ಮಳೆ ಯಾವಾಗ? ಕರ್ನಾಟಕಕ್ಕೆ IMD ಗುಡ್‌ನ್ಯೂಸ್; ಸೆ.12ರಿಂದ ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮಳೆ ( Rain) ಕಾಣೆಯಾಗಿದೆ. ಕೆಲವು ಕಡೆ ಅಲ್ಲಲ್ಲಿ ಸಾಧಾರಣ ಮಳೆ ಆಗುತ್ತಿದೆಯಾದರೂ ಬಹುಪಾಲು ಪ್ರದೇಶದಲ್ಲಿ ಬರ ಪರಿಸ್ಥಿತಿ ನಿರ್ಮಾಣ ಆಗಿದೆ. ಕರ್ನಾಟಕದಲ್ಲಿ ಸದ್ಯ ಮಳೆಯ ಅಬ್ಬರ ಕಡಿಮೆಯಾಗಿದ್ದು, ಮುಂದಿನ ಕೆಲವು ದಿನಗಳಲ್ಲಿ ಹಲವೆಡೆ ಹಗುರ ಮಳೆಯ ಸಾಧ್ಯತೆ ಇದೆ.

ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಸೆಪ್ಟೆಂಬರ್‌ 10 ಮತ್ತು 11ರಂದು ರಾಜ್ಯದ ಮೂರು ಹವಾಮಾನ ವಿಭಾಗಗಳಿಗೂ ಯಾವುದೇ ಎಚ್ಚರಿಕೆ ಇಲ್ಲ. ಆದರೆ ಸೆಪ್ಟೆಂಬರ್‌ 12ರಿಂದ 14ರವರೆಗೆ ದಕ್ಷಿಣ ಒಳನಾಡು ಕರ್ನಾಟಕದಲ್ಲಿ ಗುಡುಗು, ಮಿಂಚು ಹಾಗೂ ಗಾಳಿಯೊಂದಿಗೆ ಮಳೆಯ ಸಾಧ್ಯತೆ ಇದೆ.

Karnataka Weather Rain Likely in South Interior Karnataka From Sep 12 weather change could bring relief

Karnataka Weather:ಹಗುರ ಮಳೆಯ ಮುನ್ಸೂಚನೆ

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವೆಡೆ ಸೆ.11ರಿಂದ ಹಗುರ ಮಳೆಯ ಸಾಧ್ಯತೆ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಸೆ.11ರಿಂದ 15ರವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಹಾಗೂ ಹಗುರ ಮಳೆಯ ಮುನ್ಸೂಚನೆ ನೀಡಲಾಗಿದೆ.

ಇದೇ ವೇಳೆ ರಾಜ್ಯದಲ್ಲಿ ಮಳೆ ಕೊರತೆಯ ಪರಿಸ್ಥಿತಿ ಮುಂದುವರಿದಿದೆ. ಸೆಪ್ಟೆಂಬರ್‌ ಆರಂಭದ ವೇಳೆಗೆ ಕರ್ನಾಟಕದ 31 ಜಿಲ್ಲೆಗಳ ಪೈಕಿ 30 ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ ದಾಖಲಾಗಿದ್ದು, ಹಲವು ತಾಲೂಕುಗಳು ಬರದ ಸ್ಥಿತಿಯನ್ನು ಎದುರಿಸುತ್ತಿವೆ ಎಂದು ವರದಿಯಾಗಿದೆ. ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನಲ್ಲಿ ಸೆ.10ರಿಂದ 15ರವರೆಗೆ ಯಾವುದೇ ಮಳೆ ಎಚ್ಚರಿಕೆ ಇಲ್ಲ ಎಂದು IMD ತಿಳಿಸಿದೆ. ದಕ್ಷಿಣ ಒಳನಾಡಿನಲ್ಲಿ ಮಾತ್ರ ಸೆ.12-14ರಂದು ಗುಡುಗು-ಮಿಂಚಿನ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ.

Karnataka Weather:ಶ್ರೀರಂಗಪಟ್ಟಣದಲ್ಲಿ ಕಪ್ಪೆಗಳ ಮದುವೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಲ ಗ್ರಾಮಗಳಲ್ಲಿ ಮಳೆಗಾಗಿ ಕಪ್ಪೆಗಳ ಮದುವೆ ನೆರವೇರಿಸಲಾಗಿದೆ. ಕಪ್ಪೆಗಳಿಗೆ ಮದುವೆ ಮಾಡಿಸಿದರೆ ವರುಣ ದೇವ ಕೃಪೆ ತೋರಿ ಮಳೆ ಸುರಿಸುತ್ತಾನೆ ಎಂಬ ಸ್ಥಳೀಯ ನಂಬಿಕೆಯ ಹಿನ್ನೆಲೆಯಲ್ಲಿ ಗ್ರಾಮಸ್ಥರು ಈ ಆಚರಣೆಯನ್ನು ನಡೆಸಿದ್ದಾರೆ.

ಮದುವೆ ಸಂಭ್ರಮದ ರೀತಿಯಲ್ಲಿ ಕಪ್ಪೆಗಳನ್ನು ಅಲಂಕರಿಸಿ, ಅವುಗಳಿಗೆ ಪೂಜೆ ಸಲ್ಲಿಸಿ, ಸಂಪ್ರದಾಯಬದ್ಧವಾಗಿ ಮದುವೆ ನೆರವೇರಿಸಲಾಗಿದೆ. ಬಳಿಕ ವರುಣ ದೇವನನ್ನು ಪ್ರಾರ್ಥಿಸಿ, ಮಳೆ ಸುರಿಸುವಂತೆ ಗ್ರಾಮಸ್ಥರು ಬೇಡಿಕೊಂಡಿದ್ದಾರೆ. ಕಪ್ಪೆಗಳ ಮದುವೆಯ ಮೂಲಕ ವರುಣನನ್ನು ಒಲಿಸಿಕೊಂಡು ಮಳೆ ಬರಲಿ, ಒಣಗುತ್ತಿರುವ ಬೆಳೆಗಳಿಗೆ ನೀರು ಸಿಗಲಿ ಎಂಬುದು ಗ್ರಾಮಸ್ಥರ ಆಶಯವಾಗಿದೆ.

ಮಂಡ್ಯದಲ್ಲಿ ಹೋಮ-ಹವನ

ಇತ್ತ ಮಂಡ್ಯ ತಾಲೂಕಿನ ಮತ್ತೊಂದು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪೂಜೆ ಹಾಗೂ ಹೋಮ-ಹವನ ನಡೆಸಲಾಗಿದೆ. ಗ್ರಾಮಸ್ಥರು ಸಾಮೂಹಿಕವಾಗಿ ಸೇರಿ ವರುಣ ದೇವನಿಗೆ ಪೂಜೆ ಸಲ್ಲಿಸಿದ್ದು, ಮಳೆ ಸುರಿದು ಕೃಷಿ ಭೂಮಿಯಲ್ಲಿ ಒಣಗುತ್ತಿರುವ ಬೆಳೆಗಳಿಗೆ ಮತ್ತೆ ಜೀವ ಬರಲಿ ಎಂದು ಪ್ರಾರ್ಥಿಸಿದ್ದಾರೆ.

ಮಂಡ್ಯ ಜಿಲ್ಲೆಯ ಬಹುತೇಕ ಗ್ರಾಮೀಣ ಪ್ರದೇಶಗಳ ಜನರ ಬದುಕು ಕೃಷಿಯನ್ನೇ ಅವಲಂಬಿಸಿದೆ. ಹೀಗಾಗಿ ಮಳೆಯ ಕೊರತೆ ರೈತರಲ್ಲಿ ಆತಂಕವನ್ನು ಹೆಚ್ಚಿಸಿದೆ. ಬಿತ್ತನೆ ಮಾಡಿದ ಬೆಳೆಗಳಿಗೆ ಅಗತ್ಯ ಪ್ರಮಾಣದ ನೀರು ಸಿಗದಿದ್ದರೆ ಇಳುವರಿ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಇದರಿಂದ ರೈತರ ಬದುಕು ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವ ಭೀತಿ ಎದುರಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+