Karnataka Weather: ಕರ್ನಾಟಕದಲ್ಲಿ ಮುಂದುವರಿದ ಮುಂಗಾರು ಆರ್ಭಟ; ಹಲವು ಜಿಲ್ಲೆಗಳಿಗೆ ಮಳೆ-ಗಾಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಆಗಸ್ಟ್‌ 12ರಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಕೆಲವು ಭಾಗಗಳಲ್ಲಿ ಗಂಟೆಗೆ 30ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ರಾಜ್ಯಾದ್ಯಂತ ಬಿಸಿಲಿನ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಇದರ ನಡುವೆ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಮಳೆಯ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆಯೂ ಇದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಬೀದರ್, ಕಲಬುರಗಿ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಕೊಪ್ಪಳ, ಬಾಗಲಕೋಟೆ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ ಎನ್ನಲಾಗಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಮಳೆಯೊಂದಿಗೆ ಕೆಲವು ಜಿಲ್ಲೆಗಳಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ. ಮಳೆ ಹಾಗೂ ಗಾಳಿ ಹೆಚ್ಚಾದ ಸಂದರ್ಭದಲ್ಲಿ ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಸಮೀಪ ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ. ಅಗತ್ಯವಿದ್ದಲ್ಲಿ ಮಾತ್ರ ಪ್ರಯಾಣಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಲಾಗಿದೆ.

ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಪ್ರತಿದಿನ ಸಂಜೆ ಮಳೆಯಾಗುತ್ತಿದ್ದು, ರಭಸದ ಮಳೆ ಮಾತ್ರ ಕಂಡುಬಂದಿಲ್ಲ. ಮುಂದಿನ 48 ಗಂಟೆಗಳಲ್ಲೂ ಇದೇ ರೀತಿಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮಧ್ಯಮ ಪ್ರಮಾಣದಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಮಳೆಯೊಂದಿಗೆ ಬೆಂಗಳೂರಿನಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ನಗರದಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಮುನ್ಸೂಚನೆ ತಿಳಿಸಿದೆ.

ರಾಜ್ಯದಲ್ಲಿ ಮುಂಗಾರು ಕಣ್ಣಾಮುಚ್ಚಾಲೆ

ಈ ವರ್ಷದ ಮುಂಗಾರು ಆರಂಭದಿಂದಲೂ ರಾಜ್ಯ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಏರಿಳಿತ ಕಂಡುಬರುತ್ತಿದೆ. ಜೂನ್‌ನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದರೆ, ಜುಲೈನಲ್ಲಿ ಸಾಮಾನ್ಯ ಪ್ರಮಾಣದ ಮಳೆಯಾಗಿದೆ. ಆದರೆ ಆಗಸ್ಟ್‌ನಲ್ಲಿ ಮತ್ತೆ ಮುಂಗಾರು ದುರ್ಬಲಗೊಂಡಿದೆ.

ಮುಂದಿನ 15 ದಿನಗಳ ಕಾಲ ದೇಶದ ಪಶ್ಚಿಮ, ಮಧ್ಯ ಹಾಗೂ ದಕ್ಷಿಣ ಭಾಗಗಳಲ್ಲಿ ಮುಂಗಾರು ದುರ್ಬಲವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರಿಂದ ಮಳೆಯನ್ನೇ ನಂಬಿ ಈಗಾಗಲೇ ಬಿತ್ತನೆ ಮಾಡಿರುವ ರೈತರ ಬೆಳೆಗಳ ಮೇಲೆ ಪರಿಣಾಮ ಬೀರುವ ಆತಂಕವೂ ಎದುರಾಗಿದೆ.

ಜೂನ್‌ 1ರಿಂದ ಆರಂಭವಾದ ಪ್ರಸಕ್ತ ಮುಂಗಾರು ಋತುವಿನಲ್ಲಿ ದೇಶಾದ್ಯಂತ ಸರಾಸರಿಗಿಂತ ಸುಮಾರು 12% ಕಡಿಮೆ ಮಳೆಯಾಗಿದೆ. ದಕ್ಷಿಣ ಆಂಧ್ರಪ್ರದೇಶ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಮಳೆ ಕೊರತೆ 34% ರಷ್ಟಿದೆ ಎಂದು ವರದಿಯಾಗಿದೆ.

ಮುಂದಿನ ದಿನಗಳಲ್ಲಿ ಎಲ್‌ ನಿನೊ ಪರಿಣಾಮ ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಮಳೆಯ ಪ್ರಮಾಣ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆಯಿದೆ. ಹೀಗಾಗಿ ಮುಂಗಾರು ಅವಧಿ ಮುಗಿಯುವ ಮುನ್ನ ಮಳೆ ಕೊರತೆ ಹೆಚ್ಚಾಗುವ ಆತಂಕವೂ ಇದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+