೇಗಿದೆ ?

ಇನ್ನು ಕರ್ನಾಟಕದಲ್ಲಿ ಶುಕ್ರವಾರ ಬಹುತೇಕ ಒಣಹವೆ ಮುಂದುವರಿದಿದೆ. ಕರ್ನಾಟಕದ ಕರಾವಳಿಯ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ತೇವಾಂಶದಿಂದ ಕೂಡಿದ ವಾತಾವರಣವಿದ್ದು, ಒಣಹವೆ ಉಂಟಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಣಹವೆ ಮುಂದುವರಿಯಲಿದೆ. ಇನ್ನು ಉತ್ತರ ಒಳನಾಡಿನಲ್ಲೂ ಬಹುತೇಕ ಒಣಹವೆ ಇರಲಿದೆ.

Karnataka Weather: ಈ ಪ್ರದೇಶಗಳಲ್ಲಿ ಮಳೆ

ಕರ್ನಾಟದ ವಿವಿಧ ಭಾಗಗಳಲ್ಲಿ ಏಪ್ರಿಲ್ 10ರಂದು ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕೊಡಗು, ಚಾಮರಾಜನಗರ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಮಿಂಚು - ಗುಡುಗು ಸಹಿತ ಮಳೆ ಆಗಲಿದೆ ಎಂದು ಐಎಂಡಿ ವರದಿ ಉಲ್ಲೇಖಿಸಿದೆ. ಇನ್ನು ಏಪ್ರಿಲ್ 10ರಿಂದ ಏಪ್ರಿಲ್ 12ರ ವರೆಗೆ ಕರಾವಳಿ ಕರ್ನಾಟಕದಾದ್ಯಂತ ಬಿಸಿ ಮತ್ತು ತೇವಾಂಶ ಪರಿಸ್ಥಿತಿ ಇರುವ ಸಾಧ್ಯತೆ ಇದೆ. ಅಲ್ಲದೆ ಮುಂದಿನ ಐದು ದಿನಗಳ ವರೆಗೆ ಗರಿಷ್ಠ ತಾಪಮಾನದಲ್ಲಿ ಏರಿಕೆಯ ಪ್ರವೃತ್ತಿಯೊಂದಿಗೆ ದೊಡ್ಡ ಬದಲಾವಣೆಗಳಿಲ್ಲ.

ಬೆಂಗಳೂರು ನಗರದಲ್ಲಿ ಹವಾಮಾನ ಹೇಗಿದೆ

ಇನ್ನು ಬೆಂಗಳೂರಿನಲ್ಲಿ ಬಹುತೇಕ ಶುಭ್ರ ಆಕಾಶವಿದ್ದು, ಸಂಜೆಯ ವೇಳೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಅನುಕ್ರಮವಾಗಿ 35 ಡಿಗ್ರಿ ಸೆಲ್ಸಿಯಸ್ ಹಾಗೂ 24 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+