Karnataka Weather: ಶೀತಗಾಳಿ ನಡುವೆ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳ ಕೆಲವೆಡೆ ಮಳೆ ಸಾಧ್ಯತೆ
Karnataka Weather: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಮುಂದುವರೆದಿದೆ. ಈ ನಡುವೆಯೇ ಇಂದು (ಜನವರಿ 3) ಕೆಲವೇ ಕ್ಷಣಗಳಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಪ್ರಶ್ನೆಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಜನವರಿ 3) ಬೆಳಗ್ಗೆ ದಟ್ಟ ಮಂಜು, ಚಳಿ ಜೊತೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಮಳೆ ಬೀಳುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಈಗಾಗಲೇ ಕಳೆದ ಎರಡು ದಿನಗಳ ಹಿಂದೆ ಅಂದರೆ ಹೊಸ ವರ್ಷದ ಆರಂಭದಲ್ಲಿ ನಗರದ ಹಲವೆಡೆ ತಂತುರು ಮಳೆಯಾದ ಬಗ್ಗೆ ವರದಿಯಾಗಿದೆ.

ಬೆಂಗಳೂರು ತಾಪಮಾದ ವಿವರ: ಇಂದು ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮತ್ತೊಂದೆಡೆ, ಮುಂದಿನ 2-3 ದಿನಗಳ ಕಾಲ ರಾಜ್ಯದ ಕೆಲವೆಡೆ ತಾಪಮಾನದಲ್ಲಿ ಕುಸಿತ ಆಲಿದ್ದು, ಚಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಈ ನಡುವೆಯೇ ಕೆಲವು ಭಾಗಗಳಲ್ಲಿ ಜನವರಿ 1ರ ಶನಿವಾರ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇದ್ದು, ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ. ಉಳಿದಂತೆ ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಜೊತೆ ಒಣಹವೆ ಮುಂದುವರೆಯಲಿದೆ. ಅದರಲ್ಲೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭೀಕರ ಚಳಿ ಇರಲಿದೆ ಎಂದು ತಿಳಿಸಿದೆ. ಈಗಾಗಲೇ ಭಾರೀ ಚಳಿಯಿಂದ ಈ ಭಾಗಗಳ ಜನರು ತತ್ತರುಸಿ ಹೋಗಿದ್ದಾರೆ.
ಎಲ್ಲೆಲ್ಲಿ ಹೆಚ್ಚು ಚಳಿ?: ಇಂದು (ಜನವರಿ 1) ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರಗಿ,ಬೀದರ್ ಹಾಗೂ ಬಾಗಲಕೋಟೆ ಭಾಗಗಳಲ್ಲಿ ಹೆಚ್ಚು ಚಳಿ ಇರಲಿದೆ. ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ ಮತ್ತು ಬಳ್ಳಾರಿ ಭಾಗಗಳಲ್ಲಿ ಕಡಿಮೆ ಚಳಿ ಇರಲಿದ್ದು, ಮುಂದಿನ 3 ದಿನಗಳಲ್ಲಿ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಮಳೆ?: ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ತುಮಕೂರು, ಮೈಸೂರು, ರಾಮನಗರ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಹಾಸನ, ಚಿಕ್ಕಮಗಳೂರು, ಕೊಡಗು, ವಿಜಯನಗರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಜೊತೆ ಚಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಬಾಗಲಕೋಟೆ, ಬೆಳಗಾವಿ, ಹಾವೇರಿ, ವಿಜಯಪುರ, ಗದಗ, ಕಲಬುರಗಿ, ಧಾರವಾಡ, ಕೊಪ್ಪಳ, ಬಳ್ಳಾರಿ, ರಾಯಚೂರಿನಲ್ಲಿ ಭಾರೀ ಚಳಿ ಮುಂದುವರೆಯಲಿದೆ. ಸದ್ಯ ಈ ಭಾಗಗಳಿಗೆ ಯಾವುದೇ ಮಳೆ ಮುನ್ಸೂಚನೆ ಇರುವುದಿಲ್ಲ. ಮುಂದಿನ ದಿನಗಳಲ್ಲಿ ಈ ಭಾಗಗಳ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಇನ್ನೂ ಕರಾವಳಿ ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ತಿಳಿಸಿದೆ.
ಈಗಾಗಲೇ ಭಾರೀ ಚಳಿಯಿಂದಾಗಿ ಹಲವು ಜಿಲ್ಲೆಗಳಲ್ಲಿ ಬೆಳಗ್ಗೆ 9 ಗಂಟೆಯಾದರೂ ಜನರು ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಬೀದರ್, ಕಲಬುರಗಿ, ರಾಯಚೂರು, ಧಾರವಾಡ ಜಿಲ್ಲೆಗಳಲ್ಲೇ ಹೆಚ್ಚು ಚಳಿ ಮುಂದುವರೆದಿದೆ. ಇನ್ನೂ ಜನವರಿ ತಿಂಗಳಾಂತ್ಯದಲ್ಲಿ ಚಳಿ ಪ್ರಮಾಣ ಕಡಿಮೆಯಾಗಲಿದ್ದು, ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications