Karnataka Rain: ಕರ್ನಾಟಕದ ವಿವಿಧ ಭಾಗದಲ್ಲಿ ಮಳೆ ಆರ್ಭಟ: ಈ ಜಿಲ್ಲೆಗಳಲ್ಲಿ ಚಳಿ: ಐಎಂಡಿ ಮುನ್ಸೂಚನೆ
Karnataka Rain: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಕಳೆದ ಒಂದುವಾರದಿಂದಲೂ ಒಣಹವೆ ಮತ್ತು ಚಳಿ ವಾತಾವರಣ ಮುಂದುವರಿದಿತ್ತು. ಇದೀಗ ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಇರಲಿದೆ ಎಂದು ಐಎಂಡಿ ತಿಳಿಸಿದೆ. ಎಲ್ಲೆಲ್ಲಿ ಹಾಗೂ ಎಷ್ಟು ದಿನಗಳ ಕಾಲ ಮಳೆ ಅಬ್ಬರ ಇರಲಿದೆ ಎನ್ನುವ ವಿವರ ಇಲ್ಲಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಆರ್ಭಟ ಇರಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿ ಇರಲಿದ್ದು, ಮಿಂಚು - ಗುಡುಗು ಸಹಿತ ಮಳೆ ಆಗಲಿದೆ. ಗಾಳಿಯ ವೇಗವು ಪ್ರತಿ ಗಂಟೆಗೆ 40ರಿಂದ 60 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಈ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆ: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರಿಯು ಸಾಧ್ಯತೆ ಇದೆ. ಬೀದರ್, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯಪುರ, ಬಾಗಲಕೋಟೆ ಹಾಗೂ ಯಾದಗಿರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಇರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಇನ್ನು ಉಳಿದಂತೆ ಕನಿಷ್ಠ ತಾಪಮಾನದಲ್ಲಿ ರಾಜ್ಯದಾದ್ಯಂತ ದೊಡ್ಡ ಬದಲಾವಣೆ ವರದಿಯಾಗಿಲ್ಲ. ಭಾರೀ ಮಳೆ ಇಲ್ಲದ ಕಾರಣಕ್ಕಾಗಿ ಮೀನುಗಾರರಿಗೂ ಯಾವುದೇ ಮುನ್ಸೂಚನೆ ನೀಡಲಾಗಿಲ್ಲ.
ಬೆಂಗಳೂರಿನಲ್ಲಿ ಹವಾಮಾನ: ಇನ್ನು ಬೆಂಗಳೂರಿನಲ್ಲಿ ಮುಂದಿನ 24 ಗಂಟೆಯ ಅವಧಿಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಡಿಗ್ರಿ ಸೆಲ್ಸಿಯಸ್ ಹಾಗೂ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಇನ್ನು ಮುಂದಿನ 48 ಗಂಟೆ ಅವಧಿಯಲ್ಲೂ ಇದೇ ವಾತಾವರಣ ಮುಂದುವರಿಯಲಿದ್ದು, ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ನವೆಂಬರ್ 17ರಿಂದ ಭಾರೀ ಮಳೆ
ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ ಆರ್ಭಟ ಇರಲಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹೇಳಲಾಗಿದೆ. ಇನ್ನು ದಕ್ಷಿಣ ಕರ್ನಾಟಕದ ವಿವಿಧ ಭಾಗದಲ್ಲಿ ಒಣಹವೆ ಮುಂದುವರಿದಿದ್ದು, ನವೆಂಬರ್ 17ಕ್ಕೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಕೊಡಗು ಹಾಗೂ ಚಿಕ್ಕಮಗಳೂರು ಭಾಗದಲ್ಲಿ ಮಳೆ ಆಗಲಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಭಾಗದಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.












Click it and Unblock the Notifications