Karnataka Weather: ರಾಜ್ಯದ ಹಲವೆಡೆ ಮೂರು ದಿನ ಮಳೆ; ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಮುನ್ಸೂಚನೆ

Karnataka Weather: ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಮರೆಯಾಗಿದ್ದು, ಬಿಸಿಲ ಧಗೆ ಹೆಚ್ಚಾಗುತ್ತಿದೆ. ಈ ನಡುವೆಯೂ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮೂರು ದಿನಗಳ ಕಾಲ ದಕ್ಷಿಣ ಒಳನಾಡಿದ ಹಲವೆಡೆ, ಕರಾವಳಿ ಜಿಲ್ಲೆಗಳ ಹಲವೆಡೆ ತಾಪಮಾನ ಹೆಚ್ಚಳದ ನಡುವೆಯೂ ಕೆಲವೆಡೆ ಮಳೆ ಸುರಿಯುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಮಾರ್ಚ್ 05) ಬೆಳಗ್ಗೆ ಮೋಡ ಕವಿದ ವಾತಾವರಣ ಇದ್ದು, ಬೆಳಗ್ಗೆ 8ರಿಂದ ಬಿಸಿಲಿನ ವಾತಾವರಣ ಮುಂದುವರೆಯಲಿದೆ. ಬಹುತೇಕ ಜಿಲ್ಲೆಗಳಲ್ಲೂ ಕೂಡ ಹೀಗೆ ರಣಬಿಸಿಲು ಮುಂದುವರೆಯಲಿದ್ದು, ಕಲವೆಡೆ ಮಾತ್ರ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

Karnataka Weather Rainfall Forecast for in Many districts of state for Next Three days

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನಪ ಪ್ರಮಾಣ ಏರಿಕೆಯಾಗುತ್ತಲೇ ಇದೆ. ಕರಾವಳಿ ಭಾಗದಲ್ಲಿ ಏರಿಳಿತ ಆಗುತ್ತಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಮತ್ತೆ ಹೆಚ್ಚಳ ಆಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್‌ ಸಮೀಪಕ್ಕೆ ಬಂದಿದೆ ಎಂದು ತಿಳಿಸಿದೆ.

ಕಳೆದ ಎರಡ್ಮೂರು ವಾರಗಳಿಂದ ಕರಾವಳಿ ಜಿಲ್ಲೆಗಳಲ್ಲೂ ಕೂಡ ತಾಪಮಾನ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಲೇ ಇದೆ. ಇಂದು ಕೂಡ ಏರಿಕೆಯಾಗುವ ಸಾಧ್ಯತೆಯಿದೆ. ಇನ್ನು ಕಲಬುರಗಿಯಲ್ಲೂ ಕೂಡ ತಾಪಮಾನ ಹೆಚ್ಚಾಗಿದ್ದು, ವಿಜಯಪುರ, ಗದಗ, ಬಾಗಲಕೋಟೆ, ಚಿತ್ರದುರ್ಗ ಸೇರಿ ಹಲವೆಡೆ 36 ಡಿಗ್ರಿ ಸೆಲ್ಸಿಯಸ್‌ಗೂ ಹೆಚ್ಚಿನ ಪ್ರಮಾಣದಲ್ಲಿ ತಾಪಮಾನ ದಾಖಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗುವ ಮುನ್ಸೂಚನೆ ನೀಡಿದೆ.

ಕಾರವಾರ, ಬೆಳಗಾವಿ, ಚಿತ್ರದುರ್ಗ ಸೇರಿದಂತೆ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 35 ಡಿಗ್ರಿ ಸೆಲ್ಸಿಯಸ್‌ಗೂ ಹೆಚ್ಚಿನ ಪ್ರಮಾಣದಲ್ಲಿ ತಾಪಮಾನ ದಾಖಲಾಗುತ್ತಿದೆ. ಹಾಗೆಯೇ ಮುಂದಿನ ದಿನಗಳಲ್ಲಿ ರಾಜ್ಯದ ಹಲವೆಡೆ ತಾಪಮಾನದಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆಯೂ ಕೆಲವೆಡೆ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡದ ಹಲವೆಡೆ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಒಳನಾಡು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಒಳಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಒಳನಾಡಿದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯಾವುದೇ ಮಳೆ ಮುನ್ಸೂಚನೆ ಇರುವುದಿಲ್ಲ. ಬದಲಾಗಿ ಒಳಹವೆ ಮುಂದುವರೆಯಲಿದೆ. ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ,
ಗದಗ್‌, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎನ್ನುವ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೇಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಇದೇ ರೀತಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+