Karnataka weather: ಭಾರೀ ಚಳಿಯ ನಡುವೆಯೂ ರಾಜ್ಯದ ಈ ಭಾಗಗಳಲ್ಲಿ ಮಳೆ ಮುನ್ಸೂಚನೆ, ಎಲ್ಲೆಲ್ಲಿ?
ಕರ್ನಾಟಕ, ಜನವರಿ, 14: ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬೆಳಗ್ಗೆ 10 ಗಂಟೆಯಾದರೂ ಮಂಜು ಮುಚಿಕೊಳ್ಳುವುದರ ಜೊತೆ ಚಳಿಯ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಇದರ ನಡುವೆಯೂ ಕೆಲವು ಜಿಲ್ಲೆಗಳಲ್ಲಿ ಆಗಾಗ ಜಿನುಗು ಮಳೆಯಾಗುತ್ತಿದೆ. ಹಾಗೆಯೇ ಈ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಳ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.
ರಾಜ್ಯದ ಬಹುತೇ ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ಚಳಿಯ ವಾತಾವರಣ ಹೆಚ್ಚಾಗುತಲಿದ್ದು, ಈ ಹಿನ್ನೆಲೆ ಜನರು ಬೆಳಗ್ಗೆ 10 ಗಂಡೆಯಾದರೂ ಸಹ ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಕರಾವಳಿ ಮತ್ತು ದಕ್ಷಿಣ ಒಳನಾಡಿಗಿಂತ ಉತ್ತರ ಒಳನಾಡಿನಲ್ಲಿ ಕೆಲವೊಂದು ಕಡೆಗಳಲ್ಲಿ ಚಳಿ ಪ್ರಭಾವ ಹೆಚ್ಚಿರಲಿದ್ದು, ಈ ಜಿಲ್ಲೆಗಳ ಇನ್ನು ಕೆಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಮತ್ತೊಂದೆಡೆ ಬೆಂಗಳೂರು ಹವಾಮಾನ ಕೇಂದ್ರದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಎಲ್ಲಿಯೂ ಕೂಡ ಮಳೆ ಬೀಳುವ ಮುನ್ಸೂಚನೆಯಿಲ್ಲ. ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿದಿದೆ. ಇನ್ನು ಮಳೆಯ ಭಾರೀ ಮಳೆಯ ಮುನ್ಸೂಚನೆ ಇಲ್ಲದಿದ್ದರಿಂದ ಎಂದಿನಂತೆ ಮೀನುಗಾರಿಕೆ ನಡೆಸಬಹುದಾಗಿದೆ.
ಮುಂದಿನ ಮೂರು ದಿನಗಳ ಕಾಲ ಚಳಿಯ ವಾತಾವರಣ ತುಸು ಹೆಚ್ಚಿರಲಿದೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ 3.1 ಡಿಗ್ರಿ ಸೆಲ್ಸಿಯಸ್‌ಗಿಂತ 5 ಡಿಗ್ರಿ ಸೆಲ್ಸಿಯಸ್‌ವರೆಗೆ ಹೆಚ್ಚಾಗಿರಲಿದೆ. ವಿಜಯಪುರ ಮತ್ತು ಬಾಗಲಕೋಟೆಯಲ್ಲಿಇಂದು ಕೂಡ ಅತಿ ಕಡಿಮೆ ಉಷ್ಣಾಂಶ 13.5 ಡಿಗ್ರಿ ಸೆಲ್ಸಿಯಸ್ ಮುಂದುವರೆಯುವ ಮುನ್ಸೂಚನೆ ಇದೆ.
ಬೆಂಗಳೂರಿನಲ್ಲಿ ಇಂದು (ಜನವರಿ 14) ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಾಗೆಯೇ ನಾಳೆಯೂ (ಜನವರಿ 15) ಕೂಡ ಇದೇ ಪರಿಸ್ಥಿತಿ ಮುಂದುವರೆಯಲಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲು ಆಗಲಿದೆ ಎನ್ನುವ ಮುನ್ಸೂಚನೆ ಇದೆ.
ರಾಜ್ಯದ ಕರಾವಳಿ ಜಿಲ್ಲೆಗಳು ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರದಲ್ಲಿ ವಾರ್ಷಿಕ ಸರಾಸರಿ 711.5 ಮಿಲಿ ಮೀಟರ್ ಮಳೆಯಾಗುತ್ತದೆ ಎನ್ನುವ ವರದಿಯಿದೆ.
ಇನ್ನು ಕೇರಳ, ತಮಿಳುನಾಡು, ಕರ್ನಾಟಕದ ಕರವಾಳಿಯ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ.












Click it and Unblock the Notifications