Karnataka weather: ಮೈಕೊರೆಯುವ ಚಳಿಯ ನಡುವೆಯೂ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ
ಕರ್ನಾಟಕ, ಜನವರಿ, 16: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ಚಳಿಯ ಪ್ರಮಾಣ ಏರಿಕೆ ಆಗುತ್ತಲೇ ಇದೆ. ಇದರ ನಡುವೆಯೂ ಕೆಲವೇ ಜಿಲ್ಲೆಗಳಲ್ಲಿ ಮಾತ್ರ ಮೋಡ ಕವಿದ ವಾತಾವರಣ ನಿರ್ಮಾಣವಾಗುತ್ತಿದ್ದು, ಇದು ಮಳೆಯ ಮುನ್ಸೂಚನೆಯನ್ನು ತೋರುತ್ತಿದೆ. ಹಾಗೆಯೇ ಈ ಜಿಲ್ಲೆಗಳಲ್ಲಿ ಇಂದು ಕೂಡ ಮೋಡ ಕವಿದ ವಾತಾವರಣ ಇರಲಿದ್ದು, ಮಳೆ ಬೀಳುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.
ರಾಜ್ಯದ ಈಗಾಗಲೇ ಮಳೆಯ ತೀವ್ರತೆ ಕಡಿಮೆ ಆಗಿದೆ. ಇಂದು (ಜನವರಿ 16) ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಪಮಾನ ದಾಖಲೆಯ ವಿವರ: ಇನ್ನು ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲು ಆಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲು ಆಗಲಿದೆ ಎನ್ನುವ ಮುನ್ಸೂಚನೆ ಇದೆ.












Click it and Unblock the Notifications