Karnataka Weather: ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಕಂಟಿನ್ಯೂ, ಹೀಗಿದೆ ಇಂದಿನ ಹವಾಮಾನ ವರದಿ

Karnataka Weather: ಇದೀಗ ಮುಂಗಾರು ಸಮಯ ಆಗಿದ್ದರೂ ಸಹ ರಾಜ್ಯದಲ್ಲಿ ಮಳೆ ಕ್ಷೀಣಿಸಿದೆ. ಇನ್ನೂ ಗುರುವಾರ (ಜುಲೈ 16) ಕೆಲವೇ ಕೆಲವು ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದ್ದು, ಉಳಿದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವೇ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನ ಕೆಲವೆಡೆ ಗುರುವಾರ (ಜುಲೈ 16) ಬೆಳಗ್ಗೆಯೇ ಸೂರ್ಯದೇವ ಎಂಟ್ರಿ ಕೊಟ್ಟಿದ್ದಾನೆ, ಯಾವುದೇ ಮೋಡ ಕವಿದ ವಾತಾವರಣ ಇಲ್ಲ. ನಗರದಲ್ಲಿ ಇಡೀ ದಿನ ಬಿಸಿಲಿನ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ ಎರಡು ವಾರಗಳಿಂದ ಇದೇ ರೀತಿ ಮುಂದುವರೆದುಕೊಂಡು ಬಂದಿದೆ.

Karnataka Weather Rain Weakens Across State Sunny Weather to Continue IMD Forecast of July 16

ಬೆಂಗಳೂರಿನಲ್ಲಿ ತಾಪಮನ ಹೆಚ್ಚಳ

ಬೆಂಗಳೂರಿನಲ್ಲಿ ಇಂದು (ಜುಲೈ 16) ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲೂ ಕೂಡ ಬಿಸಿಲಿನ ವಾತಾವರಣವೇ ಮುಂದುವರೆಯಲಿ ಎಂದು ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಕಂಟಿನ್ಯೂ

ಕಳೆದ ಎರಡು ವಾರಗಳಿಂದ ಬೆಂಗಳೂರು ಸೇರಿ ರಾಜ್ಯದ ಕೆಲವೇ ಕೆಲವು ಭಾಗಗಳ ಅಲ್ಲಲ್ಲಿ ಮಾತ್ರ ಮಳೆಯಾಗುತ್ತಿದೆ. ಇದನ್ನ ಹೊರತುಪಡಿಸಿದರೆ ಬಹುತೇಕ ಕಡೆಗಳಲ್ಲಿ ಬಿಸಿಲಿನ ವಾತಾವರಣವೇ ಮುಂದುವರೆದಿದೆ. ಹಾಗಯೇ ಇಂದು ಸಹ ಇದೇ ರೀತಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಉತ್ತರ ಒಳನಾಡಿನ ಜಿಲ್ಲೆಗಲ್ಲಿ ತಾಪಮಾನ ಪ್ರಮಾಣದಲ್ಲಿ ಏರಿಕೆ ಆಗಲಿದೆ ಅಂತಲೂ ತಿಳಿಸಿದೆ.

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆ ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಭಾರಿ ಮುಂದುವರೆದಿತ್ತು. ಆದರೆ ಇದೀಗ ಇಲ್ಲಿನ ಬಹುತೇಕ ಭಾಗಗಳಲ್ಲಿ ಮಳೆರಾಯನ ಆರ್ಭಟ ತಗ್ಗಿದ್ದು, ಕೆಲವೆಡೆ ಮಾತ್ರ ತುಂತುರು ಹನಿಯಂತೆ ಮಳೆ ಬೀಳುತ್ತಿದೆ. ಇಂದು ಈ ಭಾಗಗಳಿಗೆ ಯಾವುದೇ ಮಳೆಯ ಮುನ್ಸೂಚನೆ ಇರುವುದಿಲ್ಲ ಎಂದು ತಿಳಿಸಿದೆ.

ಉಳಿದಂತೆ ದಕ್ಷಿಣ ಒಳನಾಡಿದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ ಚಾಮರಾಜನಗರ, ಹಾಸನ, ಚಿತ್ರದುರ್ಗ, ದಾವಣಗೆರೆ, ರಾಮನಗರ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ಗದಗ, ಧಾರವಾಡ ಜಿಲ್ಲೆಗಳಲ್ಲೂ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರೈತರು, ಜನರಿಗೆ ಆತಂಕ ಶುರು

ಈಗಾಗಲೇ ಕೆಲವೆಡೆ ಸುರಿದ ಭಾರಿ ಮಳೆಯಿಂದಾಗಿ ಪ್ರಮುಖ ಜಲಾಶಯಗಳ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿತ್ತು. ಆದರೆ ಇದೀಗ ಮತ್ತೆ ಬಿಸಿಲಿನ ವಾತಾವರಣ ಮುಂದುವರೆದ ಪರಿಣಾಮ ಕೆಲವು ಪ್ರಮುಖ ಡ್ಯಾಂಗಳ ನೀರಿನ ಮಟ್ಟ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಲಿದೆ. ಇದರಿಂದ ಅನ್ನದಾತರು ಹಾಗೂ ಜನರಲ್ಲಿ ಆತಂಕ ಶುರುವಾಗಿದೆ.

ಮಳೆ ತಗ್ಗಲು ಪ್ರಮುಖ ಕಾರಣ ಏನು?

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಮತ್ತೆ ಕೈಕೊಟ್ಟಿದ್ದು, ಕೃಷಿಕರು, ಜನರಲ್ಲಿ ಆತಂಕ ಮನೆ ಮಾಡಿದೆ. ಈಗಲೇ ಹೀಗೆ ಆದ್ರೆ ಮುಂಗಾರು ಅವಧಿ ಮುಗಿದ ಮೇಲೆ ಇನ್ನೇನು ಗತಿ ಕಾದಿದೆಯೋ ಎನ್ನುವ ಆತಂಕದಲ್ಲಿದ್ದಾರೆ. ಈ ನಡುವೆಯೇ ಇತ್ತೀಚೆಗಷ್ಟೇ ಹವಾಮಾನ ಇಲಾಖೆ ಆತಂಕದ ವಿಚಾರ ಹೊರಹಾಕಿದ್ದು, ಎಲ್‌ ನಿನೊ ಎಫೆಕ್ಟ್‌ ಕಾರಣ ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಈ ಬಾರಿ ಮಳೆಯ ಪ್ರಮಾಣ ಕಡಿಮೆ ಇರಲಿದೆ ಎಂದು ಎಚ್ಚರಿಕೆ ನೀಡಿದೆ.

ಇದು ಮುಂಗಾರು ಸಮಯವಾಗಿದ್ದು, ಇಷ್ಟೊತ್ತಿಗಾಗಲೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗಬೇಕಿತ್ತು. ಆದರೆ ವಾಡಿಕೆಯಷ್ಟು ಕೂಡ ಮಳೆ ಸುರಿಯುತ್ತಿಲ್ಲ. ಇದು ಚಿಂತೆಗೆ ಒಳಗಾಗುವಂತೆ ಮಾಡಿದೆ. ಒಟ್ಟಿನಲ್ಲಿ ಹೇಳುವುದಾದರೆ ಮಳೆರಾಯನ ಆರ್ಭಟ ಮತ್ತೆ ಯಾವಾಗ ಶುರುವಾಗಲಿದೆಯೋ ಎಂದು ರಾಜ್ಯದ ರೈತರು ಹಾಗೂ ಜನ ಮೋಡದ ಕಡೆ ಮುಖ ಮಾಡಿ ನೋಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಕೆಲವೆಡೆ ನೀರಿನ ಅಭಾವ ಎದುರಾಗಿರುವ ಘಟನೆಗಳು ಕೂಡ ನಡೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+