Karnataka Rain Alert: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದುವರೆದ ಮಳೆ: ಎಲ್ಲೆಲ್ಲಿ ಇಲ್ಲಿದೆ ಮಾಹಿತಿ

ಬೆಂಗಳೂರು, ಜನವರಿ11: ಕರ್ನಾಟಕದಾದ್ಯಂತ ಇಬ್ಬನಿ ಮೋಡ ಹಾಗೂ ಚಳಿಯ ವಾತಾವರಣ ಹೆಚ್ಚಾಗಿದೆ. ಇದರ ನಡುವೆ ರಾಜ್ಯದ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಜನವರಿ 11 ರಂದು ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯು ಮಾಹಿತಿ ನೀಡಿದೆ.

ಹೌದು, ಐದಾರು ದಿನಗಳಿಂದ ದುರಿಯುತ್ತಿದ್ದ ಮಳೆ ಕಡಿಮೆಯಾಗಿದ್ದು, ಕೆಲವೇ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳ ಗುರುವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: Rain Very Likely To Occur At Coastal And South Interior Karnataka

ಇನ್ನೂ ಕೋಟ, ಧರ್ಮಸ್ಥಳ, ಸುಳ್ಯ, ಮಂಗಳೂರು, ಹೊನ್ನಾವರ, ಗೋಕರ್ಣ, ಗೇರುಸೊಪ್ಪ, ತಾಳಗುಪ್ಪ, ತ್ಯಾಗರ್ತಿ, ಗೋಕರ್ಣ, ಉಡುಪಿ, ಕಮ್ಮರಡಿ, ಕೊಪ್ಪ, ಕುಮಟಾ, ಮಂಕಿ, ಮಂಗಳೂರು ವಿಮಾನ ನಿಲ್ದಾಣ, ಬೆಳ್ತಂಗಡಿ, ಪಣಂಬೂರು, ಮೂಲ್ಕಿ, ಉಪ್ಪಿನಂಗಡಿ, ಪುತ್ತೂರಿನಲ್ಲಿ ಮಳೆಯಾಗಿದೆ. ಅಲ್ಲದೇ ಬಾಗಲಕೋಟೆ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+