Karnataka Weather: ತಂಡಿ ನಡುವೆಯೂ ರಾಜ್ಯದ ಕೆಲವೇ ಜಿಲ್ಲೆಗಳಿಗೆ ಮಳೆ ಮನ್ಸೂಚನೆ
ಕರ್ನಾಟಕ, ಜನವರಿ, 17: ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಹೆಚ್ಚಾಗುತ್ತಿದ್ದು, ಜೊತೆಗೆ ಮಂಜು ಮುಚ್ಚಿದ ವಾತವಾರಣ ನಿರ್ಮಾಣವಾಗುತ್ತಿದೆ. ಇನ್ನು ಕೆಲವೇ ಜಿಲ್ಲೆಗಳಲ್ಲಿ ಮಾತ್ರ ಮೋಡ ವಾತಾವರಣ ನಿರ್ಮಾಣವಾಗುತ್ತಿದ್ದು, ಮಳೆಯ ಮುನ್ಸೂಚನೆಯನ್ನು ನೀಡುವಂತಿರುತ್ತದೆ. ಹಾಗೆಯೇ ಇಂದಿನಿಂದ ಎರಡು ದಿನಗಳ ಕಾಲ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎನ್ನುವ ಮಾಹಿತಿ ಇದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ ಗಂಟೆ 10 ಆದರೂ ಮಂಜು ಮುಚ್ಚಿದ ವಾತಾವರಣದ ಜೊತೆ ಚಳಿಯ ಪ್ರಯಾಣ ಹೆಚ್ಚಿರಲಿದೆ. ಮತ್ತೊಂದೆಡೆ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಕಡಿಮೆ ಆಗಿದೆ. ಇನ್ನು ಇಂದು (ಜನವರಿ 17) ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲು ಆಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ರಾಜ್ಯದ ಕೆಲವೆಡೆ ಮಾತ್ರ ಇಂದಿನಿಂದ ಎರಡು ದಿನಗಳ ಕಾಲ ಮಳೆಯ ಮುನ್ಸೂಚನೆ ಇದೆ. ಮತ್ತೊಂದೆಡೆ ಯಾವ್ಯವ ಬಿಸಿಲಿನ ತಾಪಮಾನದ ಪ್ರಮಾಣ ಕಡಿಮೆಯಾಗುತ್ತಲಿದೆ. ಇನ್ನು ಯಾವ್ಯಾವ ಜಿಲ್ಲೆಗಳಲ್ಲಿ ಜನವರಿ 16ರಂದು ಎಷ್ಟು ತಾಪಮಾನ ದಾಖಲಾಗಿತ್ತು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಯಾವ್ಯಾವ ಜಿಲ್ಲೆಗಳಲ್ಲಿ ಎಷ್ಟು ತಾಪಮಾನ?
ಇನ್ನು ನಿನ್ನೆ (ಜನವರಿ 16) ಹೊನ್ನಾವರದಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಂಗಳೂರಿನಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಳಗಾವಿಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಧಾರವಾಡದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಿಕ್ಕಮಗಳೂರಿನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಡ್ಯದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮೈಸೂರಿನಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ವಿಜಯಪುರದಲ್ಲಿ 12.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್ಎಎಲ್ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲು ಆಗಿದೆ ಎಂದು ತಿಳಿದುಬಂದಿದೆ.












Click it and Unblock the Notifications